More

    ಮುರುಘಾಮಠದಲ್ಲಿ 14ರಂದು ಕಂಚಿನ ದೀಪ ರಥೋತ್ಸವ

    ಆನಂದಪುರ: ಮುರುಘಾಮಠದಲ್ಲಿ ಪ್ರತಿವರ್ಷ ದೀಪಾವಳಿ ನಂತರದ ಅಮಾವಾಸ್ಯೆಯಂದು ಕಂಚಿನ ದೀಪ ರಥೋತ್ಸವ ಮತ್ತು ಭಾವೈಕ್ಯ ಸಮ್ಮೇಳನ ನಡೆಸುವ ಸಂಪ್ರದಾಯ ನಡೆದುಕೊಂಡು ಬಂದಿದ್ದು ಈ ಬಾರಿ ಡಿ.14ರಂದು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ತಿಳಿಸಿದರು.

    ಅಂದು ಸಂಜೆ 4ರಿಂದ ಶರಣ ಸಾಹಿತ್ಯ ಸಮ್ಮೇಳನ, ಭಾವೈಕ್ಯ ಸಮ್ಮೇಳನ ಮತ್ತು 536ನೇ ಮಾಸಿಕ ಶಿವಾನುಭವ ಗೋಷ್ಠಿ ಸಹ ನಡೆಯಲಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

    ಕರೊನಾ ಭೀತಿ ಹಿನ್ನೆಲೆಯಲ್ಲಿ ಈ ವರ್ಷದ ಕಾರ್ಯಕ್ರಮಕ್ಕೆ ಸೀಮಿತ ಸಂಖ್ಯೆಯ ಭಕ್ತರಿಗೆ ನೇರವಾಗಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಉಳಿದ ಭಕ್ತರು ಮತ್ತು ಸಾರ್ವಜನಿಕರ ವೀಕ್ಷಣೆಗೆ ಅನುಕೂಲವಾಗುವಂತೆ ಆನ್​ಲೈನ್ ವ್ಯವಸ್ಥೆ ಮಾಡಲಾಗಿದೆ ಎಂದರು.

    ಶ್ರೀಮಠದ ಪೀಠಾಧಿಪತಿ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಯಕ್ರಮ ಉದ್ಘಾಟಿಸುವರು. ರಿಪ್ಪನ್​ಪೇಟೆ ಪ್ರಥಮದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಶ್ರೀಪತಿ ಹಳಗುಂದ ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಹೇಳಿದರು.

    ಗುತ್ತಲ ಕಲ್ಮಠದ ಶ್ರೀ ಪ್ರಭು ಸ್ವಾಮೀಜಿ, ಹಿರೇಸಿಂದೋಗಿ ವಿರಕ್ತ ಮಠದ ಶ್ರೀ ಚಿದಾನಂದ ಸ್ವಾಮೀಜಿ, ಕವಲೇದುರ್ಗ ಭುವನಗಿರಿ ಸಂಸ್ಥಾನ ಮಠದ ಶ್ರೀ ಡಾ. ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಜಡೆ ಸಂಸ್ಥಾನ ಮಠದ ಶ್ರೀ ಡಾ. ಮಹಾಂತ ಸ್ವಾಮೀಜಿ, ಬಸವಕಲ್ಯಾಣದ ಬಸವಪುರುಷಕಟ್ಟೆ ಮಠದ ಶ್ರೀ ನಿರಂಜನ ಚರಮೂರ್ತಿ ಸ್ವಾಮೀಜಿ, ರಾಮದುರ್ಗ ವಿರಕ್ತ ಮಠದ ಶ್ರೀ ಶಾಂತವೀರ ಸ್ವಾಮೀಜಿ, ಸದಾಶಿವಪೇಟೆ ಗದಿಗೇಶ್ವರ ಮಠದ ಶ್ರೀ ಗದಿಗೇಶ್ವರ ಸ್ವಾಮೀಜಿ, ಹೊಸನಗರ ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ, ಹಾರ್ನಹಳ್ಳಿ ಚೌಕಿಮಠದ ಶ್ರೀ ನೀಲಕಂಠ ಸ್ವಾಮೀಜಿ ಆನ್​ಲೈನ್ ಮೂಲಕ ಶರಣ ಸಾಹಿತ್ಯ ಸಮ್ಮೇಳನ ಮತ್ತು ಭಾವೈಕ್ಯ ಸಮ್ಮೇಳನ ನಡೆಸಿಕೊಡುವರು ಎಂದು ತಿಳಿಸಿದರು.

    ಭಕ್ತರು http://www.facebook.com/TVBHARTHTVSHIVAMOGGA ಅಥವಾ http://www.youtube.com/TVBHARTHSHIVAMOGGA ಲಿಂಕ್ ಮೂಲಕ ಕಾರ್ಯಕ್ರಮ ವೀಕ್ಷಿಸಬಹುದು. ಹೆಚ್ಚಿನ ಮಾಹಿತಿಗೆ (6361498972, 9980488212) ಸಂಪರ್ಕಿಸಬಹುದು ಎಂದರು.

    ಪ್ರಮುಖರಾದ ಮಲಂದೂರು ನಾಗಭೂಷಣ, ಆವಿನಹಳ್ಳಿ ರಾಜೇಂದ್ರ, ಸಿಎಂ ಆಪ್ತ ಕಾರ್ಯದರ್ಶಿ ಕೆ.ಆರ್.ರಾಜು, ಮುರುಗೇಶ ಗೌಡ, ರಾಜೇಂದ್ರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts