26.8 C
Bangalore
Friday, December 13, 2019

ಕರಾವಳಿಗರ ಸಂಕಷ್ಟಕ್ಕೆ ಸ್ಪಂದಿಸುತ್ತಿದ್ದ ನಾಯಕಿ

Latest News

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಮಲ್ಲಾಪುರದಲ್ಲಿ ವಿಘ್ನೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಸಂಪನ್ನ: ಜಾತ್ರೆ ಕಣ್ತುಂಬಿಕೊಂಡ ಅಪಾರ ಭಕ್ತರು

ನೆಲಮಂಗಲ: ತಾಲೂಕಿನ ಮಲ್ಲಾಪುರದ ಪ್ರಸಿದ್ಧ ಶ್ರೀ ಬಯಲು ಉದ್ಭವ ವಿಘ್ನೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಹಾಗೂ ಕಡಲೆಕಾಯಿ ಪರಿಷೆ ಗುರುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಪರಿಷೆ...

ಹೆದ್ದಾರಿ 4ರ ಜಾಸ್ ಟೋಲ್ ಬಳಿ ಲಾರಿ-ಬಸ್ ಡಿಕ್ಕಿಯಾಗಿ 16 ಮಂದಿಗೆ ಗಾಯ

ನೆಲಮಂಗಲ: ತುಮಕೂರು-ಬೆಂಗಳೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ 4ರ ಜಾಸ್ ಟೋಲ್ ಬಳಿ ಗುರುವಾರ ರಾಜ್ಯ ಸಾರಿಗೆ ಬಸ್ ಮತ್ತು ಲಾರಿ ನಡುವೆ ಸಂಭವಿಸಿರುವ ಅಪಘಾತದಲ್ಲಿ ಚಾಲಕ...

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ: ಈಕೆಯ ದಿಟ್ಟತನಕ್ಕೆ ನೆಟ್ಟಿಗರ ಶಹಬ್ಬಾಸ್​ ಗಿರಿ!

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ...

ಮಂಗಳೂರು: ಕೃತಜ್ಞತೆ, ನೋವು ಮತ್ತು ಸಂತೃಪ್ತಿಯ ಭಾವನೆಯಿಂದ ಕರ್ನಾಟಕಕ್ಕೆ ಬಂದಿದ್ದೇನೆ. ರಾಜ್ಯದಲ್ಲಿ ಪ್ರಥಮ ಬಾರಿ ಬಿಜೆಪಿ ಸರ್ಕಾರ ರಚಿಸಲು ಅವಕಾಶ ನೀಡಿರುವುದಕ್ಕೆ ಕೃತಜ್ಞತೆ. ಬಿಜೆಪಿ ನಾಯಕರ ಒಳಜಗಳ ನೋವು ತಂದಿದೆ. ಆದರೆ ಸಾಧಿಸಿದ ಅಭಿವೃದ್ಧಿ ಬಗ್ಗೆ ಸಂತೃಪ್ತಿಯ ಭಾವ ಇದೆ…
ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಆರು ವರ್ಷದ ಹಿಂದೆ ಮಂಗಳೂರಿನಲ್ಲಿ ನಡೆಸಿದ ಸುದ್ದಿಗೋಷ್ಠಿ (2013ರ ಏ.26)ಯಲ್ಲಿ ಹೇಳಿದ ಮಾತುಗಳಿವು. ಮಂಗಳೂರಿನಲ್ಲಿ ಅವರದು ಅದೇ ಕೊನೆಯ ಸುದ್ದಿಗೋಷ್ಠಿ.
ಸುಷ್ಮಾ ಸ್ವರಾಜ್ ಅವರಿಗೆ ದ.ಕ. ಜಿಲ್ಲೆಯ ಬಗ್ಗೆ ವಿಶೇಷ ಅಭಿಮಾನ ಇತ್ತು. ಇಲ್ಲಿನ ಜನಪ್ರತಿನಿಧಿಗಳು ಹಾಗೂ ನಾಯಕರ ಜತೆ ನಿಕಟ ಸಂಪರ್ಕ ಹೊಂದಿದ್ದ ಅವರು ಹಲವು ಬಾರಿ ಭೇಟಿ ನೀಡಿದ್ದರು. ಕರಾವಳಿಗೆ ಬಂದಾಗ ಕನ್ನಡದಲ್ಲೇ ಮಾತನಾಡುವ ಮೂಲಕ ಗಮನ ಸೆಳೆಯುತ್ತಿದ್ದರು.

