ವಿವಿ ತಿದ್ದುಪಡಿ ಮಸೂದೆ ಹಿಂಪಡೆಯಿರಿ, ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಎದುರು ಎಬಿವಿಪಿಯಿಂದ ಪ್ರತಿಭಟನೆ

ಬಳ್ಳಾರಿ: ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ-2017 ಕಾಯ್ದೆ ವಾಪಸ್ ಪಡೆಯಲು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿತು.

ವಿವಿಯನ್ನು ಸರ್ಕಾರ ರಾಜಕೀಯ ಕಪಿಮುಷ್ಠಿಯಲ್ಲಿಟ್ಟುಕೊಳ್ಳುವ ಉದ್ದೇಶದಿಂದ ಈ ಮಸೂದೆ ಜಾರಿಗೆ ತರುತ್ತಿದೆ. 2017ರ ವಿಶ್ವವಿದ್ಯಾಲಯಗಳ ಕಾಯ್ದೆ ಅನೇಕ ಗೊಂದಲಗಳಿಂದ ಕೂಡಿದ್ದು ರಾಜ್ಯಪಾಲರು ಮಧ್ಯಪ್ರವೇಶಿಸಿ ಮಸೂದೆಯನ್ನು ತಿರಸ್ಕರಿಸಬೇಕು ಎಂದು ಆಗ್ರಹಿಸಿದರು. ಎಬಿವಿಪಿ ನಗರ ಕಾರ್ಯದರ್ಶಿ ಮಂಜುನಾಥ, ಜಿಲ್ಲಾ ಸಂಘಟನ ಕಾರ್ಯದರ್ಶಿ ಯುವರಾಜ, ಮುಖಂಡರಾದ ಶ್ರೀಕಾಂತರೆಡ್ಡಿ, ಹೇಮರಡ್ಡಿ, ಎಚ್.ನಾಗರಾಜ, ವೀರೇಶ್, ರುದ್ರೇಶ್, ಮೆಘರಾಜ ಇತರರಿದ್ದರು.