ಎಸ್.ವಿ. ವಿದ್ಯಾರ್ಥಿನಿ ಪ್ರಾರ್ಥನಾ ಪೈಗೆ ಸನ್ಮಾನ

prarthana pai
ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಗಂಗೊಳ್ಳಿ ಎಸ್.ವಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಪ್ರಾರ್ಥನಾ ಪೈ ಅವರನ್ನು ಗೌರವಿಸಲಾಯಿತು.
Published on

ಗಂಗೊಳ್ಳಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಜರುಗಿದ ರಾಜ್ಯಮಟ್ಟದ ಷಟ್ಲ್ ಬ್ಯಾಡ್ಮಿಂಟನ್‌ನಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಪ್ರಾರ್ಥನಾ ಪೈ ಅವರನ್ನು ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ತಲ್ಲೂರಿನ ಹೋಟೆಲ್‌ನಲ್ಲಿ ನಡೆದ ಕುಟುಂಬ ಸಮ್ಮಿಲನ ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.

ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ತಾಂಡೇಲ, ನಿಕಟಪೂರ್ವ ಅಧ್ಯಕ್ಷ ಎಂ.ನಾಗೇಂದ್ರ ಪೈ, ಜೋನಲ್ ಲೆಫ್ಟಿನೆಂಟ್ ಪ್ರದೀಪ್ ಡಿ.ಕೆ., ಗಂಗೊಳ್ಳಿ ರೋಟರಿ ಮಾಜಿ ಅಧ್ಯಕ್ಷ ಉಮೇಶ ಎಲ್.ಮೇಸ್ತ, ಕಾರ್ಯದರ್ಶಿ ಮಾಲಾಶ್ರೀ ಖಾರ್ವಿ, ಪತ್ರಕರ್ತ ಬಿ.ರಾಘವೇಂದ್ರ ಪೈ, ರಾಧಿಕಾ ಆರ್.ಪೈ, ಗಂಗೊಳ್ಳಿ ರೋಟರಿ ಕ್ಲಬ್ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net