ನಾಯಕನಾದ ಮೊದಲ ಪಂದ್ಯದಲ್ಲೇ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ ಸೂರ್ಯಕುಮಾರ್

Virat Surya
Published on

ಪಲ್ಲೆಕೆಲೆ: ಇಲ್ಲಿನ ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಹಾಗೂ ಶ್ರೀಲಂಕ ಆನಡುವಿನ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಮ್​ ಇಂಡಿಯಾ 43 ರನ್​ಗಳ ಭರ್ಜರಿ ಜಯ ಕಂಡಿದ್ದು, ನಾಯಕನಾಗಿ ಪದಾರ್ಪಣೆ ಮಾಡಿದ ಪಂದ್ಯದಲ್ಲೇ ಸೂರ್ಯಕುಮಾರ್​ ಯಾದವ್​ ತಮ್ಮ ತಂತ್ರಗಳ ಮೂಲಕ ಗಮನ ಸೆಳೆದಿದ್ದಾರೆ.

ನಾಯಕನಾಗಿ ಪದಾರ್ಪಣೆ ಮಾಡಿದ ಪಂದ್ಯದಲ್ಲೇ ಭರ್ಜರಿ ಅರ್ಧಶತಕ ಗಳಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಸೂರ್ಯಕುಮಾರ್​ ಯಾದವ್​ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಇದಲ್ಲದೆ ಈ ಪಂದ್ಯದಲ್ಲಿ ಮಾಜಿ ಕ್ಯಾಪ್ಟನ್​ ವಿರಾಟ್​ ಕೊಹ್ಲಿ ಹೆಸರಿನಲ್ಲಿದ್ದ ದಾಖಲೆಯೊಂದನ್ನು ಸೂರ್ಯಕುಮಾರ್​ ಸರಿಗಟ್ಟುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

SuryaKumar Yadav

ಪೆಲೆಕೆಲೆಯಲ್ಲಿ ನಡೆದ ಈ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್‌ ಮೂಲಕ ಮಿಂಚಿದ ಭಾರತ ತಂಡದ ನಾಯಕ ಸೂರ್ಯಕುಮಾರ್‌ ಯಾದವ್‌, ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಆ ಮೂಲಕ ಅವರು ಈ ಮಾದರಿಯಲ್ಲಿ ಅತಿಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಮೂಲಕ ವಿರಾಟ್​ ಹೆಸರಿನಲ್ಲಿದ್ದ ದಾಖಲೆಯನ್ನು ಸರಿಗಟ್ಟಿದರು.

ಸೂರ್ಯಕುಮಾರ್‌ ಹಾಗೂ ಕೊಹ್ಲಿ ತಲಾ 16 ಸಲ ಈ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಜಿಂಬಾಬ್ವೆಯ ಸಿಕಂದರ್ ರಾಜಾ, ಅಫ್ಗಾನಿಸ್ತಾನದ ಮೊಹಮ್ಮದ್‌ ನಬಿ, ಭಾರತದ ರೋಹಿತ್‌ ಶರ್ಮಾ, ಮಲೇಷ್ಯಾ ಆಟಗಾರ ವೀರಂದೀಪ್‌ ಸಿಂಗ್‌ ಕ್ರಮವಾಗಿ ನಂತರದ ಸ್ಥಾನಗಳಲ್ಲಿದ್ದಾರೆ. ಅಗ್ರ ಐವರ ಪಟ್ಟಿಯಲ್ಲಿರುವವರ ಪೈಕಿ 70ಕ್ಕಿಂತ ಕಡಿಮೆ ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿರುವುದು ಸೂರ್ಯ ಮಾತ್ರ. ಅವರು ಇದುವರೆಗೆ 69 ಪಂದ್ಯಗಳಲ್ಲಿ ಟೀಂ ಇಂಡಿಯಾವನ್ನು ಪ್ರತಿನಿಧಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net