ಚಿಕ್ಕಬಳ್ಳಾಪುರ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ವ್ಯಕ್ತಿಯೋರ್ವರಲ್ಲಿ ಶಂಕಿತ ಕೊರೊನಾ ವೈರಸ್ ಪತ್ತೆಯಾಗಿದೆ.
ಸ್ಕ್ರೀನಿಂಗ್ ತಪಾಸಣೆ ವೇಳೆ ಈ ಪ್ರಯಾಣಿಕನಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಂಡುಬಂದಿದ್ದು, ಅವರನ್ನು ರಾಜೀವ ಗಾಂಧಿ ಹೃದ್ರೋಗ ಆಸ್ಪತ್ರೆಗೆ ಆಂಬುಲೆನ್ಸ್ನಲ್ಲಿ ಕರೆದುಕೊಂಡು ಹೋಗಲಾಗುವುದು ಎಂದು ಆರೋಗ್ಯ ಸಿಬ್ಬಂದಿ ತಿಳಿಸಿದ್ದಾರೆ.
ಆ ವ್ಯಕ್ತಿಗೆ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು, ರಕ್ತದ ಮಾದರಿ ಪರಿಶೀಲನೆ ಬಳಿಕವಷ್ಟೇ ದೃಢಪಡಲಿದೆ. (ದಿಗ್ವಿಜಯ ನ್ಯೂಸ್)