More

    ಸ್ವಚ್ಛ-ಶುಭ ದೀಪಾವಳಿ ಅಭಿಯಾನಕ್ಕೆ ಚಾಲನೆ

    ಕುಶಾಲನಗರ: ಸುಪ್ರೀಂಕೋರ್ಟ್ ಆದೇಶದಂತೆ ಪುರಸಭೆ ವ್ಯಾಪ್ತಿಯಲ್ಲಿ ಪಟಾಕಿ ಮಾರಾಟ ಹಾಗೂ ಪಟಾಕಿ ಬಳಕೆ ನಿಯಂತ್ರಣ ಮಾಡುವ ಉದ್ದೇಶದಿಂದ ಕುಶಾಲನಗರ ಪುರಸಭೆ ವತಿಯಿಂದ ಸ್ವಚ್ಛ ದೀಪಾವಳಿ ಶುಭ ದೀಪಾವಳಿ ಅಭಿಯಾನಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.


    ಕುಶಾಲನಗರದ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜು, ಕನ್ನಡ ಭಾರತಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಜೂನಿಯರ್ ಕಾಲೇಜು ಹಾಗೂ ಫಾತಿಮಾ ಕಾನ್ವೆಂಟ್‌ನಲ್ಲಿ ಅಭಿಯಾನ ಆರಂಭವಾಯಿತು.


    ಪರಿಸರ ಸ್ನೇಹಿ ಹಸಿರು ದೀಪಾವಳಿ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಆಯಾ ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿಗಳ ನೇತೃತ್ವದಲ್ಲಿ ಸಭೆಯನ್ನು ಆಯೋಜಿಸಿ ವಿದ್ಯಾರ್ಥಿಗಳಿಗೆ ಹಸಿರು ಪಟಾಕಿ ಬಗ್ಗೆ ಜಾಗೃತಿ ಮೂಡಿಸಲಾಯಿತು.


    ಹಸಿರು ಪಟಾಕಿ ಬಳಕೆ ಮಾಡುವ ಸಾರ್ವಜನಿಕರಿಂದ ಸಹಿ ಸಂಗ್ರಹಿಸಲಾಯಿತು. ಕಾಲೇಜುಗಳ ಮುಂಭಾಗ ಹಾಗೂ ಕಾರ್ಯಪ್ಪ ಸರ್ಕಲ್‌ನಲ್ಲಿ ಸೆಲ್ಫಿ ಬೋರ್ಡ್‌ಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಸೆಲ್ಫಿ ತೆಗೆಯಲು ಅನುವು ಮಾಡಿಕೊಡಲಾಗಿತ್ತು. ಪರಿಸರ ಸ್ನೇಹಿ ದೀಪಾವಳಿಯ ಪ್ರತಿಜ್ಞಾ ವಿಧಿಯನ್ನು ಪಡೆಯಲು ಕ್ಯೂ ಆರ್ ಕೋಡ್‌ಗಳನ್ನು ಇಡಲಾಗಿತ್ತು. ಧ್ವನಿವರ್ಧಕದ ಮೂಲಕ ಅರಿವು ಮೂಡಿಸಲಾಯಿತು.


    ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕರೂ ಆದ ಶಾಲಾ ಶಿಕ್ಷಣ ಇಲಾಖೆ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಘಟಕದ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್, ಪರಿಸರಕ್ಕೆ ಹಾನಿಯುಂಟು ಮಾಡುವ ಹಾಗೂ ಮಾಲಿನ್ಯಕಾರಿ ಪಟಾಕಿಯನ್ನು ಸಿಡಿಸದಂತೆ ಈಗಾಗಲೇ ಸುಪ್ರೀಂ ಕೋರ್ಟ್ ನಿಷೇಧಿಸಿ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಿಸುವ ಮೂಲಕ ಪರಿಸರ ಸಂರಕ್ಷಣೆಗೆ ಪಣ ತೊಡಬೇಕಿದೆ ಎಂದರು.


    ಕುಶಾಲನಗರ ಪರಸಭೆ ಮಾಜಿ ಅಧ್ಯಕ್ಷ ಜಯವರ್ಧನ್, ಕುಶಾಲನಗರ ಪುರಸಭೆ ಆರೋಗ್ಯಾಧಿಕಾರಿ ಉದಯ್ ಕುಮಾರ್, ಪತ್ರಕರ್ತ ಜಯಪ್ರಕಾಶ್ ಇತರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts