ಸಂಶಯಾಸ್ಪದ ಸಾವು, ಸಹೋದರ ವಶಕ್ಕೆ

Published on

ಕಟೀಲು: ಕಟೀಲು-ಗಿಡಿಗೆರೆ ಸಮೀಪ ಭಾನುವಾರ ಬೆಳಗ್ಗೆ ಅನುಮಾನಾಸ್ಪದವಾಗಿ ಸಾವಿಗೀಡಾದ ರೀತಿಯಲ್ಲಿ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ವೇಳೆ ಸಂಶಯ ವ್ಯಕ್ತವಾದ ಹಿನ್ನೆಲೆ ವಿಶೇಷ ತಂಡಗಳಿಂದ ತನಿಖೆ ಮುಂದುವರಿದಿದೆ. ಕಟೀಲು- ಕೊಂಡೆಮೂಲ ನಿವಾಸಿ ತಾರಾನಾಥ (40) ಎಂಬುವರು ಕೇಬಲ್ ವಯರ್ ಕುತ್ತಿಗೆಗೆ ಬಿಗಿದು, ಅಂಗಾತ ಮಲಗಿದ ಸ್ಥಿತಿಯಲ್ಲಿ ಮನೆಯಿಂದ 100 ಮೀ. ದೂರದಲ್ಲಿ ಶವ ಪತ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಮನೆಯಲ್ಲಿದ್ದ ತಾರಾನಾಥನ ಸಹೋದರನನ್ನು ಬಜ್ಪೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪೋಸ್ಟ್ ಮಾರ್ಟಂ ಪ್ರಕ್ರಿಯೆ ಅಂತಿಮವಾದ ಬಳಿಕ ನಿಖರ ಮಾಹಿತಿ ಲಭಿಸಲಿದೆ ಸಿಗಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net