More

    ಡಿ.6ರಿಂದ ಫ್ರೀಡಂಪಾರ್ಕ್‌ನಲ್ಲಿ ಸ್ವದೇಶಿ ಮೇಳ

    ಶಿವಮೊಗ್ಗ: ಸ್ವದೇಶಿ ಜಾಗರಣ ಮಂಚ್‌ನಿಂದ ನಗರದ ಫ್ರೀಡಂಪಾರ್ಕ್‌ನಲ್ಲಿ ಡಿ.6ರಿಂದ 10ರವರೆಗೆ ಬೃಹತ್ ಸ್ವದೇಶಿ ಮೇಳವನ್ನು ಆಯೋಜಿಸಲಾಗಿದೆ ಎಂದು ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಟಕ ಕೆ.ಜಗದೀಶ್ ತಿಳಿಸಿದರು.

    250ಕ್ಕೂ ಅಧಿಕ ಸ್ವದೇಶಿ ಮಳಿಗೆಗಳು ಮೇಳದಲ್ಲಿ ಭಾಗವಹಿಸಲಿವೆ. ಒಂದೂವರೆ ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಮೇಳದಲ್ಲಿ ವೈವಿಧ್ಯಮಯ ಆಹಾರಗಳು, ಕ್ರೀಡೆಗಳು, ಜಾನಪದ ಕಲಾ ವೈಭವ, ಯಕ್ಷಗಾನ, ಬಾನ್ಸುರಿ ವಾದನ, ರೂಪಕ, ಜಾದೂ ಪ್ರದರ್ಶನ ಸೇರಿ 16ಕ್ಕೂ ಅಧಿಕ ಶಿಬಿರ ಮತ್ತು ತರಬೇತಿ ಕಾರ್ಯಾಗಾರಗಳು ನಡೆಯಲಿವೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ಡಿ.6ರಂದು ಸಂಜೆ 6.30ಕ್ಕೆ ಮೇಳವನ್ನು ಮೈಸೂರು ರಾಜವಂಶಸ್ಥ ಯದುವೀರ ಒಡೆಯರ್ ಉದ್ಘಾಟಿಸಲಿದ್ದಾರೆ. ತರಳಬಾಳುಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ, ಪ್ರೊ. ಬಿ.ಎಂ.ಕುಮಾರಸ್ವಾಮಿ ಪಾಲ್ಗೊಳ್ಳುವರು.
    ಮೇಳದ ಸಂಚಾಲಕ ಡಿ.ಎಸ್.ಅರುಣ್ ಮಾತನಾಡಿ, ಭಾರತೀಯ ಪಾರಂಪರಿಕ ಉಡುಗೆಯಾದ ಸೀರೆ ಉಟ್ಟು ಬರುವ ಮಹಿಳೆಯರಿಗೆ ಲಕ್ಕಿ ಡಿಪ್ ಮುಖಾಂತರ ಸೀರೆಯನ್ನು ಉಡುಗೊರೆಯಾಗಿ ನೀಡಲಾಗುವುದು ಎಂದರು.
    ಪ್ರೊ. ಬಿ.ಎಂ.ಕುಮಾರಸ್ವಾಮಿ, ಸಂಯೋಜಕ ಡಾ. ಧನಂಜಯ ಸರ್ಜಿ, ಸಂಘಟಕ ಹರ್ಷ ಕಾಮತ್, ಜಿಲ್ಲಾ ಸಂಯೋಜಕ ದಿಲೀಪ್, ಪ್ರಮುಖರಾದ ಎಸ್.ದತ್ತಾತ್ರಿ, ಸುರೇಖಾ ಮರುಳೀಧರ್ ಇದ್ದರು. ಮಾಹಿತಿಗೆ ದೂರವಾಣಿ (9148524854)ಸಂಪರ್ಕಿಸಬಹುದು.

    ತರಹೇವಾರಿ ಖಾದ್ಯಗಳ ಘಮಲು
    ಮೇಳದಲ್ಲಿ ಮೇಲುಕೋಟೆ ಪುಳಿಯೋಗರೆ, ಮುಳುಬಾಗಿಲು ದೋಸೆ, ದಾವಣಗೆರೆ ಬೆಣ್ಣೆ ದೋಸೆ, ಸಾವಯವ ಕಬ್ಬಿನಹಾಲು, ಅಡಕೆ ಐಸ್‌ಕ್ರೀಂ, ಬಂಗಾರಪೇಟೆ ಚಾಟ್ಸ್, ಹುಬ್ಬಳ್ಳಿಯ ಗಿರಮಿಟ್, ಸಿರಿಧಾನ್ಯಗಳ ರೊಟ್ಟಿ, ಕವಳಿ, ಕಂಚಿ, ಮಾವು, ನಿಂಬೆ, ಮೆಣಸಿನಹಿಂಡಿ, ಮೆಂತ್ಯೆ ಹಿಂಡಿ, ಅಗಸಿ, ಶೇಂಗಾ, ಗುರೆಳ್ಳು ಚಟ್ನಿ ಪುಡಿ ಮುಂತಾದ ತರಹೇವಾರಿ ಖಾದ್ಯಗಳನ್ನು ಮೇಳದಲ್ಲಿ ಸವಿಯಬಹುದು ಎಂದು ಜಗದೀಶ್ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts