18 C
Bangalore
Friday, December 6, 2019

ಸರ್ಜಿಕಲ್ ದಾಳಿಗೆ 2 ವರ್ಷ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಮ್ಮು- ಕಾಶ್ಮೀರದ ಉರಿ ಸೇನಾ ನೆಲೆ ಮೇಲೆ 2016 ಸೆ. 18ರಂದು ಪಾಕಿಸ್ತಾನ ಉಗ್ರರು ನಡೆಸಿದ್ದ ಭಯೋತ್ಪಾದನಾ ದಾಳಿಗೆ ಪ್ರತೀಕಾರವಾಗಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ್ದ ಐತಿಹಾಸಿಕ ಸರ್ಜಿಕಲ್ ದಾಳಿಗೆ ಈಗ ಎರಡು ವರ್ಷ. ಭಾರತೀಯ ಸೇನೆಯ ಶಕ್ತಿ, ಸಾಮರ್ಥ್ಯವನ್ನು ಇಡೀ ವಿಶ್ವಕ್ಕೆ ತಿಳಿಸಿದ ಕಾರ್ಯಾಚರಣೆ ಇದು. ಪಾಕಿಸ್ತಾನ ಸೇನೆಯ ಆಶ್ರಯದಲ್ಲಿ, ನಿರ್ಭಯವಾಗಿ ಉಗ್ರ ಚಟುವಟಿಕೆ ನಡೆಸುತ್ತಿದ್ದ ಭಯೋತ್ಪಾದಕರಿಗೆ ಇದು ಮರ್ವಘಾತ ನೀಡಿತ್ತು. ಅತ್ಯಂತ ಅಪಾಯಕಾರಿ ಕಾರ್ಯಾಚರಣೆಯನ್ನು ಸೇನೆ ಯಶಸ್ವಿಯಾಗಿ ನಡೆಸಿ, ಉಗ್ರರಿಗೆ ಸಿಂಹಸ್ವಪ್ನವಾಗಿ ಕಾಡಿತ್ತು. ಗೋವಾ ಸಿಎಂ ಮನೋಹರ್ ಪರಿಕ್ಕರ್ ಅಂದಿನ ರಕ್ಷಣಾ ಸಚಿವರಾಗಿದ್ದರು.

ದಾಳಿ ನಡೆದಿದ್ದು ಹೀಗೆ….

2016 ಸೆ. 28ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಸೈನಿಕರ ತಂಡ ದಾಳಿಗೆ ಸನ್ನದ್ಧವಾಗಿ ಗಡಿ ಪ್ರದೇಶದತ್ತ ಹೊರಟಿತು. ಕಮಾಂಡೋಗಳು 10 ಗಂಟೆ ನಡೆದು ಗಡಿ ತಲುಪಿದರು. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ 3 ಕಿಮೀ ಗಡಿಯೊಳಗೆ ಕ್ರಮಿಸಿದ್ದರು. ಉತ್ತರ ಕಾಶ್ಮೀರದ ನೌಗಾಮ್ ಸೆಕ್ಟರ್ ಮತ್ತು ಪೂಂಛ್ ಜಿಲ್ಲೆಯ ಗಡಿಯ ಮೂಲಕ ತೆರಳಿದ್ದ ಕಮಾಂಡೋಗಳು ತಡರಾತ್ರಿ 1.45ರ ಸುಮಾರಿಗೆ ನಿಗದಿತ ಪ್ರದೇಶ ತಲುಪಿದ್ದರು. ಒಂದೇ ಸಮಯದಲ್ಲಿ 7 ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ್ದರು. ಸ್ವೀಡನ್​ನಲ್ಲಿ ವಿನ್ಯಾಸಗೊಳಿಸಿರುವ ಕಾರ್ಲ್ ಗುಸ್ತಾವ್ ರಾಕೆಟ್ ಲಾಂಚರ್ ಬಳಸಿತ್ತು. ಸೆ. 29ರ ಸೂರ್ಯೋದಯಕ್ಕೂ ಮೊದಲು ಕಮಾಂಡೋಗಳು ಶಿಬಿರಕ್ಕೆ ಮರಳಿದ್ದರು. ಬೆಳಗ್ಗೆ 5 ಗಂಟೆಯ ಹೊತ್ತಿಗೆ ಸೇನೆಯ ಮೂರೂ ವಿಭಾಗದ ಮುಖ್ಯಸ್ಥರು ರಕ್ಷಣಾ ಸಚಿವ ಮನೋಹರ ಪರಿಕ್ಕರ್​ರನ್ನು ಭೇಟಿ ಮಾಡಿದರು.

ಪರಾಕ್ರಮ ಪರ್ವ

ಸರ್ಜಿಕಲ್ ಸ್ಟ್ರೈಕ್ (ನಿರ್ದಿಷ್ಟ ದಾಳಿ) ಕಾರ್ಯಾಚರಣೆಗೆ ಎರಡು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸೇನೆ ಆಯೋಜಿಸಿರುವ ‘ ಪರಾಕ್ರಮ ಪರ್ವ’ ಪ್ರದರ್ಶನಕ್ಕೆ ಜೋಧಪುರದಲ್ಲಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಸೇನಾ ನೆಲೆಯಲ್ಲಿನ ಬ್ಯಾಟಲ್ ಆಕ್ಸ್ ಮೈದಾನದಲ್ಲಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಕೋರುವ ಸಂದೇಶಕ್ಕೆ ಪ್ರಧಾನಿ ಸಹಿ ಹಾಕಿದರು. ಕೊನಾರ್ಕ್ ಯುದ್ಧ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ಭಾರತೀಯ ರಕ್ಷಣಾ ಪಡೆಯ ಮೂರೂ ವಿಭಾಗದ ಮುಖ್ಯಸ್ಥರು, ರಕ್ಷಣಾ ಸಚಿವರು ಪ್ರಧಾನಿ ನೇತೃತ್ವದಲ್ಲಿ ಕಂಬೈನ್ಡ್ ಕಮಾಂಡರ್ ಸಮ್ಮೇಳನದಲ್ಲಿ ಭಾಗವಹಿಸಿದ್ದರು.

ಮತ್ತೊಂದು ದಾಳಿಗೂ ಸಿದ್ಧ

2016 ಅ.5ರಂದು ರಕ್ಷಣಾ ವಿಚಾರಗಳ ಸಂಸದೀಯ ಸ್ಥಾಯಿ ಸಮಿತಿಗೆ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸರ್ಜಿಕಲ್ ದಾಳಿ ನಡೆದ ಬಗ್ಗೆ ಮಾಹಿತಿ ನೀಡಿದರು. ಗಡಿ ನಿಯಂತ್ರಣ ರೇಖೆಯಲ್ಲಿ ಜಮಾವಣೆಗೊಂಡಿದ್ದ ಉಗ್ರರು, ಗುಪ್ತಚರ ವರದಿ, ಕಾರ್ಯಾಚರಣೆ ರೂಪುರೇಷೆ ಮತ್ತು ದಾಳಿಯಿಂದ ಪಾಕ್​ಗೆ ಸಂಭವಿಸಿದ ನಷ್ಟದ ಬಗ್ಗೆ ವಿವರಿಸಿದರು. ಅಗತ್ಯಬಿದ್ದರೆ ಮತ್ತೆ ಸರ್ಜಿಕಲ್ ದಾಳಿಗೆ ಸೇನೆ ಸಿದ್ಧ ಎಂದು ರಾವತ್ ಹೇಳಿದ್ದರು.

ದಾಳಿ ನಡೆದಿದ್ದ ಪ್ರದೇಶ

ಪಾಕ್​ನ ಗಡಿ ನಿಯಂತ್ರಣ ರೇಖೆ ಬಳಿಯ ಗ್ರಾಮಗಳಾದ ಭಿಂಬೆರ್, ಕೆಲ್, ಲಿಪಾ ಸೆಕ್ಟರ್

ದಾಳಿ ಪರಿಣಾಮ

38 ಉಗ್ರರು, ಇಬ್ಬರು ಪಾಕಿಸ್ತಾನ ಯೋಧರು ಹತ

ರಾಜಕೀಯ ಕೆಸರೆರಚಾಟ

ಕೇಂದ್ರ ಸರ್ಕಾರ ಪ್ರಚಾರಕ್ಕಾಗಿ ಸೇನೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಸರ್ಜಿಕಲ್ ದಾಳಿ ನಡೆಸಿದ್ದಕ್ಕೆ ಸಾಕ್ಷ್ಯ ನೀಡಿ ಎಂದು ಕಾಂಗ್ರೆಸ್ ಸಹಿತ ಪ್ರತಿಪಕ್ಷಗಳು ಆರೋಪ ಮಾಡಿದ್ದವು. ಇದು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿತ್ತು. ಕೆಲ ತಿಂಗಳ ಬಳಿಕ ಕೇಂದ್ರ ಸರ್ಕಾರ ದಾಳಿಯ ವಿಡಿಯೋ ಬಿಡುಗಡೆ ಮಾಡಿ, ಗೊಂದಲ ನಿವಾರಣೆ ಮಾಡಿತ್ತು.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...