More

    ದೆಹಲಿಯಲ್ಲಿ ಶಂಕಿತ ಐಸಿಸ್ ಉಗ್ರನ ಬಂಧನ

    ನವದೆಹಲಿ: ರಾಷ್ಟ್ರೀಯ ತನಿಖಾ ದಳ (NIA)ಗೆ ಬೇಕಾಗಿದ್ದ, ಮೋಸ್ಟ್​ ವಾಂಟೆಡ್​ ಐಸಿಸ್​ ಉಗ್ರನನ್ನು ಭಯೋತ್ಪಾದನಾ ನಿಗ್ರಹ ದಳ ದೆಹಲಿಯಲ್ಲಿ ವಶಕ್ಕೆ ಪಡೆದಿದೆ.

    ಬಂಧಿತನನ್ನು ಶಹನವಾಜ್​ ಅಲಿಯಾಸ್ ಶಫಿ ಉಜ್ಜಾಮ ಎಂದು ತಿಳಿದು ಬಂದಿದೆ. ಈತ ದೆಹಲಿಯಲ್ಲಿ ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು ಶಂಕಿತ ಉಗ್ರನನ್ನು ವಶಕ್ಕೆ ಪಡೆದಿದ್ದಾರೆ.

    ವೃತ್ತಿಯಲ್ಲಿ ಇಂಜಿನಿಯರ್​ ಆಗಿರುವ ಶೆಹನಾಜ್​ ಹಲವು ಪ್ರಕರಣಗಳಲ್ಲಿ ಎನ್ಐಎಗೆ ಬೇಕಾಗಿದ್ದ. ಪುಣೆ ಐಸಿಸ್​ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಈತ ಪೊಲೀಸ್​ ಕಸ್ಟಡಿಯಿಂದ ತಪ್ಪಿಸಿಕೊಂಡು ದೆಹಲಿಯಲ್ಲಿ ತಲೆಮರೆಸಿಕೊಂಡಿದ್ದ. ಈತ ದೆಹಲಿಯಲ್ಲಿ ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts