VIDEO| ರಾಹುಲ್​ ಗಾಂಧಿ ವಿರುದ್ಧ ಆಕ್ಷೇಪಾರ್ಹ ಟ್ವೀಟ್​ ಪ್ರಕರಣ; ಅಮಿತ್​ ಮಾಳವೀಯಾ ಪರ ಹೈಕೋರ್ಟಿನಲ್ಲಿ ವಾದ ಮಂಡಿಸಿದ ತೇಜಸ್ವಿ ಸೂರ್ಯ

Tejaswi surya
Published on

ಬೆಂಗಳೂರು: ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ವಿರುದ್ಧ ಆಕ್ಷೇಪಾರ್ಹ ಟ್ವೀಟ್​ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಐಟಿ ಸೆಲ್​ ಮುಖ್ಯಸ್ಥ ಅಮಿತ್​ ಮಾಳವೀಯಾ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ಹಾಗು ವಕೀಲರಾಗಿರುವ ತೇಜಸ್ವಿ ಸೂರ್ಯ ಬುಧವಾರ ಕರ್ನಾಟಕ ಹೈಕೋರ್ಟಿನಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.

ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಿದ್ದು, ಅಮಿತ್​ ಮಾಳವೀಯಾ ಪರವಾಗಿ ಸಂಸದ ತೇಜಸ್ವಿ ಸೂರ್ಯ ವಾದ ಮಂಡಿಸಿದ್ದಾರೆ.

ಮಧ್ಯಂತರ ತಡೆ

ಈ ಕುರಿತು ಮಾತನಾಡಿರುವ ಸಂಸದ ತೇಜಸ್ವಿ ಸೂರ್ಯ ದೇಶದ ಜನರ ವರ್ಗಗಳ ನಡುವೆ ದ್ವೇಷವನ್ನು ಉತ್ತೇಜಿಸುವಂಥ ಟ್ವೀಟ್​​ ಅನ್ನು ಮಾಳವೀಯ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಆದರೆ, ಮಾಳವಿಯಾ ವಿರುದ್ಧ ಆರೋಪಿಸಲಾದ ಅಂಶಗಳು ಭಾರತೀಯ ದಂಡಸಂಹಿತೆಯ 153(A) & 505(2) ರ ಅಡಿ ಪ್ರಕರಣ ದಾಖಲಿಸಿಕೊಳ್ಳುವ ವ್ಯಾಪ್ತಿಗೆ ಬರುವುದಿಲ್ಲ ಎಂದು ಕೋರ್ಟ್ ಪರಿಗಣಿಸಿದೆ.

ಹೀಗಾಗಿ ಮುಂದಿನ ತನಿಖೆ ಮತ್ತು ಪ್ರಕ್ರಿಯೆಗಳಿಗೆ ಮಧ್ಯಂತರ ತಡೆ ನೀಡಿದೆ. ಅಮಿತ್ ಮಾಳವಿಯಾ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರಾಜಕೀಯ ಪ್ರೇರಿತವಾಗಿದೆ. ರಾಹುಲ್ ಗಾಂಧಿ ವಿರುದ್ಧ ಅವರು ಹೇಳಿಕೆ ನೀಡಿದ್ದಕ್ಕಾಗಿ ಐಪಿಸಿ 153 ಎ ಮತ್ತು 505 (2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮೇಲಿನ ಎರಡೂ ಸೆಕ್ಷನ್‌ಗಳು ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಬಗ್ಗೆ ವ್ಯವಹರಿಸುತ್ತದೆ. 

ಹಾಗಾದರೆ, ರಾಹುಲ್ ಗಾಂಧಿ ಎಂದರೇನು? ಒಬ್ಬ ವ್ಯಕ್ತಿ ಅಥವಾ ಒಂದು ಗುಂಪು ಅಥವಾ ಒಂದು ವರ್ಗವೇ? ನಾವು ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ ಮತ್ತು ನಮಗೆ ನ್ಯಾಯ ದೊರೆಯಲಿದೆ ಎಂದು ಸಂಸದ ತೇಜಸ್ವಿ ಸೂರ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಕರಣದ ಹಿನ್ನಲೆ

ಜೂನ್​ 17ರಂದು ಅಮಿತ್​ ಮಾಳವೀಯಾ ತಮ್ಮ ಟ್ವಿಟರ್​ ಖಾತೆಯಿಂದ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರ ವಿಡಿಯೋ ಒಂದನ್ನು ಹಂಚಿಕೊಂಡಿದ್ದರು. ಕೋಮು ಸೌಹಾರ್ದತೆ ಮತ್ತು ಗುಂಪುಗಳ ನಡುವೆ ದ್ವೇಷವನ್ನು ಬಿತ್ತುವ ಸಲುವಾಗಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ ಎಂದು ಆರೋಪಿಸಿ ಸಚಿವ ಪ್ರಿಯಾಂಕ ಖರ್ಗೆ ದೂರು ದಾಖಲಿಸಿದ್ದರು. ಈ ಸಂಬಂಧ ಹೈಗ್ರೌಂಡ್ಸ್​ ಪೊಲೀಸ್​ ಠಾಣೆಯಲ್ಲಿ 153ಎ ಅಡಿಯಲ್ಲಿ FIR ದಾಖಲಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net