ಟೂರ್ನಿ ಆರಂಭಕ್ಕೂ ಮುನ್ನ ಮುಂಬೈ ಇಂಡಿಯನ್ಸ್​ಗೆ ಶಾಕ್​; ಗಾಯದ ಸಮಸ್ಯೆಯಿಂದ ಸ್ಟಾರ್​ ಆಟಗಾರ ಅಲಭ್ಯ

Mi vs Gt
Published on

ಮುಂಬೈ: 17ನೇ ಆವೃತ್ತಿ ಐಪಿಎಲ್​ ಆರಂಭಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು, ಬಿಸಿಸಿಐ ಹಾಗೂ ತಂಡಗಳು ಟೂರ್ನಿಗೆ ಸಿದ್ದತೆಗಳನ್ನು ಆರಂಭಿಸಿವೆ. ಆದರೆ, ಮುಂಬೈ ಇಂಡಿಯನ್ಸ್​ ತಂಡದಲ್ಲಿ ಯಾಕೋ ಎಲ್ಲವೂ ಸರಿ ಇಲ್ಲ ಎಂಬಂತೆ ಕಾಣುತ್ತಿದೆ. ಈ ಹಿಂದೆ ನಾಯಕತ್ವದ ವಿಚಾರವಾಗಿ ಸದ್ದು ಮಾಡಿದ್ದ ಫ್ರಾಂಚೈಸಿ ಇದೀಗ ಮತ್ತೊಮ್ಮೆ ಸುದ್ದಿಯಾಗಿದೆ.

ಮಾರ್ಚ್​ 22ರಂದು ಆರಂಭವಾಗಲಿರುವ ಟೂರ್ನಿಯು ಈಗಾಗಲೇ ಆಭಿಮಾನಿಗಳ ನಿರೀಕ್ಷೆಯನ್ನು ದುಪ್ಪಟ್ಟುಗೊಳಿಸಿದ್ದು, ಇದರ ಮಧ್ಯೆ ಮುಂಬೈ ಅಭಿಮಾನಿಗಳಿಗೆ ಶಾಕ್​ ಒಂದು ಎದುರಾಗಿದೆ. ತಂಡದ ಪ್ರಮುಖ ಆಟಗಾರನೋರ್ವ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಸದ್ಯ ಕೇಳಿ ಬಂದಿರುವ ಮಾಹಿತಿ ಪ್ರಕಾರ ಸೂರ್ಯಕುಮಾರ್​ ಯಾದವ್​ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ತಿಳಿದು ಬಂದಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿ ವೇಳೆ ಗಾಯಗೊಂಡಿದ್ದ ಸೂರ್ಯಕುಮಾರ್​ ಯಾದವ್​ ಸಂಪೂರ್ಣವಾಗಿ ಫಿಟ್​ ಆಗದ ಕಾರಣ ಅಫ್ಘಾನಿಸ್ತಾನ ವಿರುದ್ಧದ ಟಿ-20 ಸರಣಿಯಿಂದ ಹೊರಗುಳಿದಿದ್ದರು. ಬೆಂಗಳೂರಿನ ನ್ಯಾಷನಲ್​ ಕ್ರಿಕೆಟ್ ಅಕಾಡೆಮಿಯಲ್ಲಿ (NCA) ಫಿಟ್​ನೆಸ್ ಟೆಸ್ಟ್​ಗೆ ಒಳಗಾಗಿರುವ ಸೂರ್ಯಕುಮಾರ್ ಯಾದವ್ ಸಂಪೂರ್ಣ ಫಿಟ್ ಆಗಿಲ್ಲ ಎಂದು ತಿಳಿದು ಬಂದಿದೆ.

ಈ ಹಿನ್ನಲೆಯಲ್ಲಿ ಸೂರ್ಯಕುಮಾರ್​ ಯಾದವ್​ ಮೊದಲೆರಡು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ತಿಳಿದು ಬಂದಿದೆ. ಮುಂಬೈ ಇಂಡಿಯನ್ಸ್ ತಂಡದ ಪಾಲಿಗೆ ಹಿನ್ನಡೆಯನ್ನುಂಟು ಮಾಡುವ ಸಾಧ್ಯತೆ ಹೆಚ್ಚಿದೆ. ಈ ಹಿನ್ನಡೆಯನ್ನು ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ತಂಡ ಹೇಗೆ ಸರಿದೂಗಿಸಲಿದೆ ಎಂಬುದನ್ನು ಕಾದು ನೋಡೇಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net