More

    ಸ್ವರ್ಣವಲ್ಲೀ ಶ್ರೀಗಳ ಚಾತುರ್ಮಾಸ್ಯ ಇಂದಿನಿಂದ

    ಶಿರಸಿ: ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳ 33ನೇ ಚಾತುರ್ಮಾಸ್ಯ ವ್ರತಾಚರಣೆ ಜುಲೈ 3ರಂದು ಆರಂಭವಾಗಿ ಸೆಪ್ಟೆಂಬರ್ 29ರಂದು ಸಂಪನ್ನಗೊಳಗೊಳ್ಳಲಿದೆ.

    ಸೋಮವಾರ ಬೆಳಗ್ಗೆ 10ಕ್ಕೆ ಶ್ರೀಗಳು ವೇದವ್ಯಾಸರ ಪೂಜೆ ನಡೆಸಿ ವ್ರತ ಸಂಕಲ್ಪ ಮಾಡಲಿದ್ದಾರೆ. ಬಳಿಕ ಸಮಸ್ತ ಶಿಷ್ಯರ ಪರವಾಗಿ ಪಾದುಕಾ ಪೂಜೆ ನಡೆಯಲಿದೆ. ಚಾತುರ್ಮಾಸ್ಯ ಅವಧಿಯಲ್ಲಿ ಶಿಷ್ಯರು ಮಠಕ್ಕೆ ಆಗಮಿಸಿ ಗುರು ಸೇವೆ ನಡೆಸಲಿದ್ದಾರೆ. ಪ್ರತಿ ದಿನ ಪುರಾಣ-ಪಾರಾಯಣ, ಪ್ರವಚನಗಳು ನಡೆಯಲಿವೆ.

    ಶ್ರಿಗಳ ಚಾತುರ್ಮಾಸ್ಯ ಆರಂಭದ ಹಿನ್ನೆಲೆಯಲ್ಲಿ ಜು.3ರಂದು ಸಂಜೆ 4ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ. ಅತಿಥಿಗಳಾಗಿ ಶಾಸಕ ಶಿವರಾಮ ಹೆಬ್ಬಾರ್, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ ಹಾರ್ನಳ್ಳಿ ಪಾಲ್ಗೊಳ್ಳುವರು.

    ಖ್ಯಾತ ವೈದ್ಯ ದಾವಣಗೆರೆಯ ಡಾ. ಎಸ್.ಆರ್. ಹೆಗಡೆ, ವೇ. ಗಜಾನನ ಹಿರೇ ಭಟ್ಟ ಗೋಕರ್ಣ, ರಘುಪತಿ ಎನ್. ಭಟ್ಟ ಸುಗಾವಿ, ಶ್ರೀನಿವಾಸ ಹೆಬ್ಬಾರ್ ಅವರನ್ನು ಶ್ರೀಗಳು ಗೌರವಿಸಲಿದ್ದಾರೆ. ಶ್ರೀಗಳು ಬರೆದ ಲೇಖನಗಳ ಸಂಕಲನ ಗುರುವಾಣಿ ಕೃತಿ ಬಿಡುಗಡೆ ಕೂಡ ಆಗಲಿದೆ ಎಂದು ಮಠದ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್. ಹೆಗಡೆ ಬೊಮ್ಮನಳ್ಳಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts