ರಾತ್ರಿ ಊಟ ಮಾಡಿ ಮಲಗಿದ್ದ ಬಾಲಕಿ ಬೆಳಗ್ಗೆ ಅಸ್ವಸ್ಥ; ಮುರಾರ್ಜಿ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವು!

Thanushree
Published on

ಚಿಕ್ಕಬಳ್ಳಾಪುರ: ಮುರಾರ್ಜಿ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವಿಗೀಡಾದ ಪ್ರಕರಣ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಎಂಟನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ತನುಶ್ರೀ (14) ಸಾವಿಗೀಡಾದ ವಿದ್ಯಾರ್ಥಿನಿ. ಚಿಂತಾಮಣಿ ತಾಲೂಕಿನ ಗಡಿಗವಾರ್ಲಹಳ್ಳಿ ಮುರಾರ್ಜಿ ದೇಸಾಯಿ ಹಾಸ್ಟೆಲ್​ನಲ್ಲಿ ಈ ಪ್ರಕರಣ ನಡೆದಿದೆ. ಈಕೆ ಕೋಡಿಗಲ್ ಗ್ರಾಮದ ನೈದಮ್ಮ-ನರಸಿಂಹಪ್ಪ ದಂಪತಿಯ ಪುತ್ರಿ.

ರಾತ್ರಿ ಊಟ ಮಾಡಿ ಮಲಗಿದ್ದ ತನುಶ್ರೀ ಬೆಳಗ್ಗೆ ಅಸ್ವಸ್ತಗೊಂಡಿದ್ದಳು. ನಂತರ ಹಾಸ್ಟೆಲ್​ ಸಿಬ್ಬಂದಿ ಈಕೆಯನ್ನು ಕೆಂಚಾರ್ಲಹಳ್ಳಿ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾದಳು. ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net