More

    ಕುಕ್ಕೆಯಲ್ಲಿ ಏಕಾದಶಿಗೆ ಸ್ವಚ್ಛ ಮಂದಿರ ಅಭಿಯಾನ

    ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ನೈರ್ಮಲ್ಯ ಮತ್ತು ಶುಚಿತ್ವ ಕಾಪಾಡಲು ಆಡಳಿತ ಮಂಡಳಿ ಸ್ವಚ್ಛ ಮಂದಿರ ಸೇವಾ ಅಭಿಯಾನ ಆರಂಭಿಸಿದೆ. ಎಲ್ಲ ಏಕಾದಶಿಯಂದು ಕ್ಷೇತ್ರಾದ್ಯಂತ ಸ್ವಚ್ಛತಾ ಕಾರ್ಯ ನಡೆಸುವ ಮೂಲಕ ಭಕ್ತರಲ್ಲಿ ಜಾಗೃತಿ ಮೂಡಿಸುವುದು ಇದರ ಉದ್ದೇಶ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ತಿಳಿಸಿದ್ದಾರೆ.

    ಕುಕ್ಕೆ ಸುಬ್ರಹ್ಮಣ್ಯಕ್ಕೆ ಪ್ರತಿದಿನ ಸಹಸ್ರಾರು ಭಕ್ತರು ಬರುವುದರಿಂದ ಕ್ಷೇತ್ರದಲ್ಲಿ ನಿರಂತರ ಸ್ವಚ್ಛತೆ ಅನುಷ್ಠಾನಗೊಳಿಸಲು ಈ ಯೋಜನೆ ರೂಪಿಸಲಾಗಿದೆ. ತಿಂಗಳಲ್ಲಿ ಬರುವ ಎರಡು ಏಕಾದಶಿಯಂದು ಕ್ಷೇತ್ರಾದ್ಯಂತ ಮಧ್ಯಾಹ್ನ 2ರಿಂದ 3.30ರ ತನಕ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ದೇವಳ ವ್ಯವಸ್ಥಾಪನಾ ಸಮಿತಿ, ಮಾಸ್ಟರ್ ಪ್ಲಾನ್ ಸಮಿತಿ, ಕಾರ್ಯನಿರ್ವಹಣಾಧಿಕಾರಿ ಮತ್ತು ಸಿಬ್ಬಂದಿ ವರ್ಗ, ದೇವಳ ಆಡಳಿತದ ಎಸ್‌ಎಸ್‌ಪಿಯು ಕಾಲೇಜು, ಪ್ರೌಢಶಾಲಾ ವಿಭಾಗ, ಕೆ.ಎಸ್.ಎಸ್. ಕಾಲೇಜುಗಳ ಎನ್.ಎಸ್.ಎಸ್., ಸ್ಕೌಟ್ಸ್ ಗೈಡ್ಸ್, ರೋವರ್ ರೇಂಜರ್ಸ್‌ ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಸದಸ್ಯರು, ವರ್ತಕರು ಸೇರಿದಂತೆ ಏಕಕಾಲದಲ್ಲಿ 1,000ಕ್ಕೂ ಅಧಿಕ ಮಂದಿ ಪೇಟೆಯ 25 ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯ ನೆರವೇರಿಸಲಿದ್ದಾರೆ. ಸ್ಥಳ ನಿಗದಿ ಮಾಡಿ ಆಯಾ ಪ್ರದೇಶಗಳಿಗೆ ತಂಡಗಳನ್ನು ನಿಯೋಜಿಸಿ ಜವಾಬ್ದಾರಿ ನೀಡಲಾಗಿದೆ. ಅ.16ರಂದು ಮಧ್ಯಾಹ್ನ 2ಕ್ಕೆ ಸ್ವಚ್ಛ ಮಂದಿರ ಸೇವಾ ಅಭಿಯಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಚಾಲನೆ ನೀಡಲಿದ್ದಾರೆ. ಸಚಿವ ಎಸ್.ಅಂಗಾರ ಮೊದಲಾದವರು ಭಾಗವಹಿಸಲಿದ್ದಾರೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts