

ವಿಟ್ಲ: ಇಡ್ಕಿದು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ರಾಜಕೀಯ ಪಕ್ಷದ ಸಭೆ ನಡೆಸಲು ಅವಕಾಶ ನೀಡಿದ ಆರೋಪದಲ್ಲಿ ಪಿಡಿಒ ಅವರನ್ನು ಅಮಾನತು ಮಾಡಿ ದ.ಕ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಆದೇಶ ಹೊರಡಿಸಿದ್ದಾರೆ.
ಪಂಚಾಯಿತಿ ಸಭಾಭವನದಲ್ಲಿ ಜೂನ್ ೨೩ರಂದು ರಾಜಕೀಯ ಪಕ್ಷದ ಸಭೆ ನಡೆಸಿದ್ದು, ಕರ್ನಾಟಕ ನಾಗರಿಕ ಸೇವಾ ನಡತೆ ನಿಯಮವನ್ನು ಉಲ್ಲಂಘಿಸಿ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಪಿಡಿಒ ಗೋಕುಲ್‌ದಾಸ್ ಭಕ್ತ ಅಮಾನತುಗೊಳಿಸಿದ್ದಾರೆ. ಬಂಟ್ವಾಳ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಪಿಡಿಒಗೆ ಕಾರಣ ಕೇಳಿ ನೋಟಿಸ್ ನೀಡಿದ್ದು, ಇದಕ್ಕೆ ಪಂಚಾಯಿತಿ ಅಭಿವೃದ್ಧಿ ಅಽಕಾರಿ ಕಚೇರಿ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಿರುವುದು ಗಮನಕ್ಕೆ ಬಂದಿಲ್ಲ ಎಂದು ಸಮಜಾಯಿಷಿ ನೀಡಿದ್ದರು. ಇದು ಒಪ್ಪತಕ್ಕದ್ದಲ್ಲ ಮತ್ತು ಸರ್ಕಾರಿ ಕಚೇರಿಯಲ್ಲಿ ಯಾವುದೇ ರಾಜಕೀಯ ಪಕ್ಷಗಳ ಸಭೆ ಸಮಾರಂಭಗಳಿಗೆ ಅವಕಾಶ ನೀಡುವುದು ಸಮಂಜಸವಲ್ಲ. ಕರ್ತವ್ಯಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಜಿಲ್ಲಾ ಪಂಚಾಯಿತಿಗೆ ನೀಡಿದ ವರದಿಯಲ್ಲಿ ಉಲ್ಲೇಖಿಸಿದ್ದರು.