More

    ಯುವ ಸಮೂಹದಿಂದ ಬದಲಾವಣೆ ಸಾಧ್ಯ

    ಕೆ.ಆರ್.ನಗರ: ಯುವಜನತೆ ನಾಯಕತ್ವದ ಗುಣ ಮೈಗೂಡಿಸಿಕೊಂಡು ಸಾಮಾಜಿಕ ಜವಾಬ್ದಾರಿ ಅರಿತು ನಡೆದರೆ ಬಲಿಷ್ಠ ರಾಷ್ಟ್ರ ಕಟ್ಟಲು ಸಾಧ್ಯ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶೆ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಆರ್.ಪವಿತ್ರಾ ಹೇಳಿದರು.

    ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ಆಡಳಿತ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಬಾಲ ಕಾರ್ಮಿಕರ ಯೋಜನಾ ಸೊಸೈಟಿ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ರಾಷ್ಟ್ರೀಯ ಯುವ ದಿನ ಆಚರಣೆ ಅಂಗವಾಗಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಸ್ವಾಮಿ ವಿವೇಕಾನಂದರು ಸಮಾಜಕ್ಕೆ ನೀಡಿದ ಕೊಡುಗೆಗಳು ಅಪಾರ. ಅವರ ಜನ್ಮ ದಿನವನ್ನು ನಾವು ರಾಷ್ಟ್ರೀಯ ಯುವ ದಿನ ಎಂದು 1985ರಿಂದ ಆಚರಿಸಿಕೊಂಡು ಬರುತ್ತಿದ್ದೇವೆ. ನಾವೆಲ್ಲರೂ ಅವರ ಆದರ್ಶಗಳನ್ನು ಅಳವಡಿಸಿಕೊಂಡು ಕಾರ್ಯರೂಪಕ್ಕೆ ತರಬೇಕಿದೆ. ನಮ್ಮ ಆಲೋಚನೆಗಳೇ ನಮ್ಮನ್ನು ರೂಪಿಸುತ್ತವೆ. ನಾವು ಏನನ್ನು ಯೋಚಿಸುತ್ತೇವೋ ಅದರ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಯುವ ಸಮೂಹದಿಂದ ಬದಲಾವಣೆ ಸಾಧ್ಯ ಎಂದು ತಿಳಿಸಿದರು.

    ಕೆ.ಆರ್.ನಗರ ಪಟ್ಟಣದಲ್ಲಿ ಬೈಕ್‌ನಲ್ಲಿ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಅಪ್ರಾಪ್ತರು ವಾಹನಗಳನ್ನು ಚಲಾಯಿಸುತ್ತಿದ್ದು, ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಅಪ್ರಾಪ್ತರು ಮಾಡುವ ತಪ್ಪಿಗೆ ಅವರ ಪಾಲಕರೇ ನೇರ ಹೊಣೆಗಾರರಾಗಿದ್ದು, ನ್ಯಾಯಾಲಯ ನಿಗದಿಪಡಿಸಿದ ದಂಡ ಕಟ್ಟಬೇಕಾಗುತ್ತದೆ. ಆದ್ದರಿಂದ ಪಾಲಕರು ತಮ್ಮ ಮಕ್ಕಳಿಗೆ ಚಾಲನಾ ಪರವಾನಗಿ, ವಿಮೆ ಇಲ್ಲದೇ ವಾಹನ ಚಲಾಯಿಸಲು ಬಿಡಬೇಡಿ ಎಂದು ಕಿವಿಮಾತು ಹೇಳಿದರು.

    ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ.ಬಿ.ಎಸ್.ಜಯ, ಸಿಡಿಪಿಒ ಅಣ್ಣಯ್ಯ, ಹಿರಿಯ ಕಾರ್ಮಿಕ ನಿರೀಕ್ಷಕಿ ಬಿ.ಮಂಗಳಗೌರಿ, ವಕೀಲ ಕೆ.ಎನ್.ರಾಮಚಂದ್ರರಾವ್ ಮಾತನಾಡಿದರು. ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಎಚ್.ಪಿ.ಮಲ್ಲಿಕಾರ್ಜುನ, ಎಎಸ್‌ಐ ಎಚ್.ಪಿ.ಸುರೇಶ್, ಉಪನ್ಯಾಸಕರಾದ ಡಾ.ಪ್ರಭು, ಎಸ್.ಎಸ್.ಮೇಘನಾ, ಇಸಿಒ ಜಗದೀಶ್, ಕಾರ್ಮಿಕ ಇಲಾಖೆ ಡಿಇಒ ಚಂದ್ರಕಾಂತ್, ಶ್ರೀ ವೀರಭದ್ರೇಶ್ವರ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಸ್.ನಟರಾಜ್, ನಿಲಯ ಪಾಲಕ ಸಿದ್ದರಾಜು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts