More

  ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಶಾಕ್​; ಸಮಾಜವಾದಿ ಪಕ್ಷ ತೊರೆದ ಪ್ರಭಾವಿ ನಾಯಕ

  ಲಖನೌ: ಮುಂಬರುವ ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ವಿಪಕ್ಷಗಳ ಮೈತ್ರಿಕೂಟ ಇಂಡಿಯಾಗೆ ಒಂದಲ್ಲ ಒಂದು ರೀತಿಯಲ್ಲಿ ಅಡಚಣೆ ಎದುರಾಗುತ್ತಿದ್ದು, ಇದೀಗ ಸಮಾಜವಾದಿ ಪಾರ್ಟಿಯ ನಾಯಕ ಸ್ವಾಮಿ ಪ್ರಸಾದ್​ ಮೌರ್ಯ ಪಕ್ಷಕ್ಕೆ ಗುಡ್​ ಬೈ ಹೇಳಿದ್ದಾರೆ.

  ಸಮಾಜವಾದಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ಉತ್ತರಪ್ರದೇಶ ವಿಧಾನಪರಿಷತ್ತಿಗೆ ರಾಜೀನಾಮೆ ನೀಡಿರುವ ಮೌರ್ಯ ನನಗೆ ಸ್ವಚ್ಛ ರಾಜಕಾರಣದಲ್ಲಿ ನಂಬಿಕೆ ಇದೆ ಎಂದು ಹೇಳಿದ್ದಾರೆ.

  ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪ್ರಕಟಣೆ ಹೊರಡಿಸಿರುವ ಸ್ವಾಮಿ ಪ್ರಸಾದ್​ ಮೌರ್ಯ, ನನಗೆ ಸ್ವಚ್ಛ ರಾಜಕಾರಣದಲ್ಲಿ ನಂಬಿಕೆ ಇದೆ, ನಾನು ಅಖಿಲೇಶ್​ ಯಾದವ್ ಅವರನ್ನು ನೋಡಿದ್ದೇನೆ, ಅವರು ಸಮಾಜವಾದಿ ಸಿದ್ಧಾಂತಕ್ಕೆ ವಿರುದ್ಧವಾಗಿದ್ದರು. ಮುಲಾಯಂ ಸಿಂಗ್ ಅವರೊಂದಿಗೆ ಕೆಲಸ ಮಾಡಿದ ಅನುಭವವೂ ನನಗೆ ಇದೆ. ಅವರು ಕಟ್ಟಾ ಸಮಾಜವಾದಿ ನಾಯಕರಾಗಿದ್ದರು.

  ಇದನ್ನೂ ಓದಿ: ಇವತ್ತು ಇವಳಿರ್ತಾಳೆ, ನಾಳೆ ಅವಳಿರ್ತಾಳೆ ನಾನ್ಯಾಕೆ ಇವರ ಬಗ್ಗೆ ತಲೆ ಕೆಡಿಸಿಕೊಳ್ಳಲಿ: ಹೀಗ್ಯಾಕಂದ್ರು ನಟ ದರ್ಶನ್

  ನೈತಿಕತೆ ಆಧಾರದ ಮೇಲೆ ನಾನು ಸಮಾಜವಾದಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ಉತ್ತರಪ್ರದೇಶ ವಿಧಾನಪರಿಷತ್ತಿಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅಖಿಲೇಶ್​ ಯಾದವ್​ಗೆ ಬರೆದಿರುವ ಪತ್ತರದಲ್ಲಿ ಉಲ್ಲೇಖಿಸಲಾಗಿದೆ.

  ಇತ್ತ ಸಮಾಜವಾದಿ ಪಕ್ಷಕ್ಕೆ ರಾಜೀನಾಮೆ ನೀಡಿರುವ ಸ್ವಾಮಿ ಪ್ರಸಾದ್​ ಮೌರ್ಯ ಬಿಜೆಪಿಗೆ ಮರಳುವ ಸಾಧ್ಯತೆ ಹೆಚ್ಚಿದ ಎಂದು ಹೇಳಲಾಗಿದೆ. ಆದರೆ ಮುಂಬರುವ ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಅವರು ತಮ್ಮದೇ ಆದ ಹೊಸದೊಂದು ರಾಜಕೀಯ ಪಕ್ಷವನ್ನು ಘೋಷಿಸುವ ಸಾಧ್ಯತೆ ದಟ್ಟವಾಗಿದೆ.

  ಫೆಬ್ರವರಿ 22 ರಂದು ದೆಹಲಿಯ ಟಾಲ್ಕಟೋರಾ ಸ್ಟೇಡಿಯಂನಲ್ಲಿ ತಮ್ಮ ಹೊಸ ಪಕ್ಷವನ್ನು ಘೋಷಿಸಬಹುದು ಎನ್ನಲಾಗುತ್ತಿದೆ. ಮಾಹಿತಿ ಪ್ರಕಾರ ಸ್ವಾಮಿ ಪ್ರಸಾದ್ ಮೌರ್ಯ ತಮ್ಮ ಹೊಸ ಪಕ್ಷಕ್ಕೆ ರಾಷ್ಟ್ರೀಯ ಶೋಷಿತ್ ಸಮಾಜ ಪಕ್ಷ ಎಂದು ಹೆಸರಿಟ್ಟಿರುವುದಾಗಿ ತಿಳಿದು ಬಂದಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts