ಮುಂಬೈ ಇಂಡಿಯನ್ಸ್​ನಲ್ಲಿ ನಿಲ್ಲದ ಕಿತ್ತಾಟ; ಇದರ ಬೆನ್ನಲ್ಲೇ ಸೂರ್ಯಕುಮಾರ್​ ಯಾದವ್​ರಿಂದ ಶಾಕಿಂಗ್​ ಪೋಸ್ಟ್​

SuryaKumar Yadav
Published on

ಮಂಬೈ: ಮಾರ್ಚ್​ 22ರಂದು ಆರಂಭವಾಗಲಿರುವ 17ನೇ ಆವೃತ್ತಿಯ ಐಪಿಎಲ್​ಗೆ ದಿನಗಣನೆ ಆರಂಭವಾಗಿದ್ದು, ಸಿದ್ಧತೆಗಳು ಭರದಿಂದ ಸಾಗಿದೆ. ಆದರೆ, ಈ ಬಾರಿಯ ಟೂರ್ನಿಯಲ್ಲಿ ಗಾಯದ ಸಮಸ್ಯೆ ತಲೆದೂರಿದ್ದು, ತಂಡಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ಹಿಂದೆ ನಾಯಕತ್ವ ಸೇರಿದಂತೆ ತಂಡದಲ್ಲಿನ ಬಿಕ್ಕಟ್ಟಿನ ವಿಚಾರವಾಗಿ ಸದ್ದು ಮಾಡಿದ್ದ ಮುಂಬೈ ಇಂಡಿಯನ್ಸ್​ ಈಗ ಗಾಯದ ಸಮಸ್ಯೆಯಿಂದ ಹೊರತಾಗಿಲ್ಲ ಎಂದು ಹೇಳಬಹುದಾಗಿದೆ.

ಇದೀಗ ಕೇಳಿ ಬಂದಿರುವ ಮಾಹಿತಿ ಪ್ರಕಾರ ತಂಡದ ಪ್ರಮುಖ ಆಟಗಾರನೋರ್ವ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಸ್ವತಃ ಆಟಗಾರನೇ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಮುಂಬೈ ಇಂಡಿಯನ್ಸ್​ ತಂಡದ ಸ್ಟಾರ್​ ಬ್ಯಾಟ್ಸ್​ಮನ್​ ಮಿ. 360 ಖ್ಯಾತಿಯ ಸೂರ್ಯಕುಮಾರ್ ಯಾದವ್​ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದು, ಇ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಎಮೋಜಿ ಮೂಲಕ ತಿಳಿಸಿದ್ದಾರೆ. ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿರುವ ಸೂರ್ಯಕುಮಾರ್ ಯಾದವ್​ ಪುನಶ್ಚೇತನಕ್ಕಾಗಿ ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿ ಸೇರಿಕೊಂಡಿದ್ದು, ಸಂಪೂರ್ಣವಾಗಿ ಫಿಟ್​ ಆಗದ ಕಾರಣ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.

Mark Boucher

ಮಾರ್ಚ್​ 24ರಂದು ಹಾಲಿ ರನ್ನರ್​ ಅಪ್​ ಗುಜರಾತ್​ ಟೈಟಾನ್ಸ್​ ವಿರುದ್ಧ ತನ್ನ ಅಭಿಯಾನವನ್ನು ಆರಂಭಸಲಿರುವ ಮುಂಬೈ ಇಂಡಿಯನ್ಸ್​ ಪ್ರಮುಖ ಆಟಗಾರರ ಅನುಪಸ್ಥಿತಿಯ ನಡುವೆಯೇ ಕಣಕ್ಕಿಳಿಯಲಿದೆ. ಸೂರ್ಯಕುಮಾರ್​ ಯಾದವ್​ ಹೊರತ್ತಾಗಿಯೂ ಪ್ರಮುಖ ವಿದೇಶಿ ಆಟಗಾರರು ಗಾಯಕ್ಕೆ ತುತ್ತಾಗಿದ್ದು, ಫ್ರಾಂಚೈಸಿ ಬದಲಿ ಆಟಗಾರರ ಹುಡುಕಾಟದಲ್ಲಿದೆ.

ಇತ್ತ ಸೂರ್ಯಕುಮಾರ್​ ಅನುಪಸ್ಥಿತಿ ಕುರಿತು ಪ್ರತಿಕ್ರಿಯಿಸಿರುವ ಮುಂಬೈ ಇಂಡಿಯನ್ಸ್​ ಕೋಚ್​ ಮಾರ್ಕ್​ ಬೌಷರ್​, ಬಿಸಿಸಿಐನಿಂದ ಸ್ಕೈ ಕುರಿತಾದ ಅಪ್ಡೇಟ್​ ಪಡೆಯಲು ನಾವು ಕಾತುರದಿಂದ ಕಾಯುತ್ತಿದ್ದೇವೆ. ಇತ್ತೀಚಿನ ದಿನಗಳಲ್ಲಿ ಫಿಟ್ನೆಸ್​ ಸಮಸ್ಯೆ ಆಟಗಾರರನ್ನು ಇನ್ನಿಲ್ಲದಂತೆ ಕಾಡುತ್ತಿದ್ದು, ವಿಶ್ವ ದರ್ಜೆ ವೈದ್ಯಕೀಯ ತಂಡದ ಮೇಲೆ ನಮಗೆ ಸಂಪೂರ್ಣ ವಿಶ್ವಾಸವಿದೆ. ಫಿಟ್ನೆಸ್​ ಸಮಸ್ಯೆಯಿಂದಾಗಿ ನಾವು ಕೆಲವು ಸಮಸ್ಯೆಗಳನ್ನು ಎದುರಿಸಬಹುದು ಆದರೆ ಕ್ರೀಡಾ ಕ್ಷೇತ್ರದಲ್ಲಿ ನಾವು ಪರಿಶ್ರಮ ಹಾಕಿದರೆ ಮಾತ್ರ ಸಮಾಲುಗಳನ್ನು ಮೆಟ್ಟಿ ನಿಲ್ಲಲು ಸಾಧ್ಯ ಎಂದು ಮುಂಬೈ ಇಂಡಿಯನ್ಸ್​ ಕೋಚ್​ ಮಾರ್ಚ್​ ಬೌಷರ್​ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net