ಹಣ ಪಡೆದು ಪರಿಹಾರ ವಿತರಿಸಿದರೆ ಅಮಾನತು


ಬ್ಯಾಡಗಿ: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಇಂಜಿನಿಯರ್​ಗಳು ಮನೆ ಫಲಾನುಭವಿಗಳ ಆಯ್ಕೆಯಲ್ಲಿ ಹಣ ಪಡೆದಿರುವ ಕುರಿತು ದೂರುಗಳು ಬಂದಲ್ಲಿ ಮುಲಾಜಿಲ್ಲದೆ ಅಮಾನತು ಮಾಡಲಾಗುವುದು ಎಂದು ಶಾಸಕ ಬಸವರಾಜ ಶಿವಣ್ಣನವರ ಎಚ್ಚರಿಸಿದರು.
ತಾಲೂಕಿನ ಕದರಮಂಡಲಗಿ, ಬಿಸಲಹಳ್ಳಿ, ಬನ್ನಿಹಟ್ಟಿ, ಶಿಡೇನೂರ, ಆಣೂರು ಸೇರಿ ವಿವಿಧ ಗ್ರಾಮಗಳಲ್ಲಿ ಮನೆಬಿದ್ದ ಪ್ರಕರಣಗಳ ಕುರಿತು ಮಾಹಿತಿ ಪಡೆದ ಅವರು, ಫಲಾನುಭವಿಗಳಿಗೆ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು.
ತಾಲೂಕಿನಾದ್ಯಂತ ತಿಂಗಳಿಂದ ಸತತ ಮಳೆ ಸುರಿಯುತ್ತಿದ್ದು, ಅಲ್ಲಲ್ಲಿ ಮನೆಗಳು, ರಸ್ತೆ, ಕಟ್ಟಡಗಳು ಹಾನಿಯಾಗಿವೆ. ನೈಜವಾಗಿ ಮನೆ ಕಳೆದುಕೊಂಡ ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಿ ಪರಿಹಾರ ವಿತರಿಸುವಲ್ಲಿ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು. ನೈಜ ಫಲಾನುಭವಿಗಳು ಯಾರೇ ಇರಲಿ ಪಕ್ಷಪಾತವಿಲ್ಲದೆ ಎಲ್ಲರಿಗೂ ನ್ಯಾಯ ದೊರಕಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗ್ರಾಮದಲ್ಲಿ ಮಳೆ ನೆಪದಲ್ಲಿ ಜೆಸಿಬಿ ಹಚ್ಚಿ ಮನೆ ಕೆಡುವುದು ಅಥವಾ ಇನ್ಯಾವುದೇ ರೂಪದಲ್ಲಿ ಮನೆ ನೆಲಸಮಗೊಳಿಸಿ ಸರ್ಕಾರದ ಪರಿಹಾರಕ್ಕೆ ಅರ್ಜಿ ಸಲ್ಲಿಸುವವರ ಮೇಲೆ ನಿಗಾ ಇಡಬೇಕು. ಇಂಜಿನಿಯರ್​ಗಳು ಫಲಾನುಭವಿಗಳಿಂದ ಹಣ ಪಡೆದು, ಪರಿಹಾರ ನೀಡುವುದು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ತಾಲೂಕಿನಾದ್ಯಂತ ನೂರಕ್ಕೂ ಹೆಚ್ಚು ಡೆಂಘೆ ಪ್ರಕರಣಗಳು ಪತ್ತೆಯಾಗಿವೆ. ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ನಿರ್ಲಕ್ಷ್ಯ ತೋರದೆ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಈ ಕುರಿತು ವಾರಕ್ಕೆ ಎರಡು ಬಾರಿ ಸ್ಥಳೀಯ ಮಟ್ಟದಲ್ಲಿ ಸಭೆ ನಡೆಸಿ ಸೂಕ್ತ ನಿರ್ಣಯ ತೆಗೆದುಕೊಳ್ಳಬೇಕು ಎಂದರು.
ತಹಸೀಲ್ದಾರ್ ಫಿರೋಜ್ ಷಾ ಸೋಮನಕಟ್ಟಿ ಮಾತನಾಡಿ, ತಾಲೂಕಿನ 21 ಗ್ರಾಮ ಪಂಚಾಯಿತಿ ವ್ಯಾಪ್ತಿಗಳಿಗೆ ಸೇರಿ ಒಟ್ಟು 112 ಮನೆಗಳಿಗೆ ಹಾನಿಯಾಗಿದೆ. ಈ ಪೈಕಿ 10ಕ್ಕೂ ಹೆಚ್ಚು ಮನೆಗಳು ಸಂಪೂರ್ಣ ನೆಲಸಮಗೊಂಡಿದ್ದು, ಪರಿಹಾರಕ್ಕೆ ಅರ್ಜಿ ಪಡೆಯಲಾಗಿದೆ. ಕಚ್ಚಾ ಮನೆಗಳಿಗೆ ಶೇ. 15ಕ್ಕಿಂತ ಹೆಚ್ಚು ಹಾನಿಯಾದಲ್ಲಿ 6500 ರೂ. ಹಾಗೂ ಪಕ್ಕಾ ಮನೆಗಳ ಹಾನಿಗೆ 4800 ರೂ. ಅಲ್ಲದೆ, ಸಂಪೂರ್ಣ ಮನೆ ಬಿದ್ದ ಫಲಾನುಭವಿಗಳಿಗೆ 1.20 ಲಕ್ಷ ರೂ. ವಿತರಣೆಗೆ ಸರ್ಕಾರದ ನಿರ್ದೇಶನವಿದೆ. ಖುದ್ದಾಗಿ ತೆರಳಿ ಪರಿಶೀಲನೆ ಬಳಿಕ ಅಂದಾಜು ಪಟ್ಟಿ ಸಿದ್ಧಪಡಿಸಲಾಗುವುದು ಎಂದು ತಿಳಿಸಿದರು.
ತಾಪಂ ಇಒ ಮಲ್ಲಿಕಾರ್ಜುನ ಕೆ.ಎಂ., ಗ್ರಾಪಂ ಅಧ್ಯಕ್ಷ ಚಿನ್ನಪ್ಪ ಹೊಸಮನಿ, ದಾನಪ್ಪ ಚೂರಿ, ಶಂಭನಗೌಡ ಪಾಟೀಲ, ಚನ್ನಬಸಪ್ಪ ಹುಲ್ಲತ್ತಿ, ಮಾರುತಿ ಅಚ್ಚೀಗೇರಿ, ಪಿಡಿಒ ಹನುಮಂತಪ್ಪ ಎರೆಸೀಮೆ, ಶಿವಾನಂದ ಕುಬಟೂರು, ಇತರರಿದ್ದರು.

Share This Article

ಮಧ್ಯಾಹ್ನ, ರಾತ್ರಿ ಊಟದಲ್ಲಿ ಜಾಸ್ತಿ ಉಪ್ಪು ಸೇವಿಸಿದ್ರೆ ಕ್ಯಾನ್ಸರ್‌ ಬರೋದು ಪಕ್ಕಾ! ಇರಲಿ ಎಚ್ಚರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…

ಮಕ್ಕಳಿಗೆ ಬಾಳೆಹಣ್ಣು ಕೊಡುವ ಮುನ್ನ ಈ ವಿಚಾರಗಳು ನಿಮಗೆ ಗೊತ್ತಿರಲಿ ಇಲ್ಲದಿದ್ರೆ ಆರೋಗ್ಯ ಕೆಡಬಹುದು ಎಚ್ಚರ!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…

ತೂಕ ಕಳೆದುಕೊಂಡಿದ್ದೀರಾ? ಲಘುವಾಗಿ ಪರಿಗಣಿಸಬೇಡಿ, ನಿಮಗೆ ಈ ಆರೋಗ್ಯ ಸಮಸ್ಯೆಗಳಿರಬಹುದು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…