ಸದನಕ್ಕೆ ಶೋಭೆಯಲ್ಲ: ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ ಶಾಸಕರ ಅಮಾನತು

ಕಾಗದಪತ್ರ ಎಸೆದು ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ ಬಿಜೆಪಿಯ 10 ಶಾಸಕರನ್ನು ಅಮಾನತುಗೊಳಿಸಲಾಗಿದೆ. ಸಸ್ಪೆಂಡ್ ಆದವರನ್ನು ಮಾರ್ಷಲ್​ಗಳು ಬಲವಂತವಾಗಿ ಹೊರಹಾಕಿದ್ದಾರೆ. ಇದನ್ನು ವಿರೋಧಿಸಿ ಬಿಜೆಪಿ ಸದಸ್ಯರು ಸ್ಪೀಕರ್ ಕಚೇರಿ ಮೆಟ್ಟಿಲು ಮೇಲೆ ಕುಳಿತು ಪ್ರತಿಭಟನೆ ಕೈಗೊಂಡಿದ್ದಾರೆ. ಇಂತಹ ನಾಟಕೀಯ ಹಾಗೂ ಅಪೇಕ್ಷಿತವಲ್ಲದ ಘಟನೆಗಳಿಗೆ 13ನೇ ವಿಧಾನಸಭೆಯ ಮೊದಲ ಅಧಿವೇಶನ ಸಾಕ್ಷಿಯಾಗಿದೆ.

ಬೆಂಗಳೂರಿನಲ್ಲಿ ನಡೆದಿದ್ದ ಪ್ರತಿಪಕ್ಷ ನಾಯಕರ ಸಭೆಗೆ ಆಗಮಿಸಿದ ಗಣ್ಯರನ್ನು ಸ್ವಾಗತಿಸಲು ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿದ್ದಕ್ಕೆ ಸರ್ಕಾರ ಉತ್ತರ ನೀಡುವಂತೆ ಆಗ್ರಹಿಸಿ ಬಿಜೆಪಿ ಮುಖಂಡರು ಧರಣಿ ನಡೆಸಿದ್ದರು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ‘ಕೆಲವು ಗಣ್ಯರನ್ನು ರಾಜ್ಯ ಅತಿಥಿಗಳೆಂದು ಪರಿಗಣಿಸಿ ಅವರನ್ನು ಬರಮಾಡಿಕೊಳ್ಳಲು ಶಿಷ್ಟಾಚಾರದ ಪ್ರಕಾರ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ’ ಎಂದು ಉತ್ತರಿಸಿದರೂ ಬಿಜೆಪಿ ಶಾಸಕರು ಧರಣಿ ಮುಂದುವರಿಸಿದ್ದಾರೆ. ಧರಣಿ ನಡುವೆಯೇ ಮಸೂದೆಗಳನ್ನು ಪಾಸ್ ಮಾಡಲಾಗಿದ್ದು, ಭೋಜನ ವಿರಾಮಕ್ಕೆ ಅವಕಾಶ ನೀಡದೆ ಸದನ ಮುಂದುವರಿಸಿದ್ದರಿಂದ ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪೀಠದಲ್ಲಿ ಇದ್ದ ಉಪಸಭಾಧ್ಯಕ್ಷರ ಮೇಲೆ ಬಿಲ್ ಪ್ರತ್ರಿಯನ್ನು ಹರಿದು ಎಸೆದಿದ್ದಾರೆ. ಪೀಠಕ್ಕೆ ಅಗೌರವ ತೋರಿಸಿದ ಕಾರಣಕ್ಕಾಗಿ 10 ಸದಸ್ಯನ್ನು ಅಮಾನತು ಮಾಡಲಾಗಿದೆ. ವಿಧಾನಸಭೆ ಕಲಾಪಗಳಲ್ಲಿ ಉಪಸ್ಥಿತರಿರುವಾಗ ಸದಸ್ಯರ ವರ್ತನೆ, ನಡವಳಿಕೆ ಹೇಗಿರಬೇಕು ಎಂಬುದರ ಕುರಿತು ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಗಳು ಸ್ಪಷ್ಟವಾಗಿ ಹೇಳುತ್ತವೆ. ಸದನದಲ್ಲಿ ಪ್ರತಿಭಟನೆ ಸೂಚಿಸಿ ಕಾಗದಪತ್ರಗಳನ್ನು ಹರಿದುಹಾಕತಕ್ಕುದಲ್ಲ ಎಂಬುದು ಕೂಡ ಈ ನಿಯಮಾವಳಿಗಳಲ್ಲಿ ಸೇರಿದೆ. ಏರುಸ್ವರದಿಂದ ಮಾತನಾಡಬಾರದು, ಸದನದಲ್ಲಿ ನಿಶಬ್ದವಾಗಿರಬೇಕು, ಘೋಷಣೆ ಕೂಗಬಾರದು, ಸದನದ ಪೀಠದ ಬಳಿ ಹೋಗತಕ್ಕುದಲ್ಲ, ಸದಸ್ಯರ ಮೇಲೆ ವೈಯಕ್ತಿಕ ದೋಷಾರಣೆ ಮಾಡುವಂತಿಲ್ಲ… ಹೀಗೆ ಹತ್ತುಹಲವು ನಿಯಮಗಳನ್ನು ರೂಪಿಸಲಾಗಿದೆ. ಆದರೆ, ಎಷ್ಟು ಶಾಸಕರು ಈ ನಿಯಮಗಳನ್ನು ತಿಳಿದುಕೊಂಡಿದ್ದಾರೆ ಹಾಗೂ ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಬಂದಿದ್ದಾರೆ ಎಂಬುದು ಮಾತ್ರ ಪ್ರಶ್ನಾರ್ಹವಾಗಿದೆ.

2021ರ ಜುಲೈನಲ್ಲಿ ಮಹಾರಾಷ್ಟ್ರದಲ್ಲಿ 12 ಬಿಜೆಪಿ ಶಾಸಕರನ್ನು ಒಂದು ವರ್ಷ ಅವಧಿಗೆ ಅಮಾನತುಗೊಳಿಸುವ ನಿರ್ಣಯವನ್ನು ಕೈಗೊಳ್ಳಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಶಾಸಕರನ್ನು ಪೂರ್ಣ ವರ್ಷಕ್ಕೆ ಅಮಾನತುಗೊಳಿಸಿರುವುದು ಮೇಲ್ನೋಟಕ್ಕೆ ಅಸಾಂವಿಧಾನಿಕ ಮತ್ತು ಉಚ್ಚಾಟನೆಗಿಂತ ಕೆಟ್ಟದು ಎಂದು ಹೇಳಿದೆ. ಈಗ ಕರ್ನಾಟಕದಲ್ಲಿ ಪ್ರಸಕ್ತ ಅಧಿವೇಶನದ ಅವಧಿ ಮುಗಿಯುವವರೆಗೂ ಶಾಸಕರನ್ನು ಅಮಾನತು ಮಾಡಿ ಸಭಾಧ್ಯಕ್ಷ ಯು.ಟಿ ಖಾದರ್ ಆದೇಶಿಸಿದ್ದಾರೆ. ಆದರೆ, ಅಧಿವೇಶನ ಇನ್ನು 2 ದಿನ ಮಾತ್ರ ಬಾಕಿ ಇದೆ. ಹೀಗಾಗಿ, ಅಮಾನತು ಮಾಡುವಂತಹ ಗಂಭೀರ ಕ್ರಮ ಕೈಗೊಳ್ಳುವುದು ಹಾಗೂ ಅದನ್ನು ವಿರೋಧಿಸಿ ಪ್ರತಿಭಟಿಸುವುದು ಎಷ್ಟೊಂದು ತರ್ಕಬದ್ಧ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಈ ಬೆಳವಣಿಗೆಯಿಂದಾಗಿ ಕಲಾಪದ ಬಹುಮೂಲ್ಯ ಸಮಯ ಇನ್ನಷ್ಟು ವ್ಯರ್ಥವಾಗುವುದು ಮಾತ್ರ ನಿಶ್ಚಿತವಾಗಿದೆ.

13ನೇ ವಿಧಾನಸಭೆಯ ಮೊದಲ ಹಾಗೂ ಸಾಕಷ್ಟು ಮಹತ್ವವುಳ್ಳ ಅಧಿವೇಶನ ಇದಾಗಿದೆ. ಜುಲೈ 7ರಂದು ಬೃಹತ್ ಮೊತ್ತದ ಬಜೆಟ್ ಕೂಡ ಇದೇ ಅಧಿವೇಶನದಲ್ಲಿ ಮಂಡಿಸಲಾಗಿದೆ. ಆದರೆ, ಆರಂಭದಿಂದಲೂ ಅನಗತ್ಯ ಜಟಾಪಟಿ, ವೈಯಕ್ತಿಕ ಆರೋಪಗಳೇ ಸದನದ ಸಾಕಷ್ಟು ಸಮಯವನ್ನು ನುಂಗಿಹಾಕಿವೆ. ಈಗ ನಡೆದಿರುವ ಅಮಾನತು ಬೆಳವಣಿಗೆಯಂತೂ ಸದನಕ್ಕೆ ಶೋಭೆ ತರುವ ಸಂಗತಿಯಲ್ಲ. ಆಡಳಿತ ಹಾಗೂ ವಿರೋಧಪಕ್ಷಗಳ ಸದಸ್ಯರು ಸದನಕ್ಕೆ ಗೌರವ ತರುವ ರೀತಿಯಲ್ಲಿ ವರ್ತಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಪೇಕ್ಷಣೀಯ.

ಮಕ್ಕಳನ್ನು ಡೌನ್​ಲೋಡ್ ಮಾಡಿಕೊಳ್ಳುವ ಕಾಲ ಬರಬಹುದಾ?; ಇದೇನಿದು ಅಪ್ಪ-ಅಮ್ಮ ಇಲ್ಲದೆ ಮಗು ಹುಟ್ಟಿಸೋ ಪ್ರಯತ್ನ!

ಅವರನ್ನು ಟೆರರಿಸ್ಟ್ ಅಂತ ಈಗಲೇ ಹೇಳಲು ಸಾಧ್ಯವಿಲ್ಲ: ಗೃಹಸಚಿವ ಪರಮೇಶ್ವರ್

Share This Article

ಪುರುಷರೇ ಎಡಗೈ, ಮಹಿಳೆಯರ ಬಲ ಅಂಗೈ ತುರಿಕೆಯಾದ್ರೆ ಕಾದಿದೆ ಈ ಗಂಡಾಂತರ!

ಬೆಂಗಳೂರು: ಅಂಗೈ ತುರಿಕೆಯಾಗಿದೆ ಎಂದರೆ ಹಣ ಬರುತ್ತದೆ ಎಂದು ಹಲವರು ಹೇಳುತ್ತಾರೆ. ಕೆಲವರು ಹಣ ಕಳೆದುಕೊಳ್ಳುತ್ತಿದ್ದಾರೆ…

ಈ ದಿನಾಂಕದಂದು ಜನಿಸಿದವರು ಜೀವನದಲ್ಲಿ ರಾಜರಂತೆ ಬದುಕುತ್ತಾರೆ… ನೀವೂ ಇದೇ ದಿನ ಹುಟ್ಟಿದ್ದೀರಾ ನೋಡಿ!

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…

ಈ ಮೂರು ಕೆಲಸಗಳನ್ನು ಮಾಡಿದ ನಂತರ ಹಲ್ಲುಜ್ಜಬೇಡಿ! ಅನಾರೋಗ್ಯಕ್ಕೊಳಗಾಗುವುದು ಖಂಡಿತ..

ಬೆಂಗಳೂರು: ಬಾಯಿಯನ್ನು ಸುರಕ್ಷಿತವಾಗಿಟ್ಟುಕೊಳ್ಳುವುದು ಆರೋಗ್ಯಕ್ಕೆ ಬಹಳ ಮುಖ್ಯ. ಸೂಕ್ಷ್ಮಜೀವಿಗಳು ಬಾಯಿಯ ಮೂಲಕ ಹೊಟ್ಟೆಯನ್ನು ಪ್ರವೇಶಿಸುತ್ತವೆ. ಇದು…