ವಿದ್ಯಾರ್ಥಿ ಜೀವನದಲ್ಲಿ ಕ್ರಿಯಾಶೀಲ ಹವ್ಯಾಸ

swasthya
ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜರುಗಿದ ಸ್ವಾಸ್ಥೃ ಸಂಕಲ್ಪ ಕಾರ್ಯಕ್ರಮವನ್ನು ಸುಧಾಕರ ಆಚಾರ್ಯ ಉದ್ಘಾಟಿಸಿದರು
Published on

ಗಂಗೊಳ್ಳಿ: ದುಶ್ಚಟಗಳಿಂದ ಯುವ ಜನತೆ ಜೀವನ ಹಾಳಾಗುತ್ತಿದೆ. ಇದು ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಹಾಗಾಗಿ ವಿದ್ಯಾರ್ಥಿ ಜೀವನದ ದೆಸೆಯಿಂದಲೇ ಕ್ರಿಯಾಶೀಲ ಹವ್ಯಾಸ ರೂಢಿಸಿಕೊಂಡು ಉತ್ತಮ ಸಮಾಜ ಕಟ್ಟುವ ಕಾರ್ಯಕ್ರಮಕ್ಕೆ ದೃಢ ಸಂಕಲ್ಪ ಕೈಗೊಳ್ಳಬೇಕು ಎಂದು ಉಪನ್ಯಾಸಕ ನರೇಂದ್ರ ಎಸ್.ಗಂಗೊಳ್ಳಿ ಹೇಳಿದರು.

ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಸ್ವಾಸ್ಥೃ ಸಂಕಲ್ಪ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸುಧಾಕರ ಆಚಾರ್ಯ ತ್ರಾಸಿ ಕಾರ್ಯಕ್ರಮ ಉದ್ಘಾಟಿಸಿದರು. ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಸದಸ್ಯ ಬಿ.ರಾಘವೇಂದ್ರ ಪೈ, ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ಮುಖ್ಯಶಿಕ್ಷಕ ರಾಘವೇಂದ್ರ ಶೇರುಗಾರ್ ಮತ್ತು ತ್ರಾಸಿ ವಲಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಪ್ರಮೀಳಾ ಗಾಣಿಗ ಶುಭಾಶಂಸನೆಗೈದರು. ಗಂಗೊಳ್ಳಿ ಎಂ.ಜಿ. ಬಂದರು ಒಕ್ಕೂಟದ ಅಧ್ಯಕ್ಷೆ ಬೇಬಿ, ಸೇವಾ ಪ್ರತಿನಿಧಿಗಳಾದ ಸರಸ್ವತಿ, ವನಜಾ ಪೂಜಾರಿ, ರತ್ನಿ, ರಾಧಾ ಪೂಜಾರಿ ಉಪಸ್ಥಿತರಿದ್ದರು. ತ್ರಾಸಿ ವಲಯ ಮೇಲ್ವಿಚಾರಕ ಚಂದ್ರು ಕಾರ್ಯಕ್ರಮ ನಿರೂಪಿಸಿದರು.

ಉತ್ತಮ ಆರೋಗ್ಯ ಇದ್ದರೆ ಏನನ್ನಾದರೂ ಸಾಧಿಸಬಹುದು. ಹಾಗಾಗಿ ಯಾರು ದುಶ್ವಟಗಳಿಗೆ ಬಲಿಯಾಗಬಾರದು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನಜಾಗೃತಿ ಕಾರ್ಯಕ್ರಮದಡಿ ದುಶ್ಚಟ ಮುಕ್ತ ಸಮಾಜದ ನಿರ್ಮಾಣ ನಮ್ಮೆಲ್ಲರ ಹೊಣೆ ಎಂಬ ಧ್ಯೇಯದೊಂದಿಗೆ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಕುರಿತು ಸ್ವಾಸ್ಥೃ ಸಂಕಲ್ಪ ಕಾರ್ಯಕ್ರಮದ ಮೂಲಕ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ.-ಸುಧಾಕರ ಆಚಾರ್ಯ ತ್ರಾಸಿ, ಅಧ್ಯಕ್ಷ ಬೈಂದೂರು ತಾಲೂಕು ಜನಜಾಗೃತಿ ವೇದಿಕೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net