More

    ಭ್ರಷ್ಟಾಚಾರದಲ್ಲಿ ಭಾಗಿಯಾಗಿದವರಿಗೆ ಅಮಾನತು

    ಕೆ.ಆರ್.ನಗರ: ಸಾಲಿಗ್ರಾಮ ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು, ಲಂಚಾವತಾರ ಮಿತಿ ಮೀರಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿ ಬಂದಿದೆ. ಈ ಬಗ್ಗೆ ಸಮಗ್ರ ತನಿಖೆ ಕೈಗೊಂಡು ತಪ್ಪಿತಸ್ಥರನ್ನು ಸೇವೆಯಿಂದ ಅಮಾನತು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಎಚ್ಚರಿಸಿದದರು.

    ಪಟ್ಟಣದ ತಾಲೂಕು ಪಂಚಾಯಿತಿಯ ಕೃಷ್ಣರಾಜೇಂದ್ರ ಸಭಾಂಣದಲ್ಲಿ ಶುಕ್ರವಾರ ಆಯೋಜಿಸಿದ್ದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಈ ವಿಚಾರವನ್ನು ಅತ್ಯಂತ ಗಂಬೀರವಾಗಿ ಪರಿಗಣಿಸಿದ್ದು ಮೂರು ದಿನಗಳಲ್ಲಿ ಅಧಿಕಾರಿಗಳ ತಂಡ ಕಳುಹಿಸಿ ಎಲ್ಲ ದಾಖಲೆಗಳನ್ನು ಸಮಗ್ರವಾಗಿ ಪರಿಶೀಲನೆ ಮಾಡಿಸಲಾಗುವುದು ಎಂದರು.

    ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡಲು ಹಣ ಕೇಳುತ್ತಿದ್ದು, ಇದು ಅತ್ಯಂತ ನಾಚಿಕೆಗೇಡಿನ ವಿಚಾರ. ಈ ಸಂಬಂದ ನನಗೆ ಹತ್ತಾರು ದೂರುಗಳು ಬಂದಿರುವುದರಿಂದ ತಪ್ಪಿಸ್ಥರಿಗೆ ಶಿಕ್ಷೆ ಖಚಿತ ಎಂದು ಎಚ್ಚರಿಕೆ ನೀಡಿದರು.

    ಮೂರು ದಿನ ಸತತವಾಗಿ ಕಚೇರಿಗೆ ವರುವುದು 10 ನಿಮಿಷ ವಿಳಂಬವಾದರೆ ಒಂದು ದಿನದ ಸಿಎಲ್ ಹಾಕಲಾಗುತ್ತದೆ. ಸರ್ಕಾರದ ಆದೇಶ ಮೀರಿದರೆ ಶಿಸ್ತು ಕ್ರಮ ಕಟ್ಟಿಟ್ಟ ಬುತ್ತಿ ಎಂದರು.

    ತಾಲೂಕು ಮಟ್ಟದ ಅಧಿಕಾರಿಗಳು ಶಿಷ್ಟಾಚಾರ ಪಾಲಿಸಿ ಶಾಸಕರ ಮಾರ್ಗದರ್ಶನ ಮತ್ತು ಸೂಚನೆಯಂತೆ ಕೆಲಸ ನಿರ್ವಹಿಸಬೇಕು. ಜತೆಗೆ ಎಲ್ಲ ಚುನಾಯಿತ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ಪಡೆಯಬೇಕೆಂದು ತಾಕೀತು ಮಾಡಿದರು.

    ಸಾಲಿಗ್ರಾಮ ತಾಲೂಕಿನ ಮಿರ್ಲೆ ಉಪ ನೋಂದಣಾಧಿಕಾರಿಯಾಗಿ ದ್ವಿತೀಯ ದರ್ಜೆ ಸಹಾಯಕ ಪ್ರಭಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವುದರ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದ ಡಿಸಿ, ಈ ಬಗ್ಗೆ ಸಂಬಂಧಪಟ್ಟವರೊಂದಿಗೆ ಮಾತನಾಡುವುದಾಗಿ ತಿಳಿಸಿದರು.

    ಅಗತ್ಯವಿರುವ ಅಂಗನವಾಡಿ ಕೇಂದ್ರಗಳಿಗೆ ಇನ್ನೊಂದು ತಿಂಗಳೊಳಗೆ ಸ್ಥಳ ಗುರುತಿಸದಿದ್ದರೆ ಸಂಬಂಧಿಸಿದ ಕಂದಾಯಾಧಿಕಾರಿ ಮತ್ತು ಗ್ರಾಮ ಲೆಕ್ಕಾಧಿಕಾರಿಯನ್ನು ಅಮಾನತು ಮಾಡಲಾಗುವುದು ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts