

ಮಂಗಳೂರು : ಹೆಸರಾಯಿತು ಕರ್ನಾಟಕ ,ಉಸಿರಾಗಲಿ ಕನ್ನಡ ಎಂಬ ಆಶಯದೊಂದಿಗೆ ನಡೆಯುತ್ತಿರುವ ಸುವರ್ಣ ಕರ್ನಾಟಕ ಸಂಭ್ರಮ ಕಾರ್ಯಕ್ರಮ ನಮ್ಮ ರಾಜ್ಯ ಹಾಗೂ ಭಾಷೆಯ ಅಭಿಮಾನದ ಪ್ರತೀಕವಾಗಿದೆ ಎಂದು ದ.ಕ.ಜಿಲ್ಲಾ ಅಪರ ಜಿಲ್ಲಾಧಿಕಾರಿ ಡಾ.ಸಂತೋಷ್ ಕುಮಾರ್ ಹೇಳಿದರು.
ನಗರದ ತುಳು ಭವನದಲ್ಲಿ ಕರ್ನಾಟಕ ಸುವರ್ಣ ಸಂಭ್ರಮದ ಪ್ರಯುಕ್ತ ನಡೆದ ಪ್ರೌಢಶಾಲಾ ಮಕ್ಕಳ ಚಿತ್ರಕಲಾ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು
ಜಿಲ್ಲಾ ಯೋಜನಾ ಉಪ ಸಮನ್ವಯ ಅಧಿಕಾರಿ ಸುಮಂಗಳಾ ಎಸ್.ನಾಯಕ್ ಮಾತನಾಡಿ ಭಾರತ ಬಹುಸಂಸ್ಕೃತಿಯ ದೇಶ, ನಮ್ಮ ಕರಾವಳಿ ಜಿಲ್ಲೆ ಇದಕ್ಕೆ ನೈಜ ಉದಾಹರಣೆಯಾಗಿದೆ ಎಂದರು.
ಹಿರಿಯ ಕಲಾವಿದ ಗಣೇಶ್ ಸೋಮಯಾಜಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಚಿತ್ರಕಲೆಯ ಅಭಿರುಚಿಯನ್ನು ಮೂಡಿಸಿದಾಗ ವಿದ್ಯಾರ್ಥಿಗಳು ಕಲಿಕೆ ಹಾಗೂ ಎಲ್ಲ ಕ್ಷೇತ್ರದಲ್ಲಿ ಮುಂದೆ ಬರಲು ಸಾಧ್ಯ ಎಂದರು.
ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಬ್ಯಾರಿ ಸಾಹಿತ್ಯ ಅಕಾಡೆಮಿ
ಅಧ್ಯಕ್ಷ ಉಮರ್.ಯು.ಎಚ್.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್,ಚಿತ್ರ ಕಲಾವಿದ ಕೋಟಿ ಪ್ರಸಾದ್ ಆಳ್ವ, ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಎನ್.ಎಸ್.ಪತ್ತಾರ್, ಹರೀಶ್ ಕೊಡಿಯಾಲ್ಬೈಲ್ ಉಪಸ್ಥಿತರಿದ್ದರು. ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟಾೃನಿ ಆಳ್ವಾರಿಸ್ ವಂದಿಸಿದರು.