ಮುಂಬೈ: ನ್ಯೂಜಿಲೆಂಡ್ ವಿರುದ್ಧ ಅಕ್ಟೋಬರ್ 16ರಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ (Test Series) ಭಾರತ ತಂಡನ್ನು (Team India) ಪ್ರಕಟಿಸಲಾಗಿದ್ದು, ಎಂದಿನಂತೆ ರೋಹಿತ್ ಶರ್ಮ (Rohit Sharma) ತಂಡವನ್ನು ಮುನ್ನಡೆಸಲಿದ್ದಾರೆ. ವೇಗಿ ಜಸ್ಪ್ರೀತ್ ಬುಮ್ರಾರನ್ನು (Jasprit Bumrah) ಉಪನಾಯಕನನ್ನಾಗಿ ನೇಮಿಸಲಾಗಿದ್ದು, ಈ ಬೆಳವಣಿಗೆ ಹಲವರಲ್ಲಿ ಅಚ್ಚರಿಯನ್ನುಂಟು ಮಾಡಿದೆ.
ಬಾಂಗ್ಲಾದೇಶ (Bangladesh) ವಿರುದ್ಧದ ಟೆಸ್ಟ್ ಸರಣಿಯಲ್ಲಿ (Test Series) ಕಣಕ್ಕಿಳಿದಿದ್ದ ಆಟಗಾರರಿಗೆ ಬಿಸಿಸಿಐ (BCCI) ಮಣೆ ಹಾಕಿದೆ. ಭಾರತಕ್ಕೂ ಮುನ್ನ ನ್ಯೂಜಿಲೆಂಡ್ (NewZealand) 17 ಸದಸ್ಯರ ತಂಡವನ್ನು ಪ್ರಕಟಿಸಿತ್ತು.
ಭಾರತ (Team India) ಮತ್ತು ನ್ಯೂಜಿಲೆಂಡ್ (NewZealand) ನಡುವಿನ ಮೊದಲ ಪಂದ್ಯ ಅಕ್ಟೋಬರ್ 16 ರಂದು ಬೆಂಗಳೂರಿನಲ್ಲಿ ನಡೆಯಲ್ಲಿದ್ದು, ಆ ಬಳಿಕ ಎರಡನೇ ಪಂದ್ಯ ಅಕ್ಟೋಬರ್ 24 ರಂದು ಪುಣೆಯಲ್ಲಿ ನಡೆಯಲಿದೆ. ಮೂರನೇ ಹಾಗೂ ಕೊನೆಯ ಟೆಸ್ಟ್ ಪಂದ್ಯ ನವೆಂಬರ್ 1 ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ.
ಇದನ್ನೂ ಓದಿ: 147 ವರ್ಷಗಳ Test Cricket ಇತಿಹಾಸದಲ್ಲಿ ಇದೇ ಮೊದಲು; ಹೀನಾಯವಾಗಿ ಸೋಲುವ ಮೂಲಕ ಹೊಸ ದಾಖಲೆ ಬರೆದ Pak
ಭಾರತ (Team India) ಮತ್ತು ನ್ಯೂಜಿಲೆಂಡ್ (NewZealand) ನಡುವೆ ಇದುವರೆಗೆ ಒಟ್ಟು 62 ಟೆಸ್ಟ್ ಪಂದ್ಯಗಳು (Test Matches) ನಡೆದಿದ್ದು, ಅದರಲ್ಲಿ ಭಾರತ 22 ಪಂದ್ಯಗಳನ್ನು ಗೆದ್ದಿದ್ದರೆ, ನ್ಯೂಜಿಲೆಂಡ್ 12 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ವಿಶ್ವಟೆಸ್ಟ್ ಚಾಂಪಿಯನ್ಶಿಪ್ 2023-25ರ ಅಡಿಯಲ್ಲಿ ಈ ಟೆಸ್ಟ್ ಸರಣಿ ನಡೆಯುತ್ತಿದ್ದು, ತವರು ನೆಲದಲ್ಲಿ ಭಾರತ ತನ್ನ ಪಾರುಪತ್ಯವನ್ನು ಮುಂದುವರೆಸಲು ಸಜ್ಜಾಗಿದೆ.
ಟೀಮ್ ಇಂಡಿಯಾ: ರೋಹಿತ್ ಶರ್ಮಾ (Captain), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (Wicket Keeper), ಧ್ರುವ ಜುರೆಲ್ (Wicket Keeper), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್. ಮೀಸಲು ಆಟಗಾರರು: ಮಯಾಂಕ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ ಮತ್ತು ಪ್ರಸಿದ್ಧ್ ಕೃಷ್ಣ
ನ್ಯೂಜಿಲೆಂಡ್: ಟಾಮ್ ಲೇಥಮ್ (Captain), ಟಾಮ್ ಬ್ಲಂಡೆಲ್ (Wicket Keeper), ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಮ್ಯಾಟ್ ಹೆನ್ರಿ, ಡೇರಿಲ್ ಮಿಚೆಲ್, ವಿಲ್ ಓ’ರೂರ್ಕ್, ಅಜಾಜ್ ಪಟೇಲ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಬೆನ್ ಸಿಯರ್ಸ್ , ಇಶ್ ಸೋಧಿ, ಟಿಮ್ ಸೌಥಿ, ಕೇನ್ ವಿಲಿಯಮ್ಸನ್, ವಿಲ್ ಯಂಗ್.
.