ಮಾನವೀಯ ಸೇವೆ: ಇತ್ತೀಚಿನ ವರ್ಷಗಳಲ್ಲಿ ಗಲ್ಫ್ ರಾಷ್ಟ್ರಗಳಿಗೆ ಉದ್ಯೋಗಕ್ಕೆ ತೆರಳಿದ ಕರಾವಳಿಯ ಯುವಕರು ಅಲ್ಲಿ ಸಂಕಷ್ಟಕ್ಕೆ ಸಿಲುಕಿದಾಗ ರಕ್ಷಣೆ ನೀಡಿ ಮತ್ತೆ ತಾಯ್ನಡಿಗೆ ಕರೆತರುವಲ್ಲಿ ಸುಷ್ಮಾ ಮಹತ್ತರ ಪಾತ್ರ ವಹಿಸಿದ್ದರು. ವಿದೇಶದಲ್ಲಿ ಮೃತಪಟ್ಟವರ ಪಾರ್ಥಿವ ಶರೀರ ಶೀಘ್ರವಾಗಿ ತರುವಲ್ಲೂ ನೆರವಾಗಿದ್ದರು. ಕರಾವಳಿಯ ಹಲವಾರು ಕುಟುಂಬಗಳು ಸುಷ್ಮಾ ಅವರ ಈ ಮಾನವೀಯ ಸೇವೆಯನ್ನು ಸ್ಮರಿಸುತ್ತಿವೆ.
ಕುವೈಟ್‌ನಲ್ಲಿ ಇತ್ತೀಚೆಗೆ ಕರಾವಳಿಯವರು ಸೇರಿದಂತೆ 75ಕ್ಕೂ ಅಧಿಕ ಯುವಕರಿಗೆ ಉದ್ಯೋಗ ವಂಚನೆಯಾದ ವಿಷಯ ತಿಳಿದು ಸಂಸದ ನಳಿನ್‌ಕುಮಾರ್ ಕಟೀಲ್ ತಕ್ಷಣ ಸುಷ್ಮಾ ಸ್ವರಾಜ್ ಅವರನ್ನು ಭೇಟಿಯಾಗಿದ್ದರು. ಯುವಕರು ಮತ್ತೆ ಊರಿಗೆ ಮರಳಲು ಅವಶ್ಯವಿದ್ದ ತೊಡಕುಗಳನ್ನು ನಿವಾರಿಸುವಲ್ಲಿ ಅವರು ಯಶಸ್ವಿಯಾಗಿದ್ದರು.

ಪೂಜೆಯ ಪ್ರಕರಣ
ಕುವೈತ್‌ನಲ್ಲಿ ಸತ್ಯನಾರಾಯಣ ಪೂಜೆ ಮಾಡಿದ ಘಟನೆ ಸಂಬಂಧಿಸಿ ಅಲ್ಲಿಂದ ಗಡೀಪಾರಾದ ಕರಾವಳಿ ಮೂಲದ 11 ಯುವಕರಿಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನೆರವಾಗಿದ್ದರು. ತಾಯ್ನಡಿಗೆ ಮರಳಿದ ಬಳಿಕ ಯುವಕರು ದೆಹಲಿಯಲ್ಲಿ ಸುಷ್ಮಾ ಅವರನ್ನು ಭೇಟಿಯಾಗಿ ಘಟನೆಯ ಬಗ್ಗೆ ಪೂರ್ಣ ವಿವರ ನೀಡಿದ್ದರು. ಕಾರ್ಮಿಕರ ಹೆಸರನ್ನು ಕುವೈತ್‌ನ ಕಪ್ಪುಪಟ್ಟಿಯಿಂದ ತೆಗೆಯಲು ವ್ಯವಸ್ಥೆ ಮಾಡುವುದಾಗಿ ಸುಷ್ಮಾ ಭರವಸೆ ನೀಡಿದ್ದರು.

ಸುಳ್ಯಕ್ಕೆ ಬಂದಿದ್ದರು
1999ರ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿಯಿಂದ ಸ್ಪರ್ಧಿಸಿ ಗಮನ ಸೆಳೆದಿದ್ದ ಬಳಿಕ ಚುನಾವಣಾ ಪ್ರಚಾರಕ್ಕಾಗಿ ಸುಳ್ಯಕ್ಕೆ ಆಗಮಿಸಿದ್ದರು. ಬಳ್ಳಾರಿಯಲ್ಲಿ ಪ್ರಥಮ ಹಂತದಲ್ಲಿ ಚುನಾವಣೆ ನಡೆದಿದ್ದರೆ, ಮಂಗಳೂರು ಕ್ಷೇತ್ರದಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಿಗದಿಯಾಗಿತ್ತು. ಬಳ್ಳಾರಿ ಚುನಾವಣೆ ಬಳಿಕ ಸುಷ್ಮಾ ಸುಳ್ಯಕ್ಕೆ ಆಗಮಿಸಿ ಆಗಿನ ಬಿಜೆಪಿ ಅಭ್ಯರ್ಥಿ ಧನಂಜಯ ಕುಮಾರ್ ಪರ ಪ್ರಚಾರ ನಡೆಸಿದ್ದರು. ಬೃಹತ್ ಪ್ರಚಾರ ಸಭೆಯಲ್ಲಿ ಕನ್ನಡದಲ್ಲೇ ಮಾತನಾಡಿದ್ದರು. 2011ರಲ್ಲಿ ಸಂಘನಿಕೇತನದಲ್ಲಿ ನಡೆದ ರಾಷ್ಟ್ರೀಯ ಮೀನುಗಾರರ ಸಮಾವೇಶದ ಸಮಾರೋಪ ಸಮಾರಂಭದಲ್ಲೂ ಭಾಗವಹಿಸಿದ್ದರು.

ಚಿತ್ತರಂಜನ್ ಸರ್ಕಲ್‌ನಲ್ಲಿ ಪ್ರಚಾರ
ಉಡುಪಿ: ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅನೇಕ ಬಾರಿ ಉಡುಪಿಗೆ ಭೇಟಿ ನೀಡಿದ್ದರು. 1999ರ ಚುನಾವಣೆ ಸಂದರ್ಭ ಚಿತ್ತರಂಜನ್ ಸರ್ಕಲ್‌ನಲ್ಲಿ ಬಿಜೆಪಿ ಪ್ರಚಾರ ಸಭೆಗೆ ಆಗಮಿಸಿದ್ದ ಸುಷ್ಮಾ ಸ್ವರಾಜ್ ಅವರಿಗೆ ಅಂದಿನ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶೀಲಾ ಕೆ.ಶೆಟ್ಟಿ ತಿಲಕವಿಟ್ಟು ಹೂವು ಮುಡಿಸಿ ಗೌರವ ಸಲ್ಲಿಸಿದ್ದರು.
2009ರಲ್ಲಿ ಪುತ್ತಿಗೆ ಮಠದ ಪರ್ಯಾಯ ಸಂದರ್ಭ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದ ಸುಷ್ಮಾ ಸ್ವರಾಜ್ ಕೃಷ್ಣ ಜನ್ಮಾಷ್ಟಮಿ ಮಹೋತ್ಸವ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಶ್ರೀಕೃಷ್ಣ ಮಠದಲ್ಲೇ ಭೋಜನ ಪ್ರಸಾದ ಸ್ವೀಕರಿಸಿ ತೆರಳಿದ್ದರು. ಮಾಜಿ ಕೇಂದ್ರ ಸಚಿವ ದಿ.ಅನಂತಕುಮಾರ್ ಅಂದು ಸುಷ್ಮಾ ಜತೆಗಿದ್ದರು.

ಇರಾಕ್‌ನಿಂದ 42 ದಾದಿಯರನ್ನು ಕರೆತಂದಿದ್ದ ಸುಷ್ಮಾ!
ಕಾಸರಗೋಡು: 2014ರಲ್ಲಿ ಇರಾಕ್‌ನಲ್ಲಿ ಯುದ್ಧ ಸ್ಥಿತಿಯಿತ್ತು. ಐಸಿಸ್ ಉಗ್ರರ ಒತ್ತೆಸೆರೆಯಲ್ಲಿದ್ದ ಕೇರಳದ 42 ದಾದಿಯರನ್ನು ಸ್ಥಳೀಯ ಕಾರ್ಯಾಚರಣೆಯಲ್ಲಿ ಪೊಲೀಸರು ಬಂಧಮುಕ್ತಗೊಳಿಸಿದ್ದರು. ಬಿಡುಗಡೆ ಹೊಂದಿದ್ದರೂ, ನರ್ಸ್‌ಗಳು ತಾಯ್ನಡಿಗೆ ವಾಪಸ್ ಬರಲು ಸಾಧ್ಯವಾಗಿರಲಿಲ್ಲ. ಅವರನ್ನೆಲ್ಲ ಕರೆತರುವಲ್ಲಿ ಸುಷ್ಮಾ ಸ್ವರಾಜ್ ಮಾಡಿದ ನೆರವನ್ನು ಕೇರಳಿಗರು ಇಂದಿಗೂ ಮರೆತಿಲ್ಲ.

ಎಲ್ಲ ದಾದಿಯರೂ ಇರಾನ್ ವಿಮಾನ ನಿಲ್ದಾಣಕ್ಕೆ ತಲುಪಿದ್ದರೂ, ಸ್ವದೇಶಕ್ಕೆ ವಿಮಾನ ಇಲ್ಲದೆ ಪರದಾಡುವಂತಾಗಿತ್ತು. ಕೇರಳದ ಅಂದಿನ ಮುಖ್ಯಮಂತ್ರಿ ಊಮ್ಮನ್ ಚಾಂಡಿ, ಬಿಡುಗಡೆಗೆ ಪ್ರಯತ್ನ ಆರಂಭಿಸಿದ್ದರೂ ಫಲಿಸಿರಲಿಲ್ಲ. ದಾದಿಯರನ್ನು ಕರೆತರಲು ತೆರಳಿದ್ದ ಭಾರತದ ವಿಮಾನಕ್ಕೆ ಇರಾಕ್‌ನಲ್ಲಿ ಭೂಸ್ಪರ್ಶಕ್ಕೆ ಅನುಮತಿ ಸಿಗಲಿಲ್ಲ. ವಿಮಾನ ವಾಪಸಾಗಲು ಒಂದು ಕ್ಷಣ ಚಿಂತನೆಯೂ ನಡೆದಿತ್ತು. ತಕ್ಷಣ ಸಿಎಂ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಕರೆ ಮಾಡಿದರು. ಆಗ ಸಮಯ ಮಧ್ಯರಾತ್ರಿ 1.30. ಕರೆ ಸ್ವೀಕರಿಸಿದ ಸುಷ್ಮಾ, ಧೈರ್ಯದಿಂದ ಇರಿ. ಪ್ರಯತ್ನ ಮಾಡುತ್ತೇನೆ ಎಂದು ಭರವಸೆಯ ಮಾತುಗಳನ್ನು ಹೇಳಿದ್ದರು.

ಕುವೈತ್‌ನಲ್ಲಿರುವ ಭಾರತೀಯ ದೂತಾವಾಸಕ್ಕೆ ಮಾಹಿತಿ ನೀಡಿದ ಸುಷ್ಮಾ, ಕೇವಲ 15ರಿಂದ 30 ನಿಮಿಷದೊಳಗೆ ವಿಮಾನ ಲ್ಯಾಂಡಿಂಗ್‌ಗೆ ಅವಕಾಶ ಮಾಡಿಕೊಟ್ಟಿದ್ದರು. ಸಂಕಷ್ಟದಲ್ಲಿದ್ದ ಎಲ್ಲ ದಾದಿಯರೂ ಕೇರಳಕ್ಕೆ ಬರುವಲ್ಲಿ ಸುಷ್ಮಾ ಪಾತ್ರ ಮಹತ್ವದ್ದಾಗಿತ್ತು. ಕನ್ನಡದ ಜತೆಗೆ ಮಲಯಾಳಂ ಭಾಷೆಯಲ್ಲಿ ಮಾತನಾಡುವ ಕೌಶಲವೂ ಸುಷ್ಮಾ ಅವರಿಗಿತ್ತು. ಅವರು ಕೇರಳದ ಸಾಕಷ್ಟು ಕಡೆ ಮಲಯಾಳಂನಲ್ಲೇ ಚುನಾವಣಾ ಭಾಷಣ ಮಾಡಿದ್ದರು.

ಸಣ್ಣ ವಯಸ್ಸಿನಲ್ಲೇ ದೇಶಭಕ್ತಿ ಮೈಗೂಡಿಸಿಕೊಂಡು, ದೇಶಸೇವೆಗಾಗಿ ತನ್ನನ್ನು ಮುಡಿಪಾಗಿಸಿಕೊಂಡು ಸರ್ಕಾರದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ, ದೇಶದಲ್ಲಿ ಹೆಚ್ಚು ಜವಾಬ್ದಾರಿಯುಳ್ಳ ಹಾಗೂ ಶ್ರೇಷ್ಠ ಸ್ಥಾನವಾದ ವಿದೇಶಾಂಗ ಸಚಿವೆಯಾಗಿ ಉತ್ತಮ ರೀತಿ ಕಾರ್ಯ ನಿರ್ವಹಿಸಿದ ಸರಳ ಸಜ್ಜನಿಕೆಯ ಧೀಮಂತ ನಾಯಕಿ ಸುಷ್ಮಾ ಸ್ವರಾಜ್ ನಿಧನ ನಮಗೆ ದುಃಖ ತಂದಿದೆ. ಅವರ ಕುಟುಂಬದವರಿಗೆ ದುಃಖ ಸಹಿಸುವ ಶಕ್ತಿ ಕೊಟ್ಟು, ಆತ್ಮಕ್ಕೆ ಸದ್ಗತಿಯಾಗಲಿ ಎಂದು ಶ್ರೀಕೃಷ್ಣ ಮುಖ್ಯಪ್ರಾಣ ದೇವರಲ್ಲಿ ಪ್ರಾರ್ಥಿಸುತ್ತೇವೆ.
ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ,  ಪರ್ಯಾಯ ಪಲಿಮಾರು ಮಠ, ಉಡುಪಿ

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....