More

    ಸೋಲು-ಗೆಲುವು ಸಮಾನವಾಗಿ ಸ್ವೀಕರಿಸಿ

    ಸುರಪುರ: ಪಾಲಕರು ಶಿಕ್ಷಣಕ್ಕೆ ನೀಡುವಷ್ಟು ಮಹತ್ವವನ್ನು ಕ್ರೀಡೆಗೂ ನೀಡಬೇಕು ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.

    ನಗರದ ತಾಲೂಕು ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಉಪನಿರ್ದೇಶಕರ ಕಚೇರಿ ಯಾದಗಿರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುರಪುರ ಮತ್ತು ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡ ಬಾಲಕ, ಬಾಲಕಿಯರ ಪ್ರಾಥಮಿಕ ಪ್ರೌಢಶಾಲೆಯ ಖೋಖೋ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕ್ರೀಡಾಪಟುಗಳು ಸೋಲು-ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಕಿವಿ ಮಾತು ಹೇಳಿದರು.

    ಕ್ರೀಡೆಯಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ತೀರ್ಪುಗಾರರ ನಿರ್ಣಯಕ್ಕೆ ಬದ್ಧರಾಗಿರಬೇಕು. ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಅಪಸ್ವರ ಮತ್ತು ಗೊಂದಲ ಕೇಳಿಬಂದಿವೆ. ಇದು ಕ್ರೀಡೆಗೆ ಶೋಭೆ ತರುವುದಿಲ್ಲ. ಹೀಗಾಗಿ ತೀರ್ಪುಗಾರರು ಉತ್ತಮ ತೀರ್ಪು ನೀಡಿ ಕ್ರೀಡಾ ಸ್ಫೂರ್ತಿ ಮೆರೆಯಬೇಕು ಎಂದರು.
    ಯಾದಗಿರಿ, ಕಲಬುರಗಿ, ಬೀದರ್, ಬಳ್ಳಾರಿ, ವಿಜಯನಗರ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ೧೪/೧೭ ವರ್ಷದ ನೂರಾರು ಕ್ರೀಡಾಪಟಗಳು ಭಾಗವಹಿಸಿದ್ದರು. ಖೋಖೋ ವೀಕ್ಷಿಸಲು ಅಪಾರ ಸಂಖ್ಯೆಯಲ್ಲಿ ಕ್ರೀಡಾಭಿಮಾನಿಗಳು ಆಗಮಿಸಿದ್ದರು.

    ಜಿಪಂ ಮಾಜಿ ಅಧ್ಯಕ್ಷ ರಾಜಶೇಖರಗೌಡ ವಜ್ಜಲ, ವೆಂಕೋಬ ಯಾದವ, ಪ್ರಕಾಶ ಗುತ್ತೇದಾರ್, ಅಧಿಕಾರಿಗಳಾದ ವಸಂತ ಭಂಡಾರಿ, ತಹಸೀಲ್ದಾರ್ ಕೆ.ವಿಜಯಕುಮಾರ, ತಾಪಂ ಇಒ ಬಸವರಾಜ ಸಜ್ಜನ್, ಸೋಮಪ್ಪ ಎಚ್, ಬಿಇಒ ವಸಂತ ಕುಲಕರ್ಣಿ, ಯಲ್ಲಪ್ಪ ಚಂದನಕೇರಿ, ಪಂಡಿತ ನಿಂಬೂರ, ಯಲ್ಲಪ್ಪ ಕಾಡ್ಲೂರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts