ಶಿರೂರು ಸಂತ್ರಸ್ತರಿಗೆ ನ್ಯಾಯ ಕೊಡಿಸುವಂತೆ ಯಡಿಯೂರಪ್ಪ ಅವರಿಗೆ ಮನವಿ

blank

ಕಾರವಾರ: ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾದವರ ಕುಟುಂಬಕ್ಕೆ ನ್ಯಾಯ ಕೊಡಿಸುವಂತೆ ಒತ್ತಾಯಿಸಿ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಅಧ್ಯಕ್ಷ ಹಾಗೂ ರಾಷ್ಟ್ರೀಯ ಈಡಿಗ ಮಹಾ ಮಂಡಳಿಯ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಬೆಂಗಳೂರಿನ ಡಾಲರ್ಸ್ ಕಾಲನಿಯ ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.
ಘಟನೆ ನಡೆದು, 16 ದಿನಗಳು ಕಳೆದಿವೆ. ಇನ್ನೂ ಮೂವರ ಶವ ಸಿಕ್ಕಿಲ್ಲ. ನಾಪತ್ತೆಯಾದ ಜಗನ್ನಾಥ ನಾಯ್ಕ, ಲೋಕೇಶ ನಾಯ್ಕ ಅವರು ತಮ್ಮ ಕುಟುಂಬಕ್ಕೆ ಆಧಾರವಾಗಿದ್ದವರಾಗಿದ್ದರು. ಅವರ ಕುಟುಂಬಗಳು ಅತಂತ್ರವಾಗಿದ್ದು, ಅವರಿಗೆ ನೆರವು ಸಿಕ್ಕಿಲ್ಲ. ಯಾವುದೇ ರಾಜಕಾರಣಿಗಳು ಅವರ ನೆರವಿಗೆ ನಿಂತಿಲ್ಲ. ಹೆದ್ದಾರಿ ಗುತ್ತಿಗೆ ಪಡೆದ ಕಂಪನಿಯು ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂಬುದು ನಮ್ಮ ಒತ್ತಾಯವಾಗಿದೆ. ಕೂಡಲೇ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಕುಟುಂಬ ಸದಸ್ಯರ ಜೊತೆ ಭೇಟಿ ಮಾಡುವೆ. ನ್ಯಾಯ ಸಿಗಲಿಲ್ಲ ಎಂದರೆ ಇದೆ ವಾರದಲ್ಲಿ ದೆಹಲಿಯ ಜಂತರ್ ಮಂತರ್‌ನಲ್ಲಿ ಸಂತ್ರಸ್ತ ಕಟುಂಬಗಳ ಜತೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಸ್ವಾಮಿಗಳು ಎಚ್ಚರಿಸಿದರು ಎಂದು ರಾಷ್ಟ್ರೀಯ ಈಡಿಗ ಮಹಾ ಮಂಡಳಿಯ ಮಂಚೆಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

https://www.vijayavani.net/pitching-collapse-of-foot-bridge-at-kundur
Share This Article

ಈ 3 ನಕ್ಷತ್ರದವರು ಕೋಟೇಶ್ವರ ಯೋಗದೊಂದಿಗೆ ಹುಟ್ತಾರೆ! ಇವರನ್ನು ಅರಸಿ ಬರುತ್ತೆ ಅಪಾರ ಸಂಪತ್ತು | Birth of Stars

Birth of Stars : ಹುಟ್ಟಿದ ತಕ್ಷಣ ಜನ್ಮ ದಿನಾಂಕ ಹಾಗೂ ಹುಟ್ಟಿದ ಗಳಿಗೆಯನ್ನು ಬರೆದಿಡಲಾಗುತ್ತದೆ.…

ನಿಮ್ಮ ಕನಸಿನಲ್ಲಿ ಹಾವು ಕಾಣಿಸಿಕೊಂಡರೆ ಅದರರ್ಥ ಏನು ಗೊತ್ತಾ? ಇಲ್ಲಿದೆ ನೋಡಿ ಅಚ್ಚರಿ ಸಂಗತಿ | Snakes in a Dream

Snakes in a Dream : ಯಾವುದೇ ವ್ಯಕ್ತಿ ನಿದ್ರೆಗೆ ಜಾರಿದಾಗ ಸಹಜವಾಗಿ ಎದುರಾಗುವ ಸಂಗತಿಯೆಂದರೆ,…

ಈ ವಸ್ತುಗಳು ನಿಮ್ಮ ಮನೆಯಲ್ಲಿದ್ದರೆ ಈ ಕೂಡಲೇ ಹೊರಗೆ ಎಸೆಯಿರಿ… ಇಲ್ಲದಿದ್ರೆ ಅಪಾಯ ತಪ್ಪಿದ್ದಲ್ಲ! Household items

Household items : ಎಂದಾದರೂ ಮನೆಯನ್ನು ವಿಷಪೂರಿತಗೊಳಿಸುವ ವಸ್ತುಗಳು ಬಗ್ಗೆ ನೀವು ಯೋಚನೆ ಮಾಡಿದ್ದೀರಾ? ಮಾರುಕಟ್ಟೆಯಲ್ಲಿ…