6ರಂದು ಸುರ್ಯ ದೇವಳ ಪ್ರತಿಷ್ಠಾಪನಾ ವಾರ್ಷಿಕೋತ್ಸವ

20
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ನಡ ಗ್ರಾಮದ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಏ.6ರಂದು ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ 7ರಿಂದ 11ರವರೆಗೆ ವರ್ಷಾವಧಿ ಜಾತ್ರೆ ನಡೆಯಲಿದೆ.

6ರಂದು ಬೆಳಗ್ಗೆ 7.30ರಿಂದ ಪುಣ್ಯಾಹ, ಗಣಪತಿ ಹೋಮ, ಕಲಶ ಪೂಜೆ, ಕಲಶಾಭಿಷೇಕ, ಮಧ್ಯಾಹ್ನ 12.30ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ಹಾಗೂ ರಾತ್ರಿ 8ರಿಂದ ರಂಗಪೂಜೆ, ಉತ್ಸವ ನಡೆಯಲಿದೆ.

7ರಂದು ಬೆಳಗ್ಗೆ 7.15ರಿಂದ ಗಣಪತಿ ಹೋಮ, ನವಕ ಪ್ರಧಾನ ಕಲಶಾಭಿಷೇಕ, ಧ್ವಜಾರೋಹಣ, ಮಹಾಪೂಜೆ, ನಿತ್ಯ ಬಲಿ, ಅನ್ನ ಸಂತರ್ಪಣೆ, 8ರಂದು ಮಧ್ಯಾಹ್ನ 12.30ರಿಂದ ಮಹಾಪೂಜೆ, ನಿತ್ಯಬಲಿ, ಅನ್ನ ಸಂತರ್ಪಣೆ, ಸಂಜೆ 6ಗಂಟೆಗೆ ಸುರ್ಯಗುತ್ತು ಮನೆಯಿಂದ ದೈವಗಳ ಭಂಡಾರ ಹೊರಡುವುದು, ರಾತ್ರಿ 8 ಗಂಟೆಯಿಂದ ಉತ್ಸವ ಹೊರಟು ವಸಂತ ಕಟ್ಟೆ ಪೂಜೆ, ಮಹಾಪೂಜೆ ನಡೆಯಲಿದೆ.

9ರಂದು ಬೆಳಗ್ಗೆ 7 ಗಂಟೆಯಿಂದ ಸೊಡರಬಲಿ ಉತ್ಸವ, ಮಧ್ಯಾಹ್ನ ಮಹಾಪೂಜೆ, ಅನ್ನ ಸಂತರ್ಪಣೆ ರಾತ್ರಿ 8ಗಂಟೆಯಿಂದ ಉತ್ಸವ ಹೊರಟು ಕೆರೆಕಟ್ಟೆ ಪೂಜೆ, ಮಹಾಪೂಜೆ ನಡೆಯಲಿದೆ. 10ರಂದು ಬೆಳಗ್ಗೆ 8.45ರಿಂದ ದರ್ಶನ ಬಲಿ, ಉತ್ಸವ, ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ, ಅನ್ನಸಂತರ್ಪಣೆ ರಾತ್ರಿ 8ರಿಂದ ಉತ್ಸವ, ಪುಷ್ಪರಥೋತ್ಸವ, ನೃತ್ಯ ಬಲಿಉತ್ಸವ, ರಥಕಟ್ಟೆ ಪೂಜೆ, ಮಹಾಪೂಜೆ, ಭೂತಬಲಿ ಶಯನೋತ್ಸವ ನಡೆಯಲಿದೆ.

11ರಂದು ಬೆಳಗ್ಗೆ 9ರಿಂದ ಕವಾಟೋದ್ಘಾಟನೆ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ 6ರಿಂದ ಯಾತ್ರಾ ಹೋಮ, ಅವಭೃತ ಸ್ನಾನಕ್ಕೆ ಹೊರಡುವುದು, ರಾತ್ರಿ 10.30ಕ್ಕೆ ಧ್ವಜಾವರೋಹಣ, 11 ಗಂಟೆಯಿಂದ ದೈವಗಳ ನೇಮ ಜರುಗಲಿದೆ ಎಂದು ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಡಾ.ಸತೀಶ್ಚಂದ್ರ ಸುರ್ಯಗುತ್ತು ತಿಳಿಸಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮ

8ರಂದು ರಾತ್ರಿ 9.30ರಿಂದ ದೇವದಾಸ್ ಕಾಪಿಕಾಡ್ ಮತ್ತು ತಂಡದವರಿಂದ ಹಾಸ್ಯಮಯ ತುಳು ನಾಟಕ ಏರ್ಲಾ ಗ್ಯಾರಂಟಿ ಅತ್ತ್, 9ರಂದು ರಾತ್ರಿ 9.30ರಿಂದ ಪುತ್ತೂರು ಜಗದೀಶ್ ಆಚಾರ್ಯ ಮತ್ತು ಬಳಗದವರಿಂದ ಸಂಗೀತ ಗಾನ ಸಂಭ್ರಮ, 10ರಂದು ರಾತ್ರಿ 9.30ರಿಂದ ಅಂಗನವಾಡಿ ಕೇಂದ್ರ, ಸುರ್ಯ ಶಾಲೆಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಬಳಿಕ ಸಂಗಮ ಕಲಾವಿದರಿಂದ ಕಾಸ್ದ ಕಸರತ್ ತುಳು ಹಾಸ್ಯ ನಾಟಕ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net