ವಿಜಯವಾಣಿ ಸುದ್ದಿಜಾಲ ಬಂಟ್ವಾಳ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಪಾಣೆಮಂಗಳೂರು ವಲಯ, ಬಿ.ಮೂಡ ಸರ್ಕಾರಿ ಪದವಿ ಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಬಿ.ಮೂಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.
ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಮೆಲ್ಕಾರ್ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಜಗದೀಶ್ ನೆಲ್ಲಿಕಟ್ಟೆ ಭಾಗವಹಿಸಿದ್ದರು. ಹಿರಿಯ ಉಪನ್ಯಾಸಕ ದಾಮೋದರ ಅಧ್ಯಕ್ಷತೆ ವಹಿಸಿದ್ದರು.
ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ರೋನಾಲ್ಡ್ ಡಿಸೋಜ, ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ, ಒಕ್ಕೂಟದ ಅಧ್ಯಕ್ಷ ವಸಂತಿ ಗಂಗಾಧರ್, ಜನಜಾಗೃತಿ ಸದಸ್ಯ ಡಾ.ಜಗದೀಶ್ ಭಟ್ ಉಪಸ್ಥಿತರಿದ್ದರು.
ಸೇವಾಪ್ರತಿನಿಧಿ ಸುಲೋಚನಾ ಸ್ವಾಗತಿಸಿದರು. ಎನ್‌ಎಸ್‌ಎಸ್ ಯೋಜನಾಧಿಕಾರಿ ಬಾಲಕೃಷ್ಣ ನಾಯ್ಕ ವಂದಿಸಿದರು. ವಲಯ ಮೇಲ್ವಿಚಾರಕಿ ಅಮಿತಾ ಕಾರ್ಯಕ್ರಮ ನಿರೂಪಿಸಿದರು.