More

    ಆತ್ಮವಿಶ್ವಾಸದೊಂದಿಗೆ ಪರೀಕ್ಷೆ ಬರೆಯಿರಿ: ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಧೈರ್ಯ ಹೇಳಿದ ಸಚಿವ ಸುರೇಶ್​ ಕುಮಾರ್​

    ಬೆಂಗಳೂರು: ದೇಶ ಮತ್ತು ರಾಜ್ಯದಲ್ಲಿ ಕರೊನಾ ಭೀತಿ ಹೆಚ್ಚಾಗಿರುವ ಕಾರಣ ಅನೇಕ ರೀತಿಯ ಮುಂಜಾಗೃತಾ ಕ್ರಮಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೆಗೆದುಕೊಂಡಿವೆ. ಶಾಲಾ ಕಾಲೇಜುಗಳಲ್ಲಿ ವೈರಸ್​ ತಡೆಗಟ್ಟುವಿಕೆಗೆ ಅನೇಕ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು, ಇನ್ನು ಕೆಲ ದಿನಗಳಲ್ಲೇ ಆರಂಭವಾಗಲಿರುವ ದ್ವಿತೀಯ ಪಿಯು ಪರೀಕ್ಷೆಯನ್ನು ಯಾವುದೇ ಭಯವಿಲ್ಲದೆ ಧೈರ್ಯವಾಗಿ ಬರೆಯಿರಿ ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಹೇಳಿದ್ದಾರೆ.

    “ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಿಮ್ಮ ವಿಶ್ವಾಸಕ್ಕೆ‌ ಧಕ್ಕೆ ಬರದ ರೀತಿಯಲ್ಲಿ ನಿರ್ವಹಿಸಿದೆ. ನಿಮಗೆ ಪಾಠ ಮಾಡಿದ ಉಪನ್ಯಾಸಕರೇ ನಿಮ್ಮ ಮೌಲ್ಯಮಾಪಕರಾದ ಕಾರಣ ಅವರು ನಿಮ್ಮ ಹಿತ ಕಾಯದೇ ಇರರು. ನಿಮ್ಮ ಹಿತ ಕಾಪಾಡುವುದು ಉಪನ್ಯಾಸಕರ ಜವಾಬ್ದಾರಿಯಾದರೆ ಅವರ ಹಿತವನ್ನು ಕಾಪಾಡುವ ಜವಾಬ್ದಾರಿ ನನ್ನದು. ನೀವು ಆತ್ಮ ವಿಶ್ವಾಸದಿಂದ ಪರೀಕ್ಷೆ‌ ಎದುರಿಸಿ” ಎಂದು ಸುರೇಶ್​ ಕುಮಾರ್​ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ್ದಾರೆ.

    ಕರೊನಾ ವೈರಸ್​ ತಡೆಗಟ್ಟುವ ಸಲುವಾಗಿ ರಾಜ್ಯದಲ್ಲಿ ಒಂದರಿಂದ ಆರನೇ ತರಗತಿಯ ವಿದ್ಯಾರ್ಥಿಗಳಿಗೆ ಈಗಾಗಲೇ ಬೇಸಿಗೆ ರಜೆಯನ್ನು ನೀಡಲಾಗಿದ್ದು, 7,8 ಮತ್ತು ಒಂಬತ್ತನೇ ತರಗತಿಯ ವಿದ್ಯಾರ್ಥಿಗಳ ಪರೀಕ್ಷೆಯನ್ನು ಮುಂದೂಡಲಾಗಿದೆ. ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆಗಳು ನಿಗದಿಯಾಗಿರುವ ವೇಳಾಪಟ್ಟಿಯಂತೆ ನಡೆಯಲಿವೆ.

    ಸಚಿವ ಸುರೇಶ್ ಕುಮಾರ್ ಅವರ ಸಂಪೂರ್ಣ ಹೇಳಿಕೆಗಾಗಿ ಕೆಳಗಿನ ವಿಡಿಯೋ ಲಿಂಕ್​ ನೋಡಿ…

    ಲಸಿಕೆ ಸಂಶೋಧಿಸುವ ತಂಡದಲ್ಲಿ ಕನ್ನಡಿಗ ಯುವ ವಿಜ್ಞಾನಿ

    ಕರೊನಾದಿಂದ ವೃದ್ಧ ಮೃತಪಟ್ಟ ಪ್ರಕರಣ: ಆತನ ಟ್ರಾವೆಲ್ ಹಿಸ್ಟರಿಯಲ್ಲಿದೆ ಬೆಚ್ಚಿ ಬೀಳುವ ಅಂಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts