ಸುರ್ಯ ದೇವಸ್ಥಾನದಲ್ಲಿ ಜಾತ್ರೋತ್ಸವ

New Project (3)
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಅಂಗವಾಗಿ ಗುರುವಾರ ಬೆಳಗ್ಗೆ ದರ್ಶನ ಬಲಿ ಉತ್ಸವ ಜರುಗಿತು.

ಮಧ್ಯಾಹ್ನ ಮಹಾಪೂಜೆ ಹಾಗೂ ಅನ್ನಸಂತರ್ಪಣೆ, ರಾತ್ರಿ ದೇವರ ಬಲಿ ಉತ್ಸವ, ಪುಷ್ಪರಥೋತ್ಸವ, ನಿತ್ಯಬಲಿ ಉತ್ಸವ, ರಥಕಟ್ಟೆ ಪೂಜೆ, ಮಹಾಪೂಜೆ, ಭೂತಬಲಿ ಹಾಗೂ ಶಯನೋತ್ಸವ ಕಾರ್ಯಕ್ರಮ ನೆರವೇರಿತು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸುರ್ಯ ಅಂಗನವಾಡಿ ಮತ್ತು ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸಂಗಮ ಕಲಾವಿದರು ಉಜಿರೆ ಅವರಿಂದ ಗಿರೀಶ್ ಹೊಳ್ಳ ನಿರ್ದೇಶನದ ‘ಕಾಸ್ಟ ಕಸರತ್’ ತುಳು ನಾಟಕ ಪ್ರದರ್ಶನಗೊಂಡಿತು.

ಏ.6ರಂದು ಗಣಪತಿ ಹೋಮ, ಕಲಶಪೂಜೆ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ಮೊದಲಾದ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು. ರಾತ್ರಿ ರಂಗ ಪೂಜೆ, ಉತ್ಸವ, 7ರಂದು ಬೆಳಗ್ಗೆ ಗಣಪತಿ ಹೋಮ, ನವಕ ಪ್ರಧಾನ ಕಲಶಾಭಿಷೇಕ, ಧ್ವಜಾರೋಹಣ, ಮಹಾಪೂಜೆ, ನಿತ್ಯಬಲಿ, ಅನ್ನಸಂತರ್ಪಣೆ ನಡೆಯಿತು.

ಆನುವಂಶಿಕ ಆಡಳಿತ ಮೊಕ್ತೇಸರ ಡಾ.ಸತೀಶ್ಚಂದ್ರ ಸುರ್ಯಗುತ್ತು, ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಆನುವಂಶಿಕ ಆಡಳಿತ ಮೋಕ್ತೆಸರ ಶರತ್ ಕೃಷ್ಣ ಪಡ್ವೆಟ್ನಾಯ, ಧನಂಜಯ ಅಜ್ಜಿ ನಡಗುತ್ತು, ಅಭಿವೃದ್ಧಿ ಮಂಡಳಿ ಅಧ್ಯಕ್ಷ ರಾಜಶೇಖರ್ ಅಜ್ರಿ, ಮುನಿರಾಜ ಅತ್ರಿ, ಪ್ರಸಾದ್ ಹಾಗೂ ಭಕ್ತರು ಉಪಸ್ಥಿತರಿದ್ದರು.

ಧರ್ಮದೈವಗಳ ಭಂಡಾರ ಮೆರವಣಿಗೆ

8ರಂದು ಮಹಾಪೂಜೆ, ನಿತ್ಯಬಲಿ, ಅನ್ನಸಂತರ್ಪಣೆ, ಸಂಜೆ ಸುರ್ಯಗುತ್ತು ಮನೆಯಿಂದ ಧರ್ಮದೈವಗಳ ಭಂಡಾರವನ್ನು ಮೆರವಣಿಗೆಯಲ್ಲಿ ತರಲಾಯಿತು. ರಾತ್ರಿ ಉತ್ಸವ ಹೊರಟು ವಸಂತಕಟ್ಟೆ ಪೂಜೆ, ಮಹಾಪೂಜೆ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಾತ್ರಿ ‘ಏರ್ಲಾ ಗ್ಯಾರಂಟಿ ಅತ್’ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಂಡಿತು. 9ರಂದು ಬೆಳಗ್ಗೆ ಸೊಡರಬಲಿ ಉತ್ಸವ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ಉತ್ಸವ ಹೊರಟು ಕೆರೆಕಟ್ಟೆ ಪೂಜೆ, ಮಹಾಪೂಜೆ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net