

ನವದೆಹಲಿ: ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಶಂಕಿಸಿ ಮಹಿಳೆಯ ಪತಿ ಆಕೆಯ ಸಹೋದ್ಯೋಗಿಯನ್ನು ಹತ್ಯೆ ಮಾಡಿರುವ ಘಟನೆ ಆಗ್ನೇಯ ದೆಹಲಿಯ ಗೋವಿಂದಪುರಿಯಲ್ಲಿ ನಡೆದಿದೆ.
ಮೃತ ದುರ್ದೈವಿ ಹೆಸರು ವೀರೆಂದರ್(35) ಎಂದು ತಿಳಿದು ಬಂದಿದ್ದು ಆರೋಪಿ ಸೋನು(33) ಅಲಿಯಾಸ್ ಧಾರ್ನನ್ಜು ಬಂಧಿಸಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ಮೃತ ದುರ್ದೈವಿ ಹಾಗೂ ಆರೋಪಿಯ ಪತ್ನಿ ಒಂದೇ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದರು. ವೀರೇಂದರ್ ಶಾಲಾ ಬಸ್ಸಿನ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಮತ್ತು ಆರೋಪಿಯ ಪತ್ನಿ ಆಫೀಸ್ ಸ್ಟಾಫ್ ಆಗಿ ಕೆಲಸ ಮಾಡುತ್ತಿದ್ದರು.
ಇಬ್ಬರ ನಡುವಿನ ಸ್ನೇಹವನ್ನು ಅಪಾರ್ಥ ಮಾಡಿಕೊಂಡ ಆರೋಪಿ ಸೋನು ವೀರೇಂದರ್ನನ್ನು ಥಳಿಸಿ ಚಾಕುವಿನಿಂದ ಹಲವು ಭಾರಿ ಇರಿದು ಪರಾರಿಯಾಗಿದ್ದಾನೆ. ತಮ್ಮ ಸಹೋದರ ರಕ್ತಸ್ರಾವದಿಂದ ನರಳುತ್ತಿದ್ದನ್ನು ಗಮನಿಸಿದ ವೀರೆಂದರ್ ಸಹೋದರ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ಅಧಿಕಾರಿಗಳು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಮತ್ತು ಅಷ್ಟರಲ್ಲಾಗಲೇ ದುರ್ದೈವಿಯ ಪ್ರಾಣ ಪಕ್ಷಿ ಹಾರಿ ಹೋಗಿದೆ ಎಂದು ವೈದ್ಯರು ಘೋಷಿಸಿದ್ದಾರೆ.
ಆರೋಪಿಯನ್ನು ದೆಹಲಿಯ ಜುಗ್ಗೀಸ್ ಪ್ರದೇಶದ ನವಜೀವನ ಕ್ಯಾಂಪ್ನಲ್ಲಿ ಬಂಧಿಸಿರುವ ಪೊಲೀಸರು ಕೊಲೆಗೆ ಬಳಸಿ್ದ ಚಾಕು ಹಾಗು ಇನ್ನಿತರೆ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.