

ನವದೆಹಲಿ: ವಿಶ್ವಕಪ್ ಟೂರ್ನಿಯ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಧ್ಯಾಹ್ನ 2 ಗಂಟೆಗೆ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ಇಡೀ ದೇಶವೇ ಈ ಪಂದ್ಯಕ್ಕಾಗಿ ಎದುರು ನೋಡುತ್ತಿದ್ದು, ಈಗಾಗಲೇ ಟಿಕೆಟ್ಗಳು ಸೋಲ್ಡೌಟ್ ಆಗಿವೆ. ಆದರೂ ಇನ್ನಷ್ಟು ಟಿಕೆಟ್ಗಳಿಗಾಗಿ ಭಾರೀ ಬೇಡಿಕೆಯೂ ಇದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾ ಯುವ ಸ್ಫೋಟಕ ಆಟಗಾರ ಸೂರ್ಯಕುಮಾರ್ ಯಾದವ್ ಮಾಡಿರುವ ಪೋಸ್ಟ್ ಜಾಲತಾಣದಲ್ಲಿ ವೈರಲ್ ಆಗಿದೆ.
ಇನ್ಸ್ಟಾಗ್ರಾಂ ಸ್ಟೋರಿಯ ಮೂಲಕ ತಮ್ಮ ಪರಿಚಯಸ್ಥರ ಬಳಿ ಮನವಿಯೊಂದನ್ನು ಮಾಡಿಕೊಳ್ಳುವ ಮೂಲಕ ಸೂರ್ಯಕುಮಾರ್ ನಗೆಚಟಾಕಿ ಹಾರಿಸಿದ್ದಾರೆ. ಸಹೋದರರೇ ಪ್ರತಿಯೊಬ್ಬರ ಮನೆಯಲ್ಲಿ ಒಳ್ಳೆ ಒಳ್ಳೆ ಟಿವಿ ಇದೆ. ಅದರ ಮುಂದೆ ಕುಳಿತು ಪಂದ್ಯವನ್ನು ನೋಡಿ ಆನಂದಿಸಿ. ಟಿಕೆಟ್ಗಾಗಿ ಹೆಚ್ಚಿನ ವಿನಂತಿಗಳನ್ನು ಮಾಡಬೇಡಿ ಎನ್ನುತ್ತಾ ಮಂಗ ಕಣ್ಣು ಮುಚ್ಚಿಕೊಂಡಿರುವ ಎಮೋಜಿಯೊಂದಿಗೆ ಸೂರ್ಯಕುಮಾರ್ ಸ್ಟೋರಿ ಪೋಸ್ಟ್ ಮಾಡಿದ್ದಾರೆ.
ಇನ್ನು ಪಂದ್ಯದ ವಿಚಾರಕ್ಕೆ ಬರುವುದಾದರೆ ಪ್ರಸಕ್ತ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕ್ ನಡುವಿನ ಮೊದಲ ಪಂದ್ಯ ಇದಾಗಿದೆ. ಈಗಾಗಲೇ ಉಭಯ ತಂಡಗಳು ಎರಡೆರಡು ಪಂದ್ಯಗಳನ್ನು ಆಡಿದ್ದು, ಎರಡರಲ್ಲೂ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಕಂಡಿವೆ. ಎರಡೂ ತಂಡಗಳು ಕೂಡ ತುಂಬಾ ಬಲಿಷ್ಠವಾಗಿದ್ದು, ಇಂದಿನ ಪಂದ್ಯ ರಣರೋಚಕವಾಗಿರುವುದರಲ್ಲಿ ಯಾವುದೇ ಸಂದೇಹವಿಲ್ಲ.
ವಿಶ್ವಕಪ್ ಹಿನ್ನೋಟ ನೋಡಿದಾಗ ಭಾರತವೇ ಪಾರುಪತ್ಯ ಸಾಧಿಸಿದೆ. ಐಸಿಸಿ ಟಿ20 ಮತ್ತು ಏಕದಿನ ವಿಶ್ವಕಪ್ ಟೂರ್ನಿಯ ಇತಿಹಾಸದಲ್ಲಿ ಒಟ್ಟು 14 ಬಾರಿ ಉಭಯ ತಂಡಗಳು ಮುಖಾಮುಖಿಯಾಗಿವೆ. ಗಮನಾರ್ಹ ಸಂಗತಿ ಏನೆಂದರೆ, ಏಕದಿನ ವಿಶ್ವಕಪ್ನಲ್ಲಿ ಏಳು ಬಾರಿಯೂ ಭಾರತವೇ ವಿಜಯೋತ್ಸವ ಆಚರಿಸಿದೆ. ಟಿ20 ವಿಶ್ವಕಪ್ನಲ್ಲಿಯೂ 7 ಬಾರಿ ಉಭಯ ತಂಡಗಳು ಸೆಣಸಾಡಿದ್ದು, ಪಾಕಿಸ್ತಾನ 2021ರಲ್ಲಿ ಒಂದು ಬಾರಿ ಮಾತ್ರ ಗೆಲುವು ದಾಖಲಿಸಿದೆ. ಎರಡು ಮಾದರಿಯಲ್ಲೂ ಭಾರತವೇ ಪಾರುಪತ್ಯ ಸಾಧಿಸಿದೆ.
ಟೀಮ್ ಇಂಡಿಯಾ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ, ನಾಯಕ ರೋಹಿತ್ ಶರ್ಮ, ಜಸ್ಪ್ರೀತ್ ಬೂಮ್ರಾ, ಕೆ ಎಲ್ ರಾಹುಲ್ ಮತ್ತು ಮೊಹಮ್ಮದ್ ಸಿರಾಜ್ ಅವರ ಮೇಲೆ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅಲ್ಲದೆ, ಶುಭಮನ್ ಗಿಲ್ ಇಂದಿನ ಪಂದ್ಯದಲ್ಲಿ ಆಡುವ ಸಾಧ್ಯತೆ ಇದ್ದು, ತಂಡಕ್ಕೆ
ತಂಡಗಳು
ಭಾರತ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್.
ಪಾಕಿಸ್ತಾನ: ಬಾಬರ್ ಅಜಮ್ (ನಾಯಕ), ಶಾದಾಬ್ ಖಾನ್, ಫಖರ್ ಜಮಾನ್, ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಜ್ವಾನ್, ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಸಲ್ಮಾನ್ ಅಲಿ ಅಘಾ, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಹ್ಯಾರಿಸ್ ರೌಫ್, ಹಸನ್ ಅಲಿ, ಶಾಹೀನ್ ಅಫ್ರಿದಿ ಮತ್ತು ಮೊಹಮ್ಮದ್ ವಾಸಿಂ. (ಏಜೆನ್ಸೀಸ್)