More

    ಭಾರತ ಹಿಂದೂ ರಾಷ್ಟ್ರವಲ್ಲ ಎಂದಿಗೂ ಹಿಂದೂ ರಾಷ್ಟ್ರವಾಗಿರಲಿಲ್ಲ: ಸ್ವಾಮಿ ಪ್ರಸಾದ್​ ಮೌರ್ಯ

    ಲಖನೌ: ಭಾರತ ಎಂದಿಗೂ ಹಿಂದೂ ರಾಷ್ಟ್ರವಲ್ಲ ಮತ್ತು ಎಂದಿಗೂ ಹಿಂದೂ ರಾಷ್ಟ್ರವಾಗಿರಲಿಲ್ಲ ಎಂದು ಸಮಾಜವಾದಿ ಪಕ್ಷದ ನಾಯಕ, ಉತ್ತರಪ್ರದೇಶ ಸರ್ಕಾರದ ಮಾಜಿ ಸಚಿವ ಸ್ವಾಮಿ ಪ್ರಸಾದ್​ ಮೌರ್ಯ ಹೇಳಿದ್ದಾರೆ.

    ಇತ್ತೀಚಿಗೆ ಕಾರ್ಯಕ್ರಮ ಒಂದರಲ್ಲಿ ಮಾತನಾಡುವ ವೇಳೆ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್​ ಭಾರತ ಹಿಂದೂ ರಾಷ್ಟ್ರವಾಗಿದ್ದು, ಎಲ್ಲಾ ಭಾರತೀಯರು ಹಿಂದೂಗಳನ್ನು ಪ್ರತಿನಿಧಿಸುತ್ತಾರೆ ಎಂದು ಹೇಳಿದ್ದರು.

    ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು ನಮ್ಮ ದೇಶದ ಸಂವಿಧಾನವು ಜಾತ್ಯಾತೀತ ರಾಷ್ಟ್ರದ ಪರಿಕಲ್ಷನೆಯಲ್ಲಿ ರಚಿಸಲಾಗಿದೆ. ಭಾರತದಲ್ಲಿರುವ ಎಲ್ಲರೂ ಭಾರತೀಯರು. ನಮ್ಮ ದೇಶದ ಸಂವಿಧಾನವು ಎಲ್ಲಾ ಜಾತಿ, ಧರ್ಮ, ಪಂಗಡ ಮತ್ತು ಸಂಸ್ಕೃತಿಯನ್ನು ಪ್ರತಿನಿಧಿಸುತ್ತದೆ ಎಂದು ಆರ್​ಎಸ್​ಎಸ್​ ಮುಖ್ಯಸ್ಥರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

    ಇದನ್ನೂ ಓದಿ: ಗದರ್​-2 ಚಿತ್ರಕ್ಕೆ ಆಸ್ಕರ್​ ಪ್ರಶಸ್ತಿ ಪಡೆದುಕೊಳ್ಳುವ ಎಲ್ಲಾ ಅರ್ಹತೆಗಳಿವೆ: ನಿರ್ದೇಶಕ ಅನಿಲ್​ ಶರ್ಮಾ

    2017ರಿಂದ 22ರವರೆಗೆ ಯೋಗಿ ಆದಿತ್ಯನಾಥ್​ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಸ್ವಾಮಿಪ್ರಸಾದ್​ ಮೌರ್ಯ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಎಸ್​ಪಿ ಸೇರ್ಪಡೆಯಾಗಿದ್ದರು. ಎಸ್​ಪಿಯಿಂದ ಸ್ಪರ್ಧಿಸಿದ್ದ ಅವರು ಹೀನಾಯವಾಗಿ ಸೋಲುಂಡಿದ್ದರು.

    ಭಾರತ ಹಿಂದೂ ರಾಷ್ಟ್ರ ಮತ್ತು ಈ ವಿಚಾರ ಸತ್ಯ. ಸೈದ್ಧಾಂತಿಕವಾಗಿ ಎಲ್ಲಾ ಭಾರತೀಯರು ಹಿಂದೂಗಳು ಮತ್ತು ಹಿಂದೂಗಳೆಂದರೆ ಎಲ್ಲಾ ಭಾರತೀಯರು. ಇಂದು ಭಾರತದಲ್ಲಿರುವವರು ಹಿಂದೂ ಭೂಮಿ ಮತ್ತು ಸಂಸ್ಕೃತಿಗೆ ಸಂಬಂಧಿಸಿದವರು. ಇವುಗಳನ್ನೂ ಹೊರತುಪಡಿಸಿ ಬೇರೇನು ಇಲ್ಲ ಎಂದು ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್​ ಹೇಳಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts