More

    ಭಾರತೀಯ ಸಂಸ್ಕೃತಿಗೆ ಮತ್ತು ಕುವೆಂಪು ಅವರಿಗೆ ಮಾಡಿದ ಅವಮಾನ: ವಿಧಾನ ಪರಿಷತ್ತ ಸದಸ್ಯ ಎಸ್.ವ್ಹಿ .ಸಂಕನೂರ

    ರಾಜ್ಯದ ವಸತಿ ಶಾಲೆಗಳಲ್ಲಿ ಹಾಕಲಾಗಿದ್ದ “ಜ್ಞಾನ ದೇಗುಲವಿದು ಕೈ ಮುಗಿದು ಬಾ” ಎಂಬ ಘೋಷಾವಾಖ್ಯದ ಬದಲಾಗಿ, “ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು” ಎಂದು ಬದಲಾವಣೆ ಮಾಡಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ. ಅಲ್ಲದೇ ನಮ್ಮ ಭಾರತೀಯ ಸಂಸ್ಕೃತಿಗೆ ಮತ್ತು ಕುವೆಂಪು ಅವರಿಗೆ ಮಾಡಿದ ಅವಮಾನವನ್ನು ವಿಧಾನ ಪರಿಷತ್ತಿನ ಸದಸ್ಯರಾದ ಎಸ್ ವ್ಹಿ ಸಂಕನೂರ ತೀವ್ರವಾಗಿ ಖಂಡಿಸಿದ್ದಾರೆ.
     ರಾಷ್ಟ್ರಕವಿ ಕುವೆಂಪು ಅವರ ಪದ್ಯದ ಸಾಲುಗಳಿಂದ ಪ್ರೇರಣೆ ಪಡೆದು ಘೋಷವಾಕ್ಯ ರೂಪಿಸಲಾಗಿತ್ತು. ಆದರೆ ಸರಕಾರ ಘೋಷವಾಕ್ಯ ಬದಲಾವಣೆಗೆ ಯಾವುದೇ ಅಧಿಕೃತ ಆದೇಶ ನೀಡಿರುವುದಿಲ್ಲ. ಆದೇಶ ನೀಡಿದರೆ ಮತ್ತೊಂದು ವಿವಾದಕ್ಕೆ ಕಾರಣವಾಗುತ್ತದೆಂದು ಆದೇಶವಿಲ್ಲದೆ ಕೇವಲ ಮೌಖಿಕವಾಗಿ ಸೂಚನೆ ನೀಡಿ ಘೋಷವಾಕ್ಯ ಬದಲಾವಣೆ ಮಾಡಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕ್ಯಾ. ಮಣಿವಣ್ಣನ್ ಸೂಚನೆ ಮೇರೆಗೆ ಘೋಷವಾಕ್ಯ ಬದಲಾವಣೆ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ. ಮಕ್ಕಳ ಮೇಲೆ ಯಾವುದೇ ಪರಿಣಾಮ ಬಿರದಂತೆ ಕ್ರಮವಹಿಸಿ ಕೋಡಲೇ ಸರಕಾರ ಮೊದಲಿನಂತೆ ಸರಿಪಡಿಸಲು ಎಸ್ ವ್ಹಿ ಸಂಕನೂರ ಒತ್ತಾಯಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts