ವಿದ್ಯುತ್‌ಲೈನ್ ಕಾಮಗಾರಿಗೆ ತಡೆ

Mbd_Power-line

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ

ಉಡುಪಿ ಕಾಸರಗೋಡು ನಡುವೆ ಹಾದು ಹೋಗುವ 440 ಕೆವಿ ವಿದ್ಯುತ್ ಲೈನ್ ಕಾಮಗಾರಿಯು ನಿಡ್ಡೋಡಿ ಕೊಲತ್ತಾರು ಪ್ರದೇಶದಲ್ಲಿ ನಡೆಯುತ್ತಿದ್ದು, ಶನಿವಾರ ಸಂತ್ರಸ್ತರು, ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಸರ್ಕಾರಿ ಸ್ಥಳದಲ್ಲಿ ವಿದ್ಯುತ್ ಟವರ್ ನಿರ್ವಾಣ ಕಾಮಗಾರಿ ನಡೆಯುತ್ತಿದ್ದು, ಖಾಸಗಿ ಜಮೀನಲ್ಲಿಯೂ ಸ್ಥಳ ಗುರುತು ವಾಡಲಾಗಿದೆ. ಸ್ಟೆರ್‌ಲೈಟ್ ಕಂಪನಿಯ ಅಧಿಕಾರಿಗಳು ಕಾಮಗಾರಿ ನಡೆಸುತ್ತಿದ್ದು, ಬಲತ್ಕಾರವಾಗಿ ಕಾಮಗಾರಿ ನಡೆಸಿದರೆ ಮುಂದೆ ಆಗುವ ಅನಾಹುತಗಳಿಗೆ ಕಂಪನಿಯ ಅಧಿಕಾರಿಗಳೇ ಹೊಣೆಯಾಗಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಕಂಪನಿಯ ಅಧಿಕಾರಿಗಳು ಮತ್ತು ಜನರ ನಡುವೆ ವಾತಿನ ಚಕಮಕಿ ನಡೆಯಿತು. ಪೊಲೀಸ್ ವೃತ್ತನಿರೀಕ್ಷಕ ಸಂದೇಶ್ ಪಿ.ಜಿ. ಸಂತ್ರಸ್ತರು, ರೈತ ಮುಖಂಡರು ಹಾಗೂ ಕಂಪನಿಯ ಅಧಿಕಾರಿಗಳೊಂದಿಗೆ ವಾತುಕತೆ ನಡೆಸಿದರು.

440 ಕೆವಿ ವಿದ್ಯುತ್‌ಲೈನ್ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ರಾಜು ಗೌಡ, ರಾಜ್ಯ ರೈತ ಸಂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಶ್ರೀಧರ ಶೆಟ್ಟಿ ಬೈಲುಗುತ್ತು, ಜಿಲ್ಲಾ ಸಂಯೋಜಕ ದಯಾನಂದ ಶೆಟ್ಟಿ, ರಾಜ್ಯ ಕಾರ್ಯದರ್ಶಿ ಮನೋಹರ ಶೆಟ್ಟಿ, ನಿಡ್ಡೋಡಿ ವಾತೃಭೂಮಿ ಸಂರಕ್ಷಣಾ ಸಮಿತಿ ಅಧ್ಯಕ್ಷ, ಅಲ್ಫೋನ್ಸ್ ಲೋಬೋ, ಏಳಿಂಜೆ ವಲಯದ ಅಧ್ಯಕ್ಷ ಸುಕೇಶ್ಚಂದ್ರ ಶೆಟ್ಟಿ, ಏಳಿಂಜೆಯ ಸಂತ್ರಸ್ತೆ ಕೌಶಲ್ಯ ಎಂ. ಶೆಟ್ಟಿ ಮತ್ತಿತರರಿದ್ದರು.

ಕಾಮಗಾರಿ ತಾತ್ಕಾಲಿಕ ಸ್ಥಗಿತ

ಬಳಿಕ ಮೇಲಧಿಕಾರಿಗಳೊಂದಿಗೆ ಚರ್ಚಿಸಿದ್ದು, ಜಿಲ್ಲಾಧಿಕಾರಿ ಸಮಕ್ಷಮ ಜಿಲ್ಲೆಯ ಶಾಸಕರು, ಸಂಸದರು, ಕಂಪನಿ ಅಧಿಕಾರಿಗಳು ಹಾಗೂ ಸಂತ್ರಸ್ತರ ಜಂಟಿ ಸಭೆ ನಡೆಸಿ ಅಲ್ಲಿ ಕೈಗೊಂಡ ನಿರ್ಣಯದಂತೆ ಮುಂದುವರಿಯುವುದು. ಅಲ್ಲೀವರೆಗೆ ಕಾಮಗಾರಿ ಸ್ಥಗಿತಗೊಳಿಸುವುದಾಗಿ ಕಂಪನಿ ಅಧಿಕಾರಿಗಳು ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಮುಂದೂಡಲಾಯಿತು.

Share This Article

ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…

ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach )  ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…

Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..

ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan)​ ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…

ಹಾವು ಕಚ್ಚಿದಾಗ ಮಾಡುವ ಈ ಒಂದು ತಪ್ಪಿನಿಂದ ಪ್ರಾಣ ಹೋಗುತ್ತೆ ಎಚ್ಚರ! ಈ ರೀತಿ ಮಾಡೋದನ್ನು ತಪ್ಪಿಸಿ | Snakes

ಕೊಲ್ಲಂ: ಹಾವುಗಳು ( Snakes ) ಕಚ್ಚಿದ ಸಂದರ್ಭದಲ್ಲಿ ಯಾವ ಹಾವು ಕಚ್ಚಿತ್ತು ಎಂಬುದನ್ನು ತಿಳಿದುಕೊಳ್ಳಲು…