More

    ನೇರಳಕುಪ್ಪೆ ಶಾಲೆಯಲ್ಲಿ ವಿವೇಕಾನಂದರ ಜಯಂತಿ

    ಹನಗೋಡು : ಹೋಬಳಿಯ ನೇರಳಕುಪ್ಪೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಸ್ವಾಮಿ ವಿವೇಕಾನಂದರ ಜಯಂತಿ ಆಚರಿಸಲಾಯಿತು.
    ಶಿಕ್ಷಕಿ ಪ್ರೀತಿ ಅವರು ಸ್ವಾಮಿ ವಿವೇಕಾನಂದರ ಜನನ, ಜೀವನ ಮತ್ತು ಸಾಧನೆ ಕುರಿತು ಮಾತನಾಡಿ, ವಿವೇಕಾನಂದ ಅವರು ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲದೃಷ್ಟಿಯ ಸಂಕೇತವಾಗಿ ಪರಿಗಣಿತರಾಗಿದ್ದಾರೆ. ವಿವೇಕಾನಂದರ ತತ್ವಾದರ್ಶಗಳು ಭಾರತೀಯ ಯುವಕರಿಗೆ ಸ್ಫೂರ್ತಿಯ ದೊಡ್ಡ ಮೂಲವಾಗಬಹುದು ಎಂಬ ಕಾರಣಕ್ಕಾಗಿ ಸರ್ಕಾರ ಇವರ ಜನ್ಮ ದಿನವನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸುತ್ತಿದೆ ಎಂದರು.
    ಮುಖ್ಯ ಶಿಕ್ಷಕ ಕುಮಾರಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರಾದ ಉಮಾ, ಲಕ್ಷ್ಮಣ, ಮಾಲಿನಿ, ಜಗದೀಶ್, ಪುನೀತ್ ಹಾಗೂ ವಿದ್ಯಾರ್ಥಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts