More

    ಬಸವ ಕಲ್ಯಾಣದಲ್ಲಿ ಸ್ವಾಭಿಮಾನಿ ಕಲ್ಯಾಣ ಪರ್ವ ಉತ್ಸವ

    ಧಾರವಾಡ: ವಿಶ್ವಗುರು ಬಸವಣ್ಣನವರ ಕಾರ್ಯಕ್ಷೇತ್ರವಾಗಿರುವ ಬೀದರ್ ಜಿಲ್ಲೆಯ ಬಸವ ಕಲ್ಯಾಣದಲ್ಲಿ ಅ. 21 ಹಾಗೂ 22ರಂದು ಸ್ವಾಭಿಮಾನಿ ಕಲ್ಯಾಣ ಪರ್ವ ಆಯೋಜಿಸಲಾಗಿದೆ ಎಂದು ಕಲ್ಯಾಣ ಪರ್ವ ಉತ್ಸವ ಸಮಿತಿಯ ಅಧ್ಯಕ್ಷ, ಕುಂಬಳಗೋಡು ಶ್ರೀ ಚನಬಸವೇಶ್ವರ ಜ್ಞಾನಪೀಠದ ಜಗದ್ಗುರು ಡಾ. ಚನ್ನಬಸವಾನಂದ ಸ್ವಾಮೀಜಿ ಹೇಳಿದರು.
    ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ. ಮಾತೆ ಮಹಾದೇವಿಯವರ ನೇತೃತ್ವದಲ್ಲಿ ೨೦೦೨ರಲ್ಲಿ ಬಸವಕಲ್ಯಾಣದಲ್ಲಿ ಕಲ್ಯಾಣ ಪರ್ವ ಉತ್ಸವ ಪ್ರಾರಂಭವಾಗಿತ್ತು. ಅಂದಿನ ವೈಭವದಂತೆ ಮಾತೆ ಮಹಾದೇವಿಯವರ ಸಂಕಲ್ಪ ಪೂರೈಸಲು ಸ್ವಾಭಿಮಾನಿ ಕಲ್ಯಾಣ ಪರ್ವ ಆಯೋಜಿಸಲಾಗಿದೆ. ಬಸವ ಕಲ್ಯಾಣದಲ್ಲಿ 21ರಂದು ಬೆಳಗ್ಗೆ 11ಕ್ಕೆ ಉದ್ಘಾಟನಾ ಸಮಾರಂಭ ಜರುಗಲಿದೆ.
    ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಸಚಿವರು, ಶಾಸಕರು, ಸಮಾಜದ ಗಣ್ಯರು, ಧಾರ್ಮಿಕ ಮುಖಂಡರು, ಭಾಗವಹಿಸಲಿದ್ದಾರೆ. ಉತ್ಸವದ ಸ್ವಾಗತ ಸಮಿತಿಯ ಅಧ್ಯಕ್ಷರನನ್ನಾಗಿ ಬೆಳಗಾವಿಯ ಶರಣ ಅಶೋಕ ಬೆಂಡಿಗೇರಿ, ಪ್ರಧಾನ ಕಾರ್ಯದರ್ಶಿಯನ್ನಾಗಿ ಬೀದರ್‌ನ ಡಾ. ಮಹೇಶ ಬಿರಾದರ, ದಾಸೋಹ ಸಮಿತಿಯ ಅಧ್ಯಕ್ಷರನ್ನಾಗಿ ಹೈದರಬಾದ್‌ನ ವೆನ್ನ ಈಶ್ವರಪ್ಪ ಅವರನ್ನು ನೇಮಕ ಮಾಡಲಾಗಿದೆ ಎಂದರು.
    ಲಿAಗಾಯತ ಧರ್ಮ ಸ್ವತಂತ್ರ ಧರ್ಮ, ಮಹಿಳಾ ಗೋಷ್ಠಿ, ಭಾವೈಕ್ಯತಾ ಗೋಷ್ಠಿ, ಇಷ್ಟಲಿಂಗ ಪೂಜೆಯ ಮಹತ್ವ ಮುಂತಾದ ವಿಷಯಗಳ ಕುರಿತು ಗೋಷ್ಠಿಗಳು ಜರುಗಲಿದೆ. ಕರ್ನಾಟಕ, ಮಹಾರಾಷ್ಟ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ದೆಹಲಿ, ಇತರ ರಾಜ್ಯಗಳಿಂದ ಸಾವಿರಾರು ಜನರು ಭಾಗವಹಿಸಲಿದ್ದಾರೆ ಎಂದರು.
    ಸುದ್ದಿಗೋಷ್ಠಿಯಲ್ಲಿ ಬಸಯ್ಯ ಗಣಾಚಾರಿ, ಶಿವಾನಂದ ಅಬಲೂರ, ಅಶೋಕ ಶೀಲವಂತ, ವೀರಣ್ಣ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts