More

    ವಿವೇಕಾನಂದರ ಆದರ್ಶ ಮೈಗೂಡಿಸಿಕೊಳ್ಳಿ

    ಕೆ.ಆರ್.ನಗರ: ಇಡೀ ವಿಶ್ವಕ್ಕೆ ಹಾಗೂ ಯುವ ಜನತೆಗೆ ಉತ್ತಮ ಸಂದೇಶ ನೀಡಿದ ಕೀರ್ತಿ ಸ್ವಾಮಿ ವಿವೇಕಾನಂದರಿಗೆ ಸಲ್ಲುತ್ತದೆ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

    ಪಟ್ಟಣದ ಭಾರತಿ ವಿದ್ಯಾಸಂಸ್ಥೆ ಮತ್ತು ಭಾರತ್ ವಿಕಾಸ್ ಪರಿಷತ್ ಸಹಯೋಗದಲ್ಲಿ ಮಹಾತ್ಮ ಗಾಂಧಿ ಉದ್ಯಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಸ್ವಾಮಿ ವಿವೇಕಾನಂದರ ಬದುಕು ನಮ್ಮೆಲ್ಲರಿಗೂ ಸ್ಫೂರ್ತಿಯಾಗಿದೆ ಎಂದರು. ವಿವೇಕಾನಂದರ ಹೋರಾಟ ಮನೋಭಾವ, ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಂಡು ಉತ್ತಮ ಶಿಕ್ಷಣ ಪಡೆದು ಉನ್ನತ ಸ್ಥಾನಮಾನ ಅಲಂಕರಿಸಿ ಹೆತ್ತವರು, ಹುಟ್ಟಿದ ಊರು, ಕಲಿಸಿದ ಶಾಲೆಗೆ ಕೀರ್ತಿ ತರಬೇಕು ಎಂದು ಕರೆ ನೀಡಿದರು.

    ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಕಾವಿ ವಸ್ತ್ರ ಹಾಗೂ ಸ್ವಾಮಿ ವಿವೇಕಾನಂದರ ಉಡುಪು ಧರಿಸಿದ್ದ ನೂರಾರು ವಿದ್ಯಾರ್ಥಿಗಳು ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಗಮನ ಸೆಳೆದರು. ನಿವೃತ್ತ ದಂಡಾಧಿಕಾರಿ ಡಾ.ವಿ.ರಂಗನಾಥ್, ಭಾರತಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಡಾ.ಎನ್.ಡಿ.ಜಗನ್ನಾಥ್, ಕಾರ್ಯದರ್ಶಿ ಡಾ.ಪಿ.ಮೋಹನ್ ದಾಸ್ ಭಟ್, ಶ್ರೀ ಕೃಷ್ಣ ಮಂದಿರ ವ್ಯವಸ್ಥಾಪಕ ಕೃಷ್ಣಭಟ್, ಭಾರತಿ ವಿದ್ಯಾಸಂಸ್ಥೆಯ ಖಜಾಂಚಿ ಶೋಭಾ ವೃಷಿಕೇಶ್, ಭಾರತ್ ವಿಕಾಸ್ ಪರಿಷತ್ ತಾಲೂಕು ಅಧ್ಯಕ್ಷ ನಾಗರಾಜು, ಕಾರ್ಯದರ್ಶಿ ಚಂದ್ರು, ಖಜಾಂಚಿ ಪಂಕಜ್ ಜೈನ್, ಸಂಸ್ಥೆಯ ಪ್ರೌಢಶಾಲಾ ಮುಖ್ಯಶಿಕ್ಷಕ ಎಂ.ಅಶೋಕ್, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಸಿದ್ದವೀರಪ್ಪ, ಸೂರ್ಯ ಕಾಂಡಿಮೆಂಟ್ ಮಾಲೀಕ ವೆಂಕಟೇಶ್ ಇನ್ನಿತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts