More

    ಶಂಕಿತ ನಕ್ಸಲ್ ಬಿ.ಜಿ.ಕೃಷ್ಣಮೂರ್ತಿ, ಸಾವಿತ್ರಿ ಕುಂದಾಪುರ ನ್ಯಾಯಾಲಯಕ್ಕೆ ಹಾಜರು

    ಕುಂದಾಪುರ: ಕೇರಳದಲ್ಲಿ ಬಂಧಿತರಾದ ಶಂಕಿತ ನಕ್ಸಲ್‌ವಾದಿಗಳಾದ ಶೃಂಗೇರಿ ತಾಲೂಕು ಭುವನಹಡ್ಲು ಗ್ರಾಮದ ಬಿ.ಜಿ.ಕೃಷ್ಣಮೂರ್ತಿ ಹಾಗೂ ಸಾವಿತ್ರಿ ಅವರನ್ನು ಬುಧವಾರ ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

    ಕುಂದಾಪುರ ತಾಲೂಕು ಅಮಾಸೆಬೈಲ್ ಠಾಣೆಯಲ್ಲಿ 2006ರಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಆರೋಪಿಗಳ ವಿಚಾರಣೆಗಾಗಿ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಕೇರಳ ಜೈಲಿನಲ್ಲಿ ಬಂಧನದಲ್ಲಿದ್ದ ಬಿ.ಜಿ.ಕೃಷ್ಣಮೂರ್ತಿ ಹಾಗೂ ಸಾವಿತ್ರಿ ಅವರನ್ನು ಕಾರ್ಕಳ, ಹೆಬ್ರಿ ಹಾಗೂ ಅಜೆಕಾರು ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣಗಳ ಆರೋಪದ ಹಿನ್ನೆಲೆಯಲ್ಲಿ ಮೇ 3ರಂದು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿ, ಸ್ಥಳ ಮಹಜರು ಮಾಡಲಾಗಿತ್ತು. ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಕೇಶವ ಯಡಿಯಾಳ ಹತ್ಯೆ ಹಾಗೂ ಇತರ ಪ್ರಕರಣಗಳ ವಿಚಾರಣೆಗಾಗಿ ಕುಂದಾಪುರ ಉಪ ವಿಭಾಗದ ಪೊಲೀಸರು ಕೇರಳ ಜೈಲಿನಲ್ಲಿದ್ದ ಇಬ್ಬರು ಶಂಕಿತ ನಕ್ಸಲ್ವಾದಿಗಳನ್ನು ಕುಂದಾಪುರ ಹೆಚ್ಚುವರಿ ಸಿವಿಲ್ ನ್ಯಾಯಾಲಯ ವಿಭಾಗ ಮೂರಕ್ಕೆ ಬುಧವಾರ ಹಾಜರುಪಡಿಸಿದರು.

    ಅಮಾಸೆಬೈಲ್ ಠಾಣೆಯಲ್ಲಿ ಇವರಿಬ್ಬರ ವಿರುದ್ಧ 4, ಶಂಕರನಾರಾಯಣ ಠಾಣೆಯಲ್ಲಿ 6 ಹಾಗೂ ಕೊಲ್ಲೂರು ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿವೆ.
    ಬಿ.ಜಿ.ಕೃಷ್ಣಮೂರ್ತಿ ವಿರುದ್ದ 53 ಹಾಗೂ ಸಾವಿತ್ರಿ ವಿರುದ್ಧ ಒಟ್ಟು 22 ಪ್ರಕರಣಗಳಿವೆ. ಕೇರಳದ ಗಡಿ ಭಾಗವಾದ ವಯನಾಡ್, ಸುಲ್ತಾನ್‌ಬತ್ತೇರಿಯಲ್ಲಿ ನ.10ರಂದು ಕೇರಳದ ಭಯೋತ್ಪಾದನಾ ನಿಗ್ರಹ ಪಡೆ ಅವರನ್ನು ಬಂಧಿಸಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts