

ಕೊಕ್ಕಡ: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ ಸಹಯೋಗದೊಂದಿಗೆ ಶ್ರೀರಾಮ ವಿದ್ಯಾಸಂಸ್ಥೆ ಪಟ್ಟೂರಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಶಿಬಿರಾಧಿಕಾರಿಗಳು ನಂದಕುಮಾರ್, ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಆಶಯ ಹಾಗೂ ಸಂಸ್ಕಾರ ಜೀವನ ನಡೆಸಲು ಪೂರಕವಾಗಿ ತಮ್ಮಲ್ಲಿ ಬೆಳೆಸಿಕೊಳ್ಳಬೇಕಾದ ಆದರ್ಶಗಳ ಬಗ್ಗೆ ತಿಳಿಸಿದರು.
ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಶ್ರೀರಾಮ ವಿದ್ಯಾಸಂಸ್ಥೆ ಪಟ್ಟೂರು ಸಂಚಾಲಕರು ಪ್ರಶಾಂತ್ ಶೆಟ್ಟಿ ದೇರಾಜೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಕ್ಕಡ ವಲಯ ಮೇಲ್ವಿಚಾರಕಿ ಭಾಗೀರಥಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕೊಕ್ಕಡ ವಲಯ ವಲಯಾಧ್ಯಕ್ಷ ಸೇಸಪ್ಪ ಮೂಲ್ಯ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೇವಾ ಪ್ರತಿನಿಧಿ ಸದಾಶಿವ ಹಾಗೂ ಮುಖ್ಯಶಿಕ್ಷಕ ಚಂದ್ರಶೇಖರ್ ಶೇಟ್ ಉಪಸ್ಥಿತರಿದ್ದರು.