More

    ಎಸ್​​ಎಸ್​ಎಲ್​ಸಿ ಪರೀಕ್ಷೆ ಬರೆಯಲು ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಿ: ಅಧಿಕಾರಿಗಳಿಗೆ ಸುರೇಶ್ ಕುಮಾರ್ ಸೂಚನೆ

    ಬೆಂಗಳೂರು: ಮುಂದಿನ ದಿನಗಳಲ್ಲಿ ನಡೆಸಲಿರುವ ಎಸ್​​ಎಸ್​ಎಲ್​ಸಿ ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳು ಮತ್ತು ಪಾಲಕರರಲ್ಲಿ ಆತ್ಮವಿಶ್ವಾಸ ಮೂಡಿಸುವ ಕ್ರಮಗಳನ್ನು ಕೈಗೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಎಸ್​​ಎಸ್​ಎಲ್​ಸಿ ಪರೀಕ್ಷೆಯ ಸಿದ್ಧತೆ ಕುರಿತು ಚರ್ಚಿಸಲು ಸಚಿವರು ಬುಧವಾರ ಇಲಾಖೆಯ ಅಧಿಕಾರಿಗಳ ಜತೆಗೆ ವೀಡಿಯೋ ಸಂವಾದ ನಡೆಸಿ ಸೂಚನೆ ನೀಡಿದ್ದಾರೆ. ಈ ಬಾರಿ ಬದಲಾಗಿರುವ ಪರೀಕ್ಷೆ ಪದ್ಧತಿಯ ಬಗ್ಗೆ ಮಕ್ಕಳಿಗೆ ಶಿಕ್ಷಕರಿಗೆ ಅರಿವು ಮೂಡಿಸಬೇಕು. ಎಲ್ಲದಕ್ಕಿಂತ ಮುಖ್ಯವಾಗಿ ಈ ಪರೀಕ್ಷೆಗಳನ್ನು ಕರೊನಾ ಸೋಂಕು ಹತೋಟಿಗೆ ಬಂದ ನಂತರವೇ ನಡೆಸಲಾಗುವುದು ಎಂಬ ಭರವಸೆಯನ್ನು ಮಕ್ಕಳು ಮತ್ತು ಪಾಲಕರಲ್ಲಿ ಮೂಡಿಸಬೇಕೆಂದು ಸೂಚಿಸಿದ್ದಾರೆ.

    ಈ ವಾರಾಂತ್ಯಕ್ಕೆ ಮಾದರಿ ಪ್ರಶ್ನೆ ಪತ್ರಿಕೆಗಳು ಎಲ್ಲ ಶಾಲೆಗಳಿಗೆ ಆಯಾ ಬಿಇಒ ಕಚೇರಿಗಳ ಮೂಲಕ ತಲುಪಲಿವೆ. ಮಕ್ಕಳಿಗೆ ಒಎಂಆರ್ ಶೀಟ್ ರೂಪದಲ್ಲಿರುವ ಪ್ರಶ್ನೆ ಪತ್ರಿಕೆಗಳಿಗೆ ಹೇಗೆ ಉತ್ತರಿಸಬೇಕೆಂದು ಕುರಿತು ಶಿಕ್ಷಕರು ಸಲಹೆ ನೀಡಬೇಕು. ಈಗಾಗಲೇ ಹಲವಾರು ಜಿಲ್ಲೆಗಳಲ್ಲಿ ಅಧಿಕಾರಿಗಳು ಮತ್ತು ಶಿಕ್ಷಕರು ವಿವಿಧ ರೀತಿಯಲ್ಲಿ ಮಕ್ಕಳಿಗೆ ಪರೀಕ್ಷೆ ಕುರಿತು ಮಕ್ಕಳಲ್ಲಿ ಅತ್ಮವಿಶ್ವಾಸ ತುಂಬುವ ಕೆಲಸ ಮಾಡುತ್ತಿದ್ದಾರೆ. ಇಂತಹ ಉಪಯುಕ್ತ ಮತ್ತು ಉತ್ತಮ ನಡೆಯನ್ನು ಉಳಿದ ಜಿಲ್ಲೆಗಳೂ ಅನುಸರಿಸಬೇಕೆಂದು ಸುರೇಶ್ ಕುಮಾರ್ ಹೇಳಿದ್ದಾರೆ.

    ಕರೊನಾ ಲಸಿಕೆ ಪಡೆದ ಶಿಕ್ಷಕರನ್ನೇ ಕೊಠಡಿ ಮೇಲ್ವಿಚಾರಕಾಗಿ ನೇಮಿಸಿಕೊಳ್ಳಬೇಕಾಗಿರುವುದರಿಂದ ಶಿಕ್ಷಕರಿಗೆ ಲಸಿಕೆ ನೀಡಲು ಕ್ರಮವಹಿಸುವಂತೆ ಈಗಾಗಲೇ ಇಲಾಖೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಬಗ್ಗೆ ಕಲಬುರಗಿ, ಧಾರವಾಡ ಅಪರ ಆಯುಕ್ತರು ವಿಶೇಷ ಗಮನಹರಿಸಿ ಲಸಿಕೆ ಪಡೆದ ಶಿಕ್ಷಕರನ್ನೇ ಮೇಲ್ವಿಚಾರಕರನ್ನಾಗಿ ನೇಮಿಸಬೇಕೆಂದು ಸಚಿವರು ಸೂಚಿಸಿದರು.

    ಮಕ್ಕಳ ಅನುಕೂಲಕ್ಕಾಗಿ ತಾವು ನೆಲೆಸಿರುವ ಸ್ಥಳದಲ್ಲೇ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಮಾಡಿಕೊಳ್ಳಬೇಕು. ಈ ಬಾರಿ ಕಳೆದ ಬಾರಿಗಿಂತ 30 ಸಾವಿರ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಯನ್ನು ಸುರಕ್ಷತೆಯಿಂದ ನಡೆಸಲು ಎಲ್ಲರೂ ಸಹಕಾರ ನೀಡಬೇಕು. ಪರೀಕ್ಷೆಯೊಳಗೆ ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಿ ಪರೀಕ್ಷಾ ಸಿದ್ಧತೆ ಪರಿಶೀಲಿಸಲು ಖುದ್ದಾಗಿ ಭೇಟಿ ನೀಡುವ ಚಿಂತನೆ ಇದೆ.

    ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳ ಜತೆಗೆ ಸಭೆ ನಡೆಸುವುದಾಗಿ ಸಚಿವರು ತಿಳಿಸಿದರು.

    ಈ ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ.ಅನ್ಬುಕುಮಾರ್, ಕಲಬುರಗಿ ಅಪರ ಆಯುಕ್ತರಾದ ನಳಿನ್ ಅತುಲ್, ಧಾರವಾಡ ಅಪರ ಆಯುಕ್ತ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ಭಾಗವಹಿಸಿದ್ದರು.

    ನಾಳೆಯೇ ಅನ್‌ಲಾಕ್ ಬಗ್ಗೆ ನಿರ್ಧಾರ? ಮೊದಲ ಹಂತದಲ್ಲಿ ಯಾವುದಕ್ಕೆ ಸಿಗಲಿದೆ ರಿಲೀಫ್?

    16 ವರ್ಷದ ಬಾಲಕಿಗೆ ಕಾಮೋತ್ತೇಜಕ ನೀಡಿ 8 ವರ್ಷಗಳ ಕಾಲ ರೇಪ್​ ಮಾಡಿದ ಕಾಮುಕ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts