

ಮುಂಬೈ: ಕನ್ನಡದ ನಟ ಚಿರಂಜೀವಿ ತಮ್ಮ 35ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಚಿರು ಸಾವಿನ ಶಾಕ್ನಿಂದ ಸ್ಯಾಂಡಲ್ವುಡ್ ಇನ್ನೂ ಹೊರಬಂದಿಲ್ಲ. ಹೀಗಿರುವಾಗ ಬಾಲಿವುಡ್ ಮಂದಿ ಇಂದು ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಿಂದ ಆಘಾತಕ್ಕೆ ಒಳಗಾಗಿದ್ದಾರೆ.
34 ವರ್ಷದ ನಟ ಸುಶಾಂತ್ ಸಿಂಗ್ ರಜಪೂತ್ ಮುಂಬೈನ ಬಾಂದ್ರಾದಲ್ಲಿರುವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಇದನ್ನೂ ಓದಿ: ನಟ ಸುಶಾಂತ್ ಸಾವಿಗೆ ಕಂಬನಿ ಮಿಡಿದ ಪ್ರಧಾನಿ ಮೋದಿ
ನಟನ ಸಾವಿನ ಸುತ್ತ ಈಗಾಗಲೇ ಹಲವು ಅನುಮಾನ ಶುರುವಾಗಿದೆ. ಜೂ. 8ರಂದು ಸುಶಾಂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ (28) ಆತ್ಮಹತ್ಯೆ ಮಾಡಿಕೊಂಡಿದ್ದರು. ನಗರದ ಮಲಾಡ್ನಲ್ಲಿರುವ ಕಟ್ಟಡವೊಂದರಲ್ಲಿ ವಾಸವಿದ್ದ ದಿಶಾ 14ನೇ ಮಹಡಿಯಿಂದ ಹಾರಿ ಮೃತಪಟ್ಟಿದ್ದರು. ದಿಶಾ ಸುಶಾಂತ್ ಅವರ ಮ್ಯಾನೇಜರ್ ಆಗಿ ಕೆಲಸ ಮಾಡುವುದಕ್ಕೂ ಮೊದಲು, ಐಶ್ವರ್ಯಾ ರೈ, ಭಾರ್ತಿ ಸಿಂಗ್, ವರುಣ್ ಶರ್ಮಾ ಮತ್ತಿತರೊಂದಿಗೆ ಕೂಡ ಕೆಲಸ ಮಾಡಿದ್ದರು. ಇದನ್ನೂ ಓದಿ: ಬದುಕು ಕ್ಷಣಿಕ ಎಂದಿದ್ದೇಕೆ ಸುಶಾಂತ್ ಸಿಂಗ್; ಅಮ್ಮನ ನೆನೆದು ಬಾರದ ಲೋಕಕ್ಕೆ ಪಯಣ
ದಿಶಾ ಅಂದು ತನ್ನ ಪ್ರಿಯಕರನೊಂದಿಗೆ ಪಾರ್ಟಿ ಮಾಡುತ್ತಿದ್ದಾಗ, ಅವರಿಬ್ಬರ ನಡುವೆ ಜಗಳ ಶುರುವಾಯಿತು. ನಂತರ ಬಾತ್ರೂಂನಲ್ಲಿ ಲಾಕ್ ಮಾಡಿಕೊಂಡಿದ್ದಳು. ಅದಾದ ಬಳಿಕ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಆ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಅಂದು ತಮ್ಮ ಮಾಜಿ ಮ್ಯಾನೇಜರ್ ದಿಶಾ ಅವರ ಸಾವಿನ ಸುದ್ದಿ ಕೇಳುತ್ತಿದ್ದಂತೆ ನಟ ಸುಶಾಂತ್ ಸಿಂಗ್ ರಜಪೂತ್ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದರು. ದಿಶಾ ಸಾವಿನ ಸುದ್ದಿ ಕೇಳಿ ತುಂಬ ದುಃಖವಾಗಿದೆ. ಆಕೆಯ ಸಾವಿನ ನೋವನ್ನು ಸಹಿಸುವ ಶಕ್ತಿಯನ್ನು ಕುಟುಂಬದವರಿಗೆ ದೇವರು ಕೊಡಲಿ ಎಂದಿದ್ದರು. ಇದೀಗ ಅವರೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. (ಏಜೆನ್ಸೀಸ್)