More

    ಕುಂಭಮೇಳವನ್ನು ಮುಕ್ತಾಯಗೊಳಿಸುವುದಾಗಿ ಘೋಷಿಸಿದ ಸ್ವಾಮಿ ಅವದೇಶಾನಂದ ಗಿರಿ

    ಲಕ್ನೋ: ಕರೊನಾ ಹರಡುತ್ತಿರುವುದರಿಂದ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳವನ್ನು ಸಾಂಕೇತಿಕವಾಗಿ ಆಚರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟಿರುವ ಬೆನ್ನಲ್ಲೇ ಕುಂಭಮೇಳವನ್ನು ಮುಕ್ತಾಯಗೊಳಿಸಲಾಗುವುದು ಎಂದು ಜುನಾ ಅಖಾಡದ ಸ್ವಾಮಿ ಅವದೇಶಾನಂದ ಗಿರಿ ಅವರು ಘೋಷಣೆ ಮಾಡಿದ್ದಾರೆ.

    ಕೋವಿಡ್ ವಿರುದ್ಧ ನಮ್ಮ ಜನರ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಿದೆ. ಈಗಾಗಲೇ ಕುಂಭಮೇಳದ ದೇವತಾ ವಿಸರ್ಜನಾ ಕಾರ್ಯಕ್ರಮ ಮುಗಿದಿರುವುದರಿಂದ ಕುಂಭಮೇಳವನ್ನು ಇಲ್ಲಿಗೆ ಮೊಟಕುಗೊಳಿಸುವುದು ಸೂಕ್ತವಾಗಿದೆ ಎಂದು ಸ್ವಾಮಿ ಅವದೇಶಾನಂದ ಗಿರಿ ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

    ಅಲ್ಲದೇ ಅವದೇಶಾನಂದ ಗಿರಿ ಅವರು ವಿಡಿಯೋ ಸಂದೇಶವನ್ನು ಹಂಚಿಕೊಂಡಿದ್ದು, ಕುಂಭಮೇಳದ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿಯ ಸಂದೇಶವನ್ನು ಇತರ ಶ್ರೀಗಳು ಅನುಸರಿಸಬೇಕು ಎಂದು ಮನವಿ ಮಾಡಿದ್ದಾರೆ.

    ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಲಕ್ಷಾಂತರ ಜನ ಪಾಲ್ಗೊಂಡಿದ್ದಾರೆ. ಈಗಾಗಲೇ ಅಲ್ಲಿ 2000 ಜನಕ್ಕೂ ಹೆಚ್ಚು ಕೋವಿಡ್ ಸೋಂಕು ತಗುಲಿದೆ. ಸೋಂಕು ಇನ್ನಷ್ಟು ವ್ಯಾಪಕವಾಗಿ ಹರಡಬಹುದು ಎಂಬ ಆತಂಕವನ್ನು ವೈದ್ಯರು ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಕುಂಭಮೇಳವನ್ನು ರದ್ದು ಮಾಡುವುದು ಸೂಕ್ತ ಎಂಬ ಅಭಿಪ್ರಾಯ ಕೇಳಿ ಬಂದಿದ್ದವು. ನಿನ್ನೆ ಒಂದೇ ದಿನ ಭಾರತದಲ್ಲಿ 2 ಲಕ್ಷಕ್ಕೂ ಅಧಿಕ ಕರೊನಾವೈರಸ್ ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದವು.

    ಕರೊನಾ ಇಷ್ಟು ಪ್ರಮಾಣದಲ್ಲಿ ಹೆಚ್ಚಾಗಲು ಎರಡು ಪ್ರಮುಖ ಕಾರಣ ನೀಡಿದ ದೆಹಲಿ ಏಮ್ಸ್​​ ನಿರ್ದೇಶಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts