More

    ಸಂಸದರ ಅಮಾನತ್ತು ಪ್ರಜಾಪ್ರಭುತ್ವ ವಿರೋಧಿ

    ರಾಯಚೂರು: ಸಂಸದರ ಅಮಾನತ್ತುಗೊಳಿಸಿರುವ ಕೇಂದ್ರ ಸರ್ಕಾರದ ಸರ್ವಾಕಾರಿ ಧೋರಣೆಯನ್ನು ಖಂಡಿಸಿ ಸ್ಥಳೀಯ ಅಂಬೇಡ್ಕರ್ ವೃತ್ತದಲ್ಲಿ ಸಿಪಿಐಎಂನಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
    ಸಂಸತ್ತಿನ ಚಳಿಗಾಲದ ಅವೇಶನದಲ್ಲಿ 146 ಪ್ರತಿಪಕ್ಷದ ಸಂಸದರನ್ನು ಅಮಾನತ್ತುಗೊಳಿಸಿರುವ ಕೇಂದ್ರ ಸರ್ಕಾರದ ನಡೆ ಪ್ರಜಾಪ್ರಭುತ್ವ ವಿರೋಯಾಗಿದ್ದು, ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ದೂರಿದರು.
    ಕಾರ್ಪೋರೇಟ್ ಬಂಡವಾಳಶಾಯಿಗಳ ಲೂಟಿಗಾಗಿ ಸಂಸತ್ತನ್ನು ಬಲಿಕೊಡಲು ಪ್ರಧಾನಿ ಮೋದಿ ಸಿದ್ಧವಾಗಿದ್ದಾರೆ. ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೇಯಲ್ಲಿ ಸಂಸತ್ತು ಅತ್ಯಂತ ಪ್ರಧಾನ ಅಂಗವಾಗಿದ್ದು, ಪ್ರಶ್ನೆ ಕೇಳಿದ ಕಾರಣಕ್ಕಾಗಿ ಸಂಸದರನ್ನು ಅಮಾನತ್ತುಗೊಳಿಸುವ ಕ್ರಮ ಸರ್ವಾಕಾರಿ ಧೋರಣೆಯಾಗಿದೆ.
    ಸಂಸತ್ ಭವನದಲ್ಲಿ ಕಲಾಪ ಸಂದರ್ಭದಲ್ಲಿ ದಾಳಿ ನಡೆದಿರುವುದು ಗಂಭೀರ ಭದ್ರತಾ ಲೋಪವಾಗಿದೆ. ಅದಕ್ಕೆ ಗೃಹ ಸಚಿವರಿಂದ ಉತ್ತರ ಬಯಸುವ, ಪ್ರಶ್ನಿಸುವ ಹಕ್ಕು ಸಂಸದರಿಗಿದೆ. ಆದರೆ ಬಿಜೆಪಿ ಸರ್ಕಾರ ಸಂಸದರನ್ನು ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಗೌರವದಿಂದ ಕಾಣುತ್ತಿದೆ.
    ಪ್ರಜಾಪ್ರಭುತ್ವದ ಉಳಿವಿಗಾಗಿ ಸರ್ವಾಕಾರಿ ನಿರಂಕುಶ ಆಡಳಿತ ನಡೆಸುತ್ತಿರುವ ಕೇಂದ್ರದಲ್ಲಿನ ಬಿಜೆಪಿ ಸರ್ಕಾರವನ್ನು ಮುಂಬರುವ ಚುನಾವಣೆಯಲ್ಲಿ ಸೋಲಿಸುವ ಮೂಲಕ ದೇಶದ ಜನರು ಪ್ರಜಾಪ್ರಭುತ್ವದ ಉಳಿವಿಗೆ ಮುಂದಾಗಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
    ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ.ಜಿ.ವೀರೇಶ, ಪದಾಕಾರಿಗಳಾದ ಡಿ.ಎಸ್.ಶರಣಬಸವ, ಕರಿಯಪ್ಪ ಅಚ್ಚೊಳ್ಳಿ, ನರಸಣ್ಣ ನಾಯಕ, ನರಸಿಂಹ, ರಮೇಶ ಯಾಪಲದಿನ್ನಿ, ವೀರೇಶ, ನಾಗೇಂದ್ರ, ಶ್ಯಾಮಸುಂದರ, ರಂಗನಗೌಡ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts