ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಇಂದು ಭಾರತ ತಂಡ ಪ್ರಕಟ ಸಾಧ್ಯತೆ; ಪ್ರಮುಖರಿಗೆ ರೆಸ್ಟ್​

Team India

ಮುಂಬೈ: ಪ್ರಸ್ತುತ ನಡೆಯುತ್ತಿರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಭರ್ಜರಿ ಪ್ರದರ್ಶನದ ಮೂಲಕ ಅಜೇಯವಾಗಿ ಫಿನಾಲೆ ಪ್ರವೇಶಿಸಿದ್ದು, ಕಪ್​ ಗೆಲ್ಲುವ ಹಾಟ್​ ಪೇವರಿಟ್​ ತಂಡವೆನ್ನಿಸಿದೆ. ವಿಶ್ವಕಪ್​ ಮುಗಿದ ಬೆನ್ನಲ್ಲೇ ಭಾರತ ಆಸ್ಟ್ರೇಲಿಯಾ ವಿರುದ್ಧ ಐದು ಪಂದ್ಯಗಳ ಟಿ-20 ಪಂದ್ಯಗಳ ಸರಣಿ ಆಡಲಿದೆ.

blank

ಮೊದಲ ಸೆಮಿಫೈನಲ್ ಮುಗಿದ ಬೆನ್ನಲ್ಲೇ ಈ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಎರಡನೇ ಸೆಮಿಫೈನಲ್ ಕಳಿದರೂ ಬಿಸಿಸಿಐ ಆಯ್ಕೆ ಸಮಿತಿ 15 ಸದಸ್ಯರ ತಂಡವನ್ನು ಹೆಸರಿಸಿಲ್ಲ. ಹೀಗಾಗಿ ಶನಿವಾರ ಆಸೀಸ್ ವಿರುದ್ಧದ ಟಿ20 ಸರಣಿಗೆ ಅಜಿತ್ ಅಗರ್ಕರ್ ನೇತೃತ್ವದ ಸಮಿತಿ ಟೀಮ್ ಇಂಡಿಯಾವನ್ನು ಹೆಸರಿಸುವ ಸಾಧ್ಯತೆ ದಟ್ಟವಾಗಿದೆ.

ಬಾಂಗ್ಲಾದೇಶ ವಿರುದ್ಧದ ಲೀಗ್​ ಹಂತದ ಪಂದ್ಯದಲ್ಲಿ ಗಾಯಗೊಂಡಿದ್ದ ಹಾರ್ದಿಕ್​ ಪಾಂಡ್ಯ ಟಿ-20 ಸರಣಿಯಿಂದಲೂ ಹೊರಬಿದ್ದಿದ್ದು, ಅವರು ಗುಣಮುಖರಾಗಲು ಇನ್ನಷ್ಟು ಸಮಯ ಬೇಕಿದೆ ಎಂದು ಬಿಸಿಸಿಐ ವೈದ್ಯಕೀಯ ತಂಡ ಶಿಫಾರಸ್ಸು ಮಾಡಿದೆ. ಆಸೀಸ್ ಜೊತೆಗೆ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಿಂದಲೂ ಹೊರಬಿದ್ದಿದ್ದಾರೆ.

ಇದನ್ನೂ ಓದಿ: ಏಕದಿನ ವಿಶ್ವಕಪ್​ ಫಿನಾಲೆಯಲ್ಲಿ ಭಾರತ 65ಕ್ಕೆ ಆಲೌಟ್; ವೈರಲ್​ ಆಗುತ್ತಿದೆ ಆಸ್ಟ್ರೇಲಿಯಾ ಆಟಗಾರನ ಭವಿಷ್ಯವಾಣಿ

ಆಸೀಸ್​ ವಿರುದ್ಧದ ಸರಣಿಗೆ ಪ್ರಮುಖ ಆಟಗಾರರಾದ ವಿರಾಟ್​ ಕೊಹ್ಲಿ, ರೋಹಿತ್​ ಶರ್ಮಾ ಸೇರಿದಂತೆ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗುತ್ತದೆ ಎಂದು ಹೇಳಲಾಗಿದೆ. ರೋಹಿತ್​ ಶರ್ಮಾ ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್​ ಯಾದವ್​ ಅಥವಾ ಋತುರಾಜ್​ ಗಾಯಕ್ವಾಡ್​ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಟಿ-20 ಮಾದರಿಯಲ್ಲಿ ನಂಬರ್​ 1 ಬ್ಯಾಟ್ಸ್​ಮನ್​ ಸೂರ್ಯಕುಮಾರ್​ ಯಾದವ್​ ಅವರು ಆಯ್ಕೆಗಾರರ ಹಾಟ್​ ಫೇವರಿಟ್​ ಎಂದು ಹೇಳಲಾಗಿದೆ. ಆದರೆ ರುತುರಾಜ್ ಗಾಯಕ್ವಾಡ್ ಅವರು ಏಷ್ಯನ್ ಗೇಮ್ಸ್​ನಲ್ಲಿ ಭಾರತ ತಂಡವನ್ನು ಮುನ್ನಡೆಸಿ ಚಿನ್ನದ ಪದಕ ಗೆಲ್ಲಿಸಿಕೊಟ್ಟಿದ್ದರು. ಇದರ ನಡುವೆ ಅನುಭವಿ ವೇಗಿ ಭುವನೇಶ್ವರ್ ಕುಮಾರ್ 12 ತಿಂಗಳ ನಂತರ ಭಾರತ ತಂಡಕ್ಕೆ ಮರಳಲಿದ್ದಾರೆ ಎಂದು ಹೇಳಲಾಗಿದೆ.

ವಿಕೆಟ್-ಕೀಪರ್ ಸಂಜು ಸ್ಯಾಮ್ಸನ್ ಹಾಗೂ ರಿಯಾನ್ ಪರಾಗ್, ರಿಂಕು ಸಿಂಗ್ ಕೂಡ ಆಯ್ಕೆ ಆಗಲಿದ್ದಾರೆ ಎಂಬ ಮಾತಿದೆ. ಕ್ರಿಕೆಟ್ ವಿಶ್ವಕಪ್ ಫೈನಲ್‌ ಮುಕ್ತಾಯವಾದ ನಾಲ್ಕು ದಿನಗಳ ನಂತರ ನವೆಂಬರ್ 23 ರಂದು ವೈಜಾಗ್​ನಲ್ಲಿ ಭಾರತ-ಆಸೀಸ್ ಟಿ20 ಸರಣಿಯು ಪ್ರಾರಂಭವಾಗುತ್ತದೆ. ಡಿಸೆಂಬರ್​ 03ರಂದು ಹೈದರಾಬಾದಿನಲ್ಲಿ ಸರಣಿ ಮುಕ್ತಾಯಗೊಳ್ಳಲಿದೆ.

Share This Article
blank

ರಾತ್ರಿ 9 ಗಂಟೆ ಮೇಲೆ ಊಟ ಮಾಡೋದ್ರಿಂದ ಅನಾನುಕೂಲಗಳೇ ಅಧಿಕ: ಊಟಕ್ಕೆ ಸರಿಯಾದ ಸಮಯ ಯಾವುದು? | Eating

Eating: ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತಡವಾಗಿ ಭೋಜನ ಮಾಡುತ್ತಿದ್ದಾರೆ, ಆದರೆ ವೈದ್ಯಕೀಯ ತಜ್ಞರು ಇದು…

ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ದೇಸಿ ಸೂಪರ್‌ಫುಡ್‌ ತಿನ್ನಿ | Immunity

Immunity: ಮಳೆಗಾಲ ಬಂತೆಂದರೆ ಸೋಂಕುಗಳು ಬರುವುದು ಸಹ ಸಹಜ. ತಂಪಾದ ಗಾಳಿಗೆ ಮನೆಗಳ ಸುತ್ತಲು ಬ್ಯಾಕ್ಟೀರಿಯಾ…

blank