More

    ಚುನಾವಣಾ ಕರ್ತವ್ಯಲೋಪ ಎಸಗಿದ ನಾಲ್ವರ ಅಮಾನತು

    ವಿಜಯಪುರ: ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮೇಲಧಿಕಾರಿಗಳ ಆದೇಶ ಪಾಲನೆ ಮಾಡದೆ ಕರ್ತವ್ಯಲೋಪ ಎಸಗಿದ ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಆದೇಶಿಸಿದ್ದಾರೆ.

    ಚುನಾವಣಾ ಕರ್ತವ್ಯ ನಿರ್ವಹಿಸುವಲ್ಲಿ ನಿಷ್ಕಾಳಜಿ ತೋರಿ, ಕರ್ತವ್ಯಲೋಪ ಎಸಗಿರುವ ಮುದ್ದೇಬಿಹಾಳದ ಸಹಾಯಕ ತೋಟಗಾರಿಕೆ ಅಧಿಕಾರಿ ಶಿವನಿಂಗಪ್ಪ ಕುಂಬಾರ, ಮುದ್ದೆಬಿಹಾಳ ಸಮಾಜ ಕಲ್ಯಾಣ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ಸಂಜೀವ ಲಮಾಣಿ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಕಿರಿಯ ಅಭಿಯಂತರ ವಿಜಯಕುಮಾರ ನಾಯಕ, ಕೋಳೂರಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಂಗರಾಜ್ ಬಿ.ಆರ್., ಇವರ ವಿರುದ್ಧ ಇಲಾಖೆ ವಿಚಾರಣೆ ಬಾಕಿಯಿರಿಸಿ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ.

    ಅಮಾನತುಗೊಂಡಿರುವ ಅಧಿಕಾರಿಗಳು ಮೇಲಧಿಕಾರಿಗಳ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡುವಂತಿಲ್ಲ. ಕರ್ನಾಟಕ ನಾಗರಿಕ ಸೇವಾ ನಿಯಮ 98 ರನ್ವಯ ಜೀವನಾಂಶ ಭತ್ಯೆ ಪಡೆಯಲು ಅರ್ಹತೆ ಹೊಂದಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts