More

    ಮಾನಸಿಕ ಖಿನ್ನತೆ; ನದಿಗೆ ಹಾರಿ ಸ್ವಾಮೀಜಿ ಸಾವು

    ಮೈಸೂರು: ನದಿಗೆ ಹಾರಿ ಸ್ವಾಮೀಜಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನಲ್ಲಿ ನಡೆದಿದೆ. ನಂಜನಗೂಡಿನ ದೇವನೂರು ಮಠದ ಕಿರಿಯ ಸ್ವಾಮೀಜಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ಎಂದು ತಿಳಿದು ಬಂದಿದೆ.

    ಮೃತರನ್ನು ಶಿವಪ್ಪ ದೇವರು(60) ಎಂದು ಗುರುತಿಸಲಾಗಿದ್ದು, ಟಿ.ನರಸೀಪುರ ತಾಲ್ಲೂಕಿನ ಮುಡುಕುತೊರೆ ಬಳಿ ಇರುವ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದೆರಡು ದಿನಗಳಿಂದ ನಾಪತ್ತೆಯಾಗಿದ್ದರು ಎಂದು ತಿಳಿದು ಬಂದಿದೆ.

    Suicide

    ಇದನ್ನೂ ಓದಿ: ಪಾಕ್​ ಸುಂದರಿಗೆ ಮಾರುಹೋಗಿ BSFನ ಅತಿ ಸೂಕ್ಷ್ಮ ಮಾಹಿತಿ ಸೋರಿಕೆ; ಆರೋಪಿ ಅರೆಸ್ಟ್

    ನಂಜನಗೂಡಿನ ದೇವನೂರು ಮಠದ ಸ್ವಾಮೀಜಿ ಶಿಷ್ಯರಾಗಿದ್ದ ಇವರು ಕಳೆದ ಕೆಲ ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಮಠಕ್ಕೆ ಬರುವ ಭಕ್ತಾದಿಗಳ ಜೊತೆ ಉತ್ತಮ ಒಡನಾಟವನ್ನು ಹೊಂದಿದ್ದರು.

    ಮೂಲತಃ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಕಲಿವೂರು ಗ್ರಾಮದವರಾದ ಇವರು ಕಳೆದ 45 ವರ್ಷಗಳಿಂದ ದೇವನೂರು ಮಠದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ತಲಕಾಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts