ಕಾಸರಗೋಡು: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಾಸರಗೋಡು ವಲಯದ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಕಾಸರಗೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಜರುಗಿತು.

ಕಾಸರಗೋಡು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಅಖಿಲೇಶ್ ನಗುಮುಗಂ ಉದ್ಘಾಟಿಸಿದರು. ರಾಜನ್ ಮುಳಿಯಾರ್ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.
ಶಾಲಾ ಪಿಟಿಎ ಅಧ್ಯಕ್ಷ ಅಬೂಬಕರ್ ಸಿದ್ಧಿಕ್, ಕಾರ್ಯದರ್ಶಿ ಉದಯ ಕುಮಾರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಸರಗೋಡು ವಲಯ ಅಧ್ಯಕ್ಷ ಜ್ಞಾನೇಶ್ ಆಚಾರ್ಯ, ಕುತ್ಯಾಳ ನವಜೀವನ ಸಮಿತಿ ಅಧ್ಯಕ್ಷ ಉದಯಕುಮಾರ್, ಗೌರವಾಧ್ಯಕ್ಷ ಪದ್ಮನಾಭ ಆಚಾರ್ಯ, ಕಾಸರಗೋಡು ವಲಯ ಮೇಲ್ವಿಚಾರಕಿ ಶ್ರೀಮತಿ, ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